ವ್ಯಾಕ್ಸಿನ್‌ನಿಂದ ದೂರವೇ ಉಳಿದ ವಾರಿಯರ್ಸ್!
Team Udayavani, Feb 1, 2021, 3:49 PM IST
ರಾಯಚೂರು: ಜಿಲ್ಲೆಯಲ್ಲಿ ಮೊದಲ ಹಂತದ ಕೋವಿಡ್ ವ್ಯಾಕ್ಸಿನ್ ವಿತರಣೆಗೆ ನಿರೀಕ್ಷಿತ ಪ್ರಮಾಣದ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ. ಲಸಿಕೆ ಪಡೆಯಲು ಕೊರೊನಾ ವಾರಿಯರ್ಗಳೇ ಹಿಂದೇಟಾಕುತ್ತಿದ್ದು, ಈವರೆಗೆ ಕೇವಲ ಶೇ.52 ಮಾತ್ರ ಗುರಿ ಸಾಧನೆಯಾಗಿದೆ. ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ 18,310 ಡೋಸ್ ವ್ಯಾಕ್ಸಿನ್ ಬಂದಿದ್ದರೆ; ಜ.28ರವರೆಗೆ 11,610 ಡೋಸ್ ಮಾತ್ರ ವಿತರಣೆ ಮಾಡಲಾಗಿದೆ.
ಆರೋಗ್ಯ ಇಲಾಖೆಯಲ್ಲಿ ಸ್ಥಾಪಿಸಿದ ಸಂಗ್ರಹಾಗಾರದಲ್ಲಿ ಇನ್ನೂ 6700 ಡೋಸ್ ವ್ಯಾಕ್ಸಿನ್ ಉಳಿದಿದೆ. ಖಾಸಗಿಯವರು ಸೇರಿದಂತೆ 15 ಸಾವಿರ ಜನರಿಗೆ ಲಸಿಕೆ ನೀಡುವ ಗುರಿ ಇದ್ದರೆ, ಕೇವಲ 6042 ಜನರಿಗೆ ಮಾತ್ರ ನೀಡಲಾಗಿದೆ. ಮೊದಲ ಹಂತದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ, ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಲಸಿಕೆ ನೀಡಲಾಗಿತ್ತು. ಆರೋಗ್ಯ ಇಲಾಖೆ ಸಿಬ್ಬಂದಿ ಲಸಿಕೆ ಪಡೆದರೆ, ಅಂಗನವಾಡಿ, ಆಶಾ ಕಾರ್ಯಕರ್ತೆಯರು ಲಸಿಕೆ ಪಡೆಯಲು ಹಿಂದೇಟು ಹಾಕಿದ್ದಾರೆ ಎನ್ನುತ್ತಾರೆ ಇಲಾಖೆ ಅಧಿ ಕಾರಿಗಳು. ಮನವೊಲಿಕೆಗೆ ಯತ್ನ: ಜ.18ರಿಂದ ಜಿಲ್ಲೆಯಲ್ಲಿ ವ್ಯಾಕ್ಸಿನ್ ವಿತರಣೆ ಆರಂಭಿಸಲಾಗಿದೆ.
ರಿಮ್ಸ್ ಆಸ್ಪತ್ರೆ, ಎಲ್ಲ ತಾಲೂಕು ಆರೋಗ್ಯ ಕೇಂದ್ರಗಳ ಜತೆಗೆ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೂ ಲಸಿಕೆ ಹಾಕಲಾಗುತ್ತಿದೆ. ಮೊದಲ ಬಾರಿ ಲಸಿಕೆ ಹಾಕಿಸಿಕೊಂಡವರಲ್ಲಿ ಕೆಲವರಿಗೆ ಜ್ವರ, ನಿಶ್ಯಕ್ತಿ, ಒಂದೆರಡು ದಿನ ನಿದ್ದೆ ಮಂಪರು, ವಾಂತಿ ಭೇದಿ ಯಾಗಿರುವ ವರದಿಯಾಗಿದೆ. ಹೀಗಾಗಿ ಉಳಿದವರು ಲಸಿಕೆ ಹಾಕಿಸಿ ಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಅಲ್ಲದೇ, ಬಿಪಿ, ಶುಗರ್ ಇದ್ದವರು, ಬೇರೆ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದವರು, ಗರ್ಭಿಣಿಯರಿಗೆ ವ್ಯಾಕ್ಸಿನ್ ನೀಡಿಲ್ಲ. ಆಶಾ-ಅಂಗನವಾಡಿ ಕಾರ್ಯಕರ್ತೆಯರೇ ದೂರ ಉಳಿದ ಕಾರಣ ಮಹಿಳಾ ಮತ್ತು ಮಕ್ಕಳ ಇಲಾಖೆ ಉಪನಿರ್ದೇಶಕರ ಗಮನಕ್ಕೆ ತರಲಾಗಿದೆ. ಆರೋಗ್ಯ ಇಲಾಖೆ ಸಿಬ್ಬಂದಿ ಕೂಡ ಲಸಿಕೆ ಬಗ್ಗೆ ತಿಳಿ ಹೇಳಿ ಮನವೊಲಿಕೆಗೆ ಮುಂದಾಗಿದ್ದಾರೆ.
ಎರಡನೇ ಹಂತಕ್ಕೆ ಸಿದ್ಧತೆ:ಈಗಾಗಲೇ ಮೊದಲ ಹಂತದ ಲಸಿಕೆ ವಿತರಣೆ ಮುಕ್ತಾಯ ಹಂತಕ್ಕೆ ಬಂದಿದ್ದು, 28 ದಿನಗಳ ಬಳಿಕ ಎರಡನೇ ಹಂತದ ಲಸಿಕೆ ವಿತರಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮಧ್ಯಂತರದಲ್ಲಿ ಪೋಲಿಯೋ ಲಸಿಕೆ ಅಭಿಯಾನ ಕೂಡ ನಡೆಯುತ್ತಿದ್ದು, ಅದು ಮುಗಿದ ಬಳಿಕ ಎರಡನೇ ಹಂತದ ಲಸಿಕೆ ವಿತರಣೆ ಆರಂಭಿಸಲಾಗುತ್ತಿದೆ. ಮೊದಲ ಹಂತದಲ್ಲಿ ಲಸಿಕೆ ಪಡೆದವರಿಗೆ ಸಂದೇಶ ರವಾನೆಯಾಗುತ್ತಿದ್ದು, ಯಾವ ಕೇಂದ್ರದಲ್ಲಿ ಯಾವ ದಿನಾಂಕದಂದು 2ನೇ ಹಂತದ ಲಸಿಕೆ ಪಡೆಯಬೇಕು ಎಂಬ ಮಾಹಿತಿ ಇರಲಿದೆ. ಮೊದಲ ಹಂತದ ಲಸಿಕೆ ಪಡೆದವರು ಕಡ್ಡಾಯವಾಗಿ ಎರಡನೇ ಹಂತದ ಲಸಿಕೆ ಪಡೆಯಬೇಕು ಎಂದು ನಿರ್ದೇಶನ ನೀಡಲಾಗಿದೆ.
ಸಿದ್ಧಯ್ಯಸ್ವಾಮಿ ಕುಕುನೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ
Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!
Christmas: ಸಿಲಿಕಾನ್ ಸಿಟಿಯಲ್ಲಿ ಕಳೆಗಟ್ಟಿದ ಕ್ರಿಸ್ಮಸ್ ಸಂಭ್ರಮ
INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.