ನೀರು ವಿಷ: ಪತ್ತೆ ಹಚ್ಚುವ ಕಾರ್ಯ ಚುರುಕು

Team Udayavani, Jun 12, 2022, 2:36 PM IST

11water

ರಾಯಚೂರು: ರಾಜ್ಯದ ಗಮನ ಸೆಳೆದಿರುವ ಕಲುಷಿತ ನೀರು ಪ್ರಕರಣ ದಿನೇದಿನೇ ಗಂಭೀರ ಸ್ವರೂಪ ಪಡೆಯುತ್ತಿದ್ದು, ಘಟನೆಗೆ ನಿಖರ ಕಾರಣ ಪತ್ತೆ ಹಚ್ಚುವ ನಿಟ್ಟಿನಲ್ಲಿ ತನಿಖೆಗೆ ಚುರುಕು ನೀಡಲಾಗಿದೆ. ಈ ಕುರಿತು ಹುಬ್ಬಳ್ಳಿಯಲ್ಲಿ ಮುಖ್ಯಮಂತ್ರಿ ಕೂಡ ಪ್ರತಿಕ್ರಿಯೆ ನೀಡಿದ್ದು, ಘಟನೆಗೆ ಕಾರಣವಾದವರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ಹೂಡುವುದಾಗಿ ತಿಳಿಸಿದ್ದಾರೆ.

ಈಗಾಗಲೇ ಜಿಲ್ಲಾಧಿಕಾರಿ ನಗರಸಭೆ ಅಧಿಕಾರಿಗಳ ಜತೆ ನಿರಂತರ ಸಭೆಗಳನ್ನು ನಡೆಸುತ್ತಿದ್ದು, ಕಲುಷಿತ ನೀರು ಪೂರೈಕೆಗೆ ಕಾರಣಗಳನ್ನು ಪತ್ತೆ ಹಚ್ಚುವ ಕಾರ್ಯದಲ್ಲಿ ತೊಡಗಿದ್ದಾರೆ. ಇಷ್ಟು ದಿನ ಇಲ್ಲದೇ ಈಗ ಏಕಾಏಕಿ ನೀರು ವಿಷವಾಗಿ ಪರಿವರ್ತನೆಗೊಳ್ಳಲು ಇನ್ನೂ ಏನು ಕಾರಣಗಳಿರಬಹುದು ಎಂಬ ನಿಟ್ಟಿನಲ್ಲಿ ತನಿಖೆ ನಡೆಸಲಾಗುತ್ತಿದೆ.

ಡಿವೈಎಸ್‌ಪಿ ವೆಂಕಟೇಶ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತಿದೆ. ನೀರು ಶುದ್ಧೀಕರಣ ಘಟಕದಲ್ಲಿ ಕೆಲಸ ಮಾಡುವ ಸಿಬ್ಬಂದಿಗಳ ವಿಚಾರಣೆ ನಡೆಸಲಾಗುತ್ತಿದೆ. ಆಯ್ದ ಬಡಾವಣೆಯಲ್ಲಿ ಮಾತ್ರ ವಾಂತಿ ಭೇದಿ ಪ್ರಕರಣಗಳು ನಡೆದಿರುವುದು ಅನುಮಾನಕ್ಕೆಡೆ ಮಾಡಿದೆ. ಆ ದಿಸೆಯಲ್ಲಿಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅಶುದ್ಧ ನೀರು ಪೂರೈಕೆ ವಿಚಾರದಲ್ಲಿ ಜವಾಬ್ದಾರಿ ಹೊಂದಿರುವ ಎಲ್ಲ ಸಿಬ್ಬಂದಿ, ಅಧಿಕಾರಿಗಳ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ನಗರದಲ್ಲಿ ಈವರೆಗೆ ಐವರು ಕಲುಷಿತ ನೀರು ಸೇವಿಸಿ ಮೃತಪಟ್ಟಿದ್ದಾರೆ ಎನ್ನಲಾಗುತ್ತಿದ್ದು, ನೂರಾರು ಜನ ರಿಮ್ಸ್‌ ಸೇರಿದಂತೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಾಂತಿ ಭೇದಿಯಾಗುವಂತ ಯಾವುದೇ ಸಾಂಕ್ರಾಮಿಕ ಕಾಯಿಲೆಗಳು ಹರಡದಿರುವ ಹಿನ್ನೆಲೆಯಲ್ಲಿ ಘಟನೆಗೆ ಬೇರೆ ಯಾವುದೇ ಕಾರಣ ಇರಬಹುದೇನೋ ಎಂಬ ಅನುಮಾನಗಳು ವ್ಯಕ್ತವಾಗುತ್ತಿವೆ.

ಅಧಿಕಾರಿಗಳಿಗೆ ಎಚ್ಚರಿಕೆ!: ನಗರದಲ್ಲಿ ಕಲುಷಿತ ನೀರು ಪೂರೈಕೆ ಪ್ರಕರಣ ಸಾಕಷ್ಟು ಆಕ್ರೋಶಕ್ಕೆ ಕಾರಣವಾಗಿದೆ. ಈಗಾಗಲೇ ಅನೇಕ ಸಂಘ-ಸಂಸ್ಥೆಗಳು, ರಾಜಕೀಯ ಪಕ್ಷಗಳು ಈ ಬಗ್ಗೆ ತರಾಟೆಗೆ ತೆಗೆದುಕೊಂಡು ನಗರಸಭೆಗೆ ಎಚ್ಚರಿಕೆ ನೀಡಿವೆ.

ಶನಿವಾರ ರಾಂಪುರ ಕೆರೆಯ ನೀರು ಶುದ್ಧೀಕರಣ ಘಟಕಕ್ಕೆ ಭೇಟಿ ನೀಡಿದ ಜೆಡಿಎಸ್‌ ಮುಖಂಡ ರಾಮನಗೌಡ ಏಗನೂರು ನೇತೃತ್ವದ ತಂಡ, ನಗರಸಭೆ ಪೌರಾಯುಕ್ತರನ್ನು ತರಾಟೆಗೆ ತೆಗೆದುಕೊಂಡಿದೆ. ಅವರು ಸ್ಥಳಕ್ಕೆ ಭೇಟಿ ನೀಡಿದ ವೇಳೆಯೇ ಶುದ್ಧೀಕರಣ ಘಟಕದಲ್ಲಿ ಎರಡ್ಮೂರು ಹಲ್ಲಿಗಳು ಸತ್ತು ಬಿದ್ದಿರುವ ದೃಶ್ಯ ಕಣ್ಣಿಗೆ ಬಿದ್ದಿರುವುದು ನಗರಸಭೆ ಆಡಳಿತ ವೈಖರಿಗೆ ಸಾಕ್ಷಿ ಎಂದು ಆಕ್ರೋಶ ಹೊರಹಾಕಿದ್ದಾರೆ. ಶೀಘ್ರದಲ್ಲೇ ಸಮಸ್ಯೆ ಇತ್ಯರ್ಥಗೊಳಿಸಿ ಜನರಿಗೆ ಶುದ್ಧ ಕುಡಿವ ನೀರು ಕೊಡದಿದ್ದಲ್ಲಿ ನಗರಸಭೆ ಅಧಿಕಾರಿಗಳು, ಶಾಸಕರು ಹಾಗೂ ಸದಸ್ಯರ ಮನೆಗೆ ಕಲುಷಿತ ನೀರು ಪೂರೈಸಿ ಕುಡಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿ ಬಂದಿದ್ದಾರೆ.

ಚರಂಡಿಗಳಲ್ಲಿ ಪೈಪ್‌ಲೀಕ್‌!

ಕಲುಷಿತ ನೀರು ಪೂರೈಕೆ ವಿಚಾರವಾಗಿ ಮಾಹಿತಿ ನೀಡುವ ಭರದಲ್ಲಿ ನಗರಸಭೆ ಪೌರಾಯುಕ್ತ ಕೆ.ಗುರುಲಿಂಗಪ್ಪ ಅವರು, ನಗರದಲ್ಲಿ ಕೆಲವೊಂದು ಚರಂಡಿಗಳಲ್ಲಿ ಕುಡಿವ ನೀರಿನ ಪೈಪ್‌ಲೈನ್‌ ಹಾದು ಹೋಗಿದೆ. ಎಲ್ಲಿಯಾದರೂ ಲೀಕ್‌ ಆಗಿ ಕೊಚ್ಚೆ ನೀರು ಮಿಶ್ರಣಗೊಂಡು ಪೂರೈಕೆ ಆಗಿರಬಹುದೇನೊ. ಈ ಬಗ್ಗೆ ಪತ್ತೆ ಹಚ್ಚಲಾಗುತ್ತಿದೆ ಎಂದಿದ್ದಾರೆ. ನಗರದಲ್ಲಿ ಬಹುತೇಕ ಕಡೆ ಚರಂಡಿಗಳಲ್ಲೇ ಕುಡಿವ ನೀರಿನ ಪೈಪ್‌ಲೈನ್‌ಗಳು ಹಾದು ಹೋಗಿದ್ದು, ಎಲ್ಲೆಲ್ಲಿ ಹಾಳಾಗಿದೆಯೋ ಎನ್ನುವ ಆತಂಕ ಶುರುವಾಗಿದೆ.

50 ರೂ. ಕೊಟ್ಟು ಶುದ್ಧ ನೀರು ಕುಡಿಯಲಾಗದ ಬಡವರು, ಕಲುಷಿತ ನೀರು ಸೇವಿಸಿದ ಪರಿಣಾಮ ಇಂದು ಸಾವಿರಾರು ರೂ. ಆಸ್ಪತ್ರೆಗಳಿಗೆ ಕಟ್ಟುವಂತಾಗಿದೆ. ನೂರಾರು ಕೋಟಿ ಖರ್ಚು ಮಾಡಿದರೂ ಶುದ್ಧ ಕುಡಿವ ನೀರು ಕೊಡದ ಹೀನ ಸ್ಥಿತಿ ನಗರದಲ್ಲಿರುವುದು ನಿಜಕ್ಕೂ ನಾಚಿಕೆಗೇಡಿನ ವಿಚಾರ. ಶೀಘ್ರದಲ್ಲೇ ವ್ಯವಸ್ಥೆ ಸುಧಾರಿಸದಿದ್ದಲ್ಲಿ ಅಧಿಕಾರಿಗಳಿಗೆ ಅಶುದ್ಧ ನೀರು ಕುಡಿಸುವ ಎಚ್ಚರಿಕೆ ನೀಡಲಾಗಿದೆ. -ರಾಮನಗೌಡ ಏಗನೂರು ಜೆಡಿಎಸ್‌ ಮುಖಂಡ

ಟಾಪ್ ನ್ಯೂಸ್

State records liquor sales worth Rs 408 crore in a single day

Liquor Sale; ರಾಜ್ಯದಲ್ಲಿ ಒಂದೇ ದಿನ 408 ಕೋಟಿ ರೂ ಮೌಲ್ಯದ ಮದ್ಯ ಮಾರಾಟ ದಾಖಲೆ

S.Korea: Plane skids on runway and hits wall: Watch video here

S.Korea: ರನ್‌ ವೇಯಲ್ಲಿ ಸ್ಕಿಡ್‌ ಆಗಿ ಗೋಡೆಗೆ ಅಪ್ಪಳಿಸಿದ ವಿಮಾನ: ಇಲ್ಲಿದೆ ನೋಡಿ ವಿಡಿಯೋ

ICC: ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೆ ಕರ್ನಾಟಕದ ಶ್ರೇಯಾಂಕಾ ಹೆಸರು

ICC: ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೆ ಕರ್ನಾಟಕದ ಶ್ರೇಯಾಂಕಾ ಹೆಸರು

World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್‌.. ಅರ್ಜುನ್‌ ಜಂಟಿ ಅಗ್ರಸ್ಥಾನ

World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್‌.. ಅರ್ಜುನ್‌ ಜಂಟಿ ಅಗ್ರಸ್ಥಾನ

3-plane-crash

Plane Crash: ದಕ್ಷಿಣ ಕೊರಿಯಾದಲ್ಲಿ ವಿಮಾನ ಪತನ; 28 ಮಂದಿ ಮೃತ್ಯು, ಇಬ್ಬರು ಗಂಭೀರ

PKL Season 11: ಇಂದು ಪ್ರೊ ಕಬಡ್ಡಿ ಫೈನಲ್‌… ಹರಿಯಾಣ – ಪಾಟ್ನಾ ಹಣಾಹಣಿ

PKL Season 11: ಇಂದು ಪ್ರೊ ಕಬಡ್ಡಿ ಫೈನಲ್‌… ಹರಿಯಾಣ – ಪಾಟ್ನಾ ಹಣಾಹಣಿ

2-bbk11

BBK11: 13ನೇ ವಾರದಲ್ಲಿ ವೀಕ್ಷಕರ ಗಮನ ಸೆಳೆದಿದ್ದ ಖ್ಯಾತ ಸ್ಪರ್ಧಿಯೇ ಎಲಿಮಿನೇಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-fish

Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

Sindhanur: ಲಾರಿ ಪಲ್ಟಿ… ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

State records liquor sales worth Rs 408 crore in a single day

Liquor Sale; ರಾಜ್ಯದಲ್ಲಿ ಒಂದೇ ದಿನ 408 ಕೋಟಿ ರೂ ಮೌಲ್ಯದ ಮದ್ಯ ಮಾರಾಟ ದಾಖಲೆ

S.Korea: Plane skids on runway and hits wall: Watch video here

S.Korea: ರನ್‌ ವೇಯಲ್ಲಿ ಸ್ಕಿಡ್‌ ಆಗಿ ಗೋಡೆಗೆ ಅಪ್ಪಳಿಸಿದ ವಿಮಾನ: ಇಲ್ಲಿದೆ ನೋಡಿ ವಿಡಿಯೋ

ICC: ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೆ ಕರ್ನಾಟಕದ ಶ್ರೇಯಾಂಕಾ ಹೆಸರು

ICC: ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೆ ಕರ್ನಾಟಕದ ಶ್ರೇಯಾಂಕಾ ಹೆಸರು

World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್‌.. ಅರ್ಜುನ್‌ ಜಂಟಿ ಅಗ್ರಸ್ಥಾನ

World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್‌.. ಅರ್ಜುನ್‌ ಜಂಟಿ ಅಗ್ರಸ್ಥಾನ

3-plane-crash

Plane Crash: ದಕ್ಷಿಣ ಕೊರಿಯಾದಲ್ಲಿ ವಿಮಾನ ಪತನ; 28 ಮಂದಿ ಮೃತ್ಯು, ಇಬ್ಬರು ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.