ರಾಜೀವ್ ಜ್ಯೋತಿ ಸದ್ಭಾವನಾ ಯಾತ್ರೆಗೆ ಅದ್ಧೂರಿ ಸ್ವಾಗತ
Team Udayavani, Aug 13, 2018, 3:27 PM IST
ರಾಯಚೂರು: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 74ನೇ ಜನ್ಮದಿನ ನಿಮಿತ್ತ ಕೆಪಿಸಿಸಿ ಕಾರ್ಮಿಕ ವಿಭಾಗದಿಂದ
ಹಮ್ಮಿಕೊಂಡಿರುವ ರಾಜೀವ್ ಜ್ಯೋತಿ ಸದ್ಭಾವನಾ ಯಾತ್ರೆಗೆ ಜಿಲ್ಲಾ ಕಾಂಗ್ರೆಸ್‌ನಿಂದ ಅದ್ಧೂರಿ ಸ್ವಾಗತ ಕೋರಲಾಯಿತು. ದೇಶದ ವಿವಿಧ ರಾಜ್ಯಗಳಲ್ಲಿ ಸಂಚರಿಸಲಿರುವ ಈ ಯಾತ್ರೆ ರವಿವಾರ ಬೆಳಗ್ಗೆ ಜಿಲ್ಲೆಗೆ ಆಗಮಿಸಿತು. ಈ ವೇಳೆ ಜಿಲ್ಲಾ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಯಾತ್ರೆಗೆ ಸ್ವಾಗತ ಕೋರಿದರು.
ಯಾತ್ರೆ ಕುರಿತು ನಗರದ ಮಲ್ಲನ್ ನಾರಾಯಣ ಕಲ್ಯಾಣ ಮಂಟಪದಲ್ಲಿ ರವಿವಾರ ಸುದ್ದಿಗೋಷ್ಠಿ ನಡೆಸಿದ ಯಾತ್ರೆ ಅಧ್ಯಕ್ಷ ಎಸ್.ಎಸ್.ಪ್ರಕಾಶಂ, ದೇಶದಲ್ಲಿ ಅಶಾಂತಿ, ಭಯೋತ್ಪಾದನೆ, ಕೋಮು ಸಂಘರ್ಷಗಳ ವಿರುದ್ಧ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಯಾತ್ರೆ ಆರಂಭಿಸಲಾಗಿದೆ. ಪ್ರತಿ ವರ್ಷ ಯಾತ್ರೆ ನಡೆಸಲಾಗುತ್ತಿದೆ. ದೇಶದ ಮೂಲೆ ಮೂಲೆಗಳಿಗೆ ತೆರಳಲಿರುವ ಯಾತ್ರೆ ಆ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದೆ. ಆ.9ರಂದು ತಮಿಳುನಾಡಿನ ಪೆರಂಬದೂರಿನಲ್ಲಿ ಯಾತ್ರೆಗೆ ಚಾಲನೆ ನೀಡಲಾಯಿತು. ಅಲ್ಲಿಂದ ಶುರುವಾಗಿ ಕರ್ನಾಟಕ, ತೆಲಂಗಾಣ, ಮಹಾರಾಷ್ಟ್ರ, ಮಧ್ಯಪ್ರದೇಶ, ಉತ್ತರ ಪ್ರದೇಶ, ಹರಿಯಾಣ ರಾಜ್ಯಗಳ ಮೂಲಕ ಆ.19ರಂದು ನವದೆಹಲಿ ತಲುಪಲಿದೆ ಎಂದು ವಿವರಿಸಿದರು.
ಆ.20ರಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಜ್ಯೋತಿ ಸ್ವೀಕರಿಸಲಿದ್ದು, ಅಲ್ಲಿಂದ ಜ್ಯೋತಿ ವೀರಭೂಮಿ ತಲುಪಲಿದೆ.
ಬಳಿಕ ಯುಪಿಎ ಮುಖ್ಯಸ್ಥೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಗುವುದು. ಯಾತ್ರೆಯುದ್ದಕ್ಕೂ ರಾಜೀವ್ ಗಾಂಧಿ ಅವರ ಬದುಕಿನ ಆದರ್ಶಗಳ ವಿಚಾರಧಾರೆ ಜನರಿಗೆ ಪರಿಚಯಿಸಲಾಗುತ್ತಿದೆ. ದೇಶದಲ್ಲಿ ಶಾಂತಿ, ಸೌಹಾರ್ದ ನೆಲೆಸಬೇಕು ಎನ್ನುವ ಅಂಶಗಳನ್ನು ಜನರಿಗೆ ತಿಳಿ ಹೇಳಲಾಗುತ್ತಿದೆ ಎಂದರು.
ಯಾತ್ರೆ ಮುಖ್ಯಸ್ಥ ಗೋಮದೀಶನ್ ಅಯ್ಯರ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ರಾಮಣ್ಣ ಇರಬಗೇರಾ, ಮುಖಂಡರಾದ
ಪಾರಸಮಲ್ ಸುಖಾಣಿ, ಕೆ.ಶಾಂತಪ್ಪ, ಜಿ.ಶಿವಮೂರ್ತಿ, ರವಿ ಬೋಸರಾಜು, ಬಸನಗೌಡ, ಜಿ.ಬಸವರಾಜ ರೆಡ್ಡಿ, ಅರುಣ ಧೋತರಬಂಡಿ, ಬಾಬು ನಾಯಕ ಸೇರಿ ಬ್ಲಾಕ್ ಕಾರ್ಯಕರ್ತರು, ಯಾತ್ರೆಯೊಂದಿಗೆ ಬಂದ 200ಕ್ಕೂ ಅಧಿಕ ಕಲಾವಿದರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್ ಆರೋಪಿ ಶ್ವೇತಾ
Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.