ಕೋವಿಡ್ ಪರೀಕ್ಷೆಗೆ ಅಲೆದಾಟ
Team Udayavani, Jan 5, 2021, 1:30 PM IST
ಸಿರವಾರ: ಕೋವಿಡ್-19ನಿಂದಾಗಿ ಅನೇಕ ತಿಂಗಳುಗಳಿಂದಬಂದಾಗಿದ್ದ ಶಾಲಾ-ಕಾಲೇಜುಗಳು ಪ್ರಾರಂಭವಾಗಿದ್ದು, ಕೊರೊನಾಪರೀಕ್ಷೆ ಕಡ್ಡಾಯವಾಗಿರುವುದರಿಂದ ವಿದ್ಯಾರ್ಥಿಗಳು ಆಸ್ಪತ್ರೆಗೆ ಅಲೆದಾಡುವಂತಾಗಿದೆ.
ರಾಜ್ಯ ಸರ್ಕಾರವು ಪೂರ್ವ ತಯಾರಿಯೊಂದಿಗೆ ಶಾಲಾ-ಕಾಲೇಜುಗಳನ್ನು ಆರಂಭಿಸಿದ್ದು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆ ಕಡ್ಡಾಯಗೊಳಿಸಿ ಆದೇಶಿಸಿರುವುದು ಸಮಸ್ಯೆಗೆ ಕಾರಣವಾಗಿದೆ. ಪಟ್ಟಣದಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದಿನಕ್ಕೆ 50 ಜನರಿಗೆ ಮಾತ್ರ ಕೋವಿಡ್ ಪರೀಕ್ಷೆ ಮಾಡುತ್ತಿದ್ದು, ತಾಲೂಕಿನ ವಿದ್ಯಾರ್ಥಿಗಳು, ಶಿಕ್ಷಕರು ದಿನನಿತ್ಯ ಆಸ್ಪತ್ರೆಗೆ ಅಲೆದಾಡುತ್ತಿದ್ದಾರೆ.
ನೋಂದಣಿ ಸಮಸ್ಯೆ: ಬೆಳಗ್ಗೆ ಆಸ್ಪತ್ರೆಯಲ್ಲಿ ಆನ್‌ಲೈನ್ ದಾಖಲಾತಿ ಇರುವುದರಿಂದಅನೇಕ ವಿದ್ಯಾರ್ಥಿಗಳುಮೊಬೈಲ್ ಇಲ್ಲದೆ ಆಸ್ಪತ್ರೆಯಿಂದವಾಪಸ್ಸಾಗುತ್ತಿದ್ದಾರೆ. ಕೆಲವರುನೆಟ್‌ವರ್ಕ್ ಸಮಸ್ಯೆಯಿಂದ ಮೊಬೈಲ್‌ಗೆ ಒಟಿಪಿ ಬರದೇ ಚಿಂತೆಗೆ ಈಡಾಗುವಂತಾಗಿದೆ.
ನನ್ನ ಮಗನಿಗೆ ಕೊವೀಡ್‌ಪರೀಕ್ಷೆ ಮಾಡಿಸಲು 2 ದಿನದಿಂದ ಬರುತ್ತಿದ್ದು, ಹೆಸರುನೋಂದಾಯಿಸದೆ ವಾಪಸ್ ಹೋಗುತ್ತಿದ್ದೇವೆ. ಸರ್ಕಾರಇನ್ನು ಹೆಚ್ಚು ಜನರಿಗೆ ಪರೀಕ್ಷೆಮಾಡುವ ವ್ಯವಸ್ಥೆ ಮಾಡಬೇಕು. ಪ್ರಭುಲಿಂಗ, ವಿದ್ಯಾರ್ಥಿಯ ತಂದೆ
ಕುಡಿವ ನೀರು ಕಾಮಗಾರಿಗೆ ಚಾಲನೆ :
ರಾಯಚೂರು: ತಾಲ್ಲೂಕಿನ ಗುಂಜಳ್ಳಿ ಗ್ರಾಮದಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯಿಂದ1.45 ಕೋಟಿ ವೆಚ್ಚದಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ಗ್ರಾಮದಲ್ಲಿ ಪೈಪ್‌ಲೈನ್ ಹಾಗೂ ಪ್ರತಿ ಮನೆಗೂ ನಳಗಳ ಸಂಪರ್ಕ ಕಲ್ಪಿಸುವಕಾಮಗಾರಿಗಳಿಗೆ ಗ್ರಾಮೀಣ ಶಾಸಕಬಸನಗೌಡ ದದ್ದಲ್ ಸೋಮವಾರ ಚಾಲನೆ ನೀಡಿದರು.
ಇದೇ ವೇಳೆ ಹಂಚಿನಾಳ ಗ್ರಾಮದಲ್ಲಿ 14 ವೆಚ್ಚದಲ್ಲಿ ಜಲಜೀವನ್‌ಮಿಷನ್ ಯೋಜನೆಯಡಿ ನಳಗಳಸಂಪರ್ಕ ಕಲ್ಪಿಸುವ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದರು.ನಂತರ ಮಾತನಾಡಿದ ಶಾಸಕಬಸನಗೌಡ ದದ್ದಲ್ ಅವರು, ಮುಂದಿನ ದಿನಗಳಲ್ಲಿ ಎಲ್ಲಮನೆಗಳಿಗೂ ಶಾಶ್ವತ ಕುಡಿಯುವನೀರು ಸರಬರಾಜು ಮಾಡಲಾಗುತ್ತದೆ.ಸಾರ್ವಜನಿಕರು ಅನಾವಶ್ಯಕವಾಗಿನೀರನ್ನು ವ್ಯರ್ಥವಾಗಿ ಹರಿಸದಂತೆ ಮಿತವಾಗಿ ಬಳಕೆ ಮಾಡಬೇಕು ಎಂದು ಕರೆ ನೀಡಿದರು.
ಒಂದು ಕೋಟಿ ವೆಚ್ಚದಲ್ಲಿಆರೋಗ್ಯ ಇಲಾಖೆಯಿಂದನಿರ್ಮಿಸಿದ ಪ್ರಾಥಮಿಕ ಆರೋಗ್ಯಕೇಂದ್ರದ ವಸತಿಗೃಹವನ್ನು ಶಾಸಕ ಬಸನಗೌಡ ಉದ್ಘಾಟಿಸಿದರು.ಮುಖಂಡರಾದ ಶರತಚಂದ್ರರೆಡ್ಡಿ, ಹರಿಶ್ಚಂದ್ರರೆಡ್ಡಿ, ಶ್ರೀನಿವಾಸ, ದಶರಥ ರೆಡ್ಡಿ, ಮಲ್ಲಿಕಾರ್ಜುನಗೌಡ,ಜನಾರ್ದನಗೌಡ, ಕಿಶೋರ ಕುಮಾರ, ಕರಿಯಪ್ಪ ಹಾಗೂ ಗ್ರಾಪಂ ನೂತನ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Negotiation: ಹೆಬ್ಬಾಳ್ಕರ್-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ
ಲೋಕ ಚುನಾವಣೆಯಲ್ಲಿ ಪುರುಷರಗಿಂತ ಸ್ತ್ರೀಯರಿಗಿಂತ ಹೆಚ್ಚು ಮತದಾನ: ಚು.ಆಯೋಗ
Daily Horoscope: ಧೈರ್ಯವನ್ನು ಕುಗ್ಗಿಸುವ ವಿದ್ಯಮಾನಗಳು, ವ್ಯಾಪಾರಿ ಗಳಿಗೆ ನಿರೀಕ್ಷಿತ ಲಾಭ
ಲಾಂಛನ ದುರ್ಬಳಕೆಗೆ 5 ಲಕ್ಷ ದಂಡ, ಜೈಲು? ಕಾನೂನು ತಿದ್ದುಪಡಿಗೆ ಕೇಂದ್ರ ಸರ್ಕಾರ ಚಿಂತನೆ
Poster Dispute: ಭಾರತ ಭೂಶಿರ ವಿರೂಪ: ಬಿಜೆಪಿಯ ಇಂದಿನ ಪ್ರತಿಭಟನೆ ರದ್ದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.