ಅಗತ್ಯ ವಸ್ತುಗಳ ಮೇಲಿನ ಜಿಎಸ್‌ಟಿ ಹಿಂಪಡೆಯಲಿ
Team Udayavani, Jul 23, 2022, 3:47 PM IST
ರಾಯಚೂರು: ಆಹಾರ ಪದಾರ್ಥ ಹಾಗೂ ಅಗತ್ಯ ವಸ್ತುಗಳ ಮೇಲೆ ಜಿಎಸ್‌ಟಿ ವಿ ಧಿಸಿರುವ ಕ್ರಮವನ್ನು ಖಂಡಿಸಿ ಶುಕ್ರವಾರ ಎಸ್‌ಯುಸಿಐ(ಸಿ) ಸಂಘಟನೆ ಕಾರ್ಯಕರ್ತರು ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಜಿಎಸ್‌ಟಿ ಪ್ರತಿಯ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಬಳಿಕ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು. ದಿನಬಳಕೆ ವಸ್ತುಗಳ ಮೇಲೆಯೂ ಶೇ.5ರಷ್ಟು ತೆರಿಗೆ ವಿಧಿಸಿದ ಕ್ರಮ ಸರಿಯಲ್ಲ. ಜನರಿಗೆ ಬೆಲೆ ಏರಿಕೆ ಸಮಸ್ಯೆಯಿಂದ ಹೊರಬರಲು ಆಗುತ್ತಿಲ್ಲ. ಜನರ ತಲಾದಾಯ ಮಾತ್ರ ಹೆಚ್ಚಾಗಿಲ್ಲ. ಪ್ರತಿ ವಸ್ತುವಿನ ಮೇಲೆ ಜಿಎಸ್‌ಟಿ ಹಾಕಿದರೆ ಬಡವರು ಏನಾಗಬೇಕು ಎಂದು ಪ್ರಶ್ನಿಸಿದರು.
ಕೇಂದ್ರ ಸರ್ಕಾರ ಆಹಾರ ಪದಾರ್ಥಗಳ ವ್ಯಾಪಾರದಲ್ಲೂ ಕಾರ್ಪೋರೇಟ್ ಕಂಪೆನಿಗಳ ಪರ ಯೋಚಿಸುತ್ತಿದೆ. ಕೂಡಲೇ ಈ ತೆರಿಗೆ ರದ್ದುಗೊಳಿಸಬೇಕು. ಇಲ್ಲವಾದರೆ ಇನ್ನೂ ತೀವ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಸಂಘಟನೆ ಮುಖಂಡರಾದ ಮಹೇಶ ಚೀಕಲಪರ್ವಿ, ಎನ್.ಎಸ್. ವೀರೇಶ, ಅಣ್ಣಪ್ಪ, ಮಲ್ಲನಗೌಡ, ಕಾರ್ತಿಕ, ಹಯ್ನಾಳಪ್ಪ, ಪೀರಸಾಬ್, ವಿನೋದ ಸೇರಿ ಅನೇಕರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
MUST WATCH
ಹೊಸ ಸೇರ್ಪಡೆ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.