ರಸ್ತೆಯಲ್ಲ ಯಮಪುರಿಗೆ ರಹದಾರಿ
Team Udayavani, Sep 7, 2017, 4:23 PM IST
ದೇವದುರ್ಗ: ಪಟ್ಟಣದ ಬೆಟ್ಟದ ಶಂಭುಲಿಂಗೇಶ್ವರ ಮಾರ್ಗವಾಗಿ ವಿವಿಧ ಗ್ರಾಮ, ತಾಂಡಾಗಳಿಗೆ ತೆರಳುವ ರಸ್ತೆ ಆರೇಳು ವರ್ಷಗಳಿಂದ ಹದಗಟ್ಟು ಹೋಗಿದ್ದರೂ, ಜನಪ್ರತಿನಿಧಿಗಳಾಗಲಿ, ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ದುರಸ್ತಿ ಗೋಜಿಗೆ ಹೋಗದ್ದರಿಂದ ವಾಹನ ಸವಾರರು ಪರದಾಡುವಂತಾಗಿದೆ.
ಮರಿಗೆಮ್ಮದಿಬ್ಬಿ, ತುಗ್ಲೆರದೊಡ್ಡಿ, ಕಾಳಪ್ಪನ ತಾಂಡಾ, ಎಚ್.ಎನ್.ತಾಂಡಾ, ಕುರ್ಲೆರದೊಡ್ಡಿ, ಬೂದೆಪ್ಪನ ತಾಂಡಾ,
ನಾಮನಾಯ್ಕ ತಾಂಡಾ, ಧರ್ಮನಾಯ್ಕ ತಾಂಡಾ, ತಳವಾರದೊಡ್ಡಿ, ಅರಕೇರಾ ಸೇರಿ ಇತರೆ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಕಳೆದ ಆರೇಳು ವರ್ಷಗಳಿಂದ ತೀರಾ ಹದಗೆಟ್ಟು ಹೋಗಿದೆ. ಅರಕೇರಾ, ಕೊತ್ತದೊಡ್ಡಿ, ಕೋತಿಗುಡ್ಡ, ಮನಸಗಲ್, ಹೇಮನೂರು ಸೇರಿ ಇತರೆ ಗ್ರಾಮಗಳ ಜನರು ಈ ಮಾರ್ಗದ ಮೂಲಕವೇ ಪಟ್ಟಣಕ್ಕೆ ಆಗಮಿಸುತ್ತಾರೆ. ರಸ್ತೆಯ ಡಾಂಬರ್, ಕಲ್ಲು ಖಡಿ ಕಿತ್ತುಹೋಗಿ ಬೃಹತ್ ಗಾತ್ರದ ಗುಂಡಿಗಳು ಬಿದ್ದಿವೆ. ಬರೀ ಗುಂಡಿಗಳೇ ತುಂಬಿರುವ ರಸ್ತೆಯಲ್ಲಿ ವಾಹನ ಸವಾರರು, ಚಾಲಕರು ಸರ್ಕಸ್ ಮಾಡುವಂತಾಗಿದೆ.
ಇಲ್ಲಿನ ರಸ್ತೆಯಲ್ಲಿ ಬಹುತೇಕರು ಬಿದ್ದು, ಕೈ, ಕಾಲು ಮುರಿದುಕೊಂಡ ಘಟನೆಗಳು ಜರುಗಿವೆ. ಸಂಬಂಧಪಟ್ಟ ಅಧಿಕಾರಿಗಳು ಕನಿಷ್ಠಪಕ್ಷ ತಗ್ಗುಗಳಿಗೆ ಮರಂ ಹಾಕಿ ಸರಿಪಡಿಸುವ ಗೋಜಿಗೂ ಹೋಗಿಲ್ಲ ಎಂದು ವಾಹನ ಸವಾರರು ಆರೋಪಿಸಿದ್ದಾರೆ. ಸರಕಾರ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಕೋಟ್ಯಂತರ ರೂ. ಅನುದಾನ ವ್ಯಯಿಸಿದರೂ,
ಅಧಿಕಾರಿಗಳು, ಗುತ್ತಿಗೆದಾರರು ಮಿಲಾಪಿಯಾಗಿ ಕಳಪೆ ಕಾಮಗಾರಿ ಮಾಡಿ ಅನುದಾನ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಸಾರ್ವಜನಿಕರು ದೂರಿದ್ದಾರೆ.
ಇಲ್ಲಿನ ಬಹುತೇಕ ಗ್ರಾಮಗಳಿಗೆ ದಶಕ ಕಳೆದರೂ ಸಾರಿಗೆ ಬಸ್ ಭಾಗ್ಯ ಕಾಣದಾಗಿದೆ. ಗ್ರಾಮಸ್ಥರು, ಗ್ರಾಮೀಣ ಶಾಲೆಗೆ ಬರುವ ಶಿಕ್ಷಕರು ಟಂಟಂ ರಿಕ್ಷಾಗಳನ್ನೇ ಅವಲಂಬಿಸುವಂತಾಗಿದೆ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ರಸ್ತೆ ದುರಸ್ತಿಗೆ ಮುಂದಾಗಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Rey Mysterio Sr: ಖ್ಯಾತ ರೆಸ್ಲರ್ ರೇ ಮಿಸ್ಟೀರಿಯೊ ಸೀನಿಯರ್ ಇನ್ನಿಲ್ಲ
Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!
Parliament Session: ವಿಪಕ್ಷಗಳ ಕೋಲಾಹಲ ನಡುವೆ ಏಕ ಚುನಾವಣೆ ಮಸೂದೆ ಜೆಪಿಸಿಗೆ
ಜೋಡೋ ಯಾತ್ರೆಯಲ್ಲಿ”ನಗರ ನಕ್ಸಲರು’: ಮಹಾರಾಷ್ಟ್ರ ಸಿಎಂ ಫಡ್ನವೀಸ್
WPL 2025: ವನಿತಾ ಪ್ರೀಮಿಯರ್ ಲೀಗ್ ದಿನಾಂಕ ಅಂತಿಮ; ಬೆಂಗಳೂರಿನಲ್ಲಿಲ್ಲ ಪಂದ್ಯಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.