ಬೆಲೆ ಏರಿಕೆ ವಿರುದ್ಧ ಮಹಿಳಾ ಕಾಂಗ್ರೆಸ್ ಘಟಕ ನಿರಶನ
ಜೀವನ ನಿರ್ವಹಣೆ ಮಾಡುವುದೇ ಕಷ್ಟಕರ ಎನ್ನುವಂತಾಗಿದೆ
Team Udayavani, Sep 9, 2021, 6:03 PM IST
ರಾಯಚೂರು: ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸೇರಿದಂತೆ ದಿನಬಳಕೆ ವಸ್ತುಗಳು ಬೆಲೆ ಏರಿಕೆ ಖಂಡಿಸಿ ಜಿಲ್ಲಾ ಕಾಂಗ್ರೆಸ್‌ನ ಮಹಿಳಾ ಘಟಕದ ಕಾರ್ಯಕರ್ತರು ಬುಧವಾರ ಕೊರಳಲ್ಲಿ ವಿವಿಧ ಬಗೆಯ ತರಕಾರಿ ಹಾಕಿಕೊಂಡು ವಿನೂತನ ಪ್ರತಿಭಟನೆ ನಡೆಸಿದರು.
ನಗರದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟಿಸಿದ ಬಳಿಕ ಅಲ್ಲಿಂದ ಡಿಸಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.ಕೇಂದ್ರ ಸರ್ಕಾರ ದಿನಬಳಕೆ ವಸ್ತುಗಳ ಬೆಲೆ ಏರಿಕೆ ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ.
ಪೆಟ್ರೋಲ್, ಡೀಸೆಲ್‌ಬೆಲೆ ನೂರರ ಗಡಿದಾಟಿದ್ದರೆ,ಅಡುಗೆ ಅನಿಲ ಬೆಲೆ ಕೇವಲ ಒಂದೇ ವಾರದಲ್ಲಿ50 ರೂ. ಹೆಚ್ಚಿಸಲಾಗಿದೆ. ಬೆಲೆ ಏರಿಕೆಯಿಂದ ಬಡ,ಮಧ್ಯಮ ವರ್ಗದ ಪರದಾಡುವಂತಾಗಿದ್ದು, ಜೀವನ ನಿರ್ವಹಣೆ ಮಾಡುವುದೇ ಕಷ್ಟಕರ ಎನ್ನುವಂತಾಗಿದೆ ಎಂದರು. ಕೊರೊನಾದಿಂದ ಜನರಿಗೆ ಆದಾಯವಿಲ್ಲದೇ ಈಗಾಗಲೇ ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ.
ಇಂಥ ವೇಳೆ ಅಗತ್ಯ ವಸ್ತುಗಳ ಬೆಲೆ ಕಡಿಮೆಗೊಳಿಸುವುದು ಬಿಟ್ಟು ಪ್ರತಿ ವಸ್ತುವಿನ ಬೆಲೆ ಹೆಚ್ಚಿಸುತ್ತಿರುವುದು ಖಂಡನೀಯ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ 70 ರೂ. ಒಳಗಿತ್ತು. ಆದರೆ, ಈಗ ನೂರರ ಗಡಿ ದಾಟಿದೆ. ಇನ್ನು ಅಡುಗೆ ಎಣ್ಣೆ, ಬೇಳೆ, ತರಕಾರಿ ಸೇರಿದಂತೆ ಪ್ರತಿ ವಸ್ತುವಿನ ಬೆಲೆ ಹೆಚ್ಚಾಗುತ್ತಲೇ ಸಾಗುತ್ತಿದೆ. ಅದರ ಜತೆಗೆ ಜತೆಗೆ ವಿದ್ಯುತ್ ದರ ಕೂಡ ಹೆಚ್ಚಿಸುವ ಮೂಲಕ ಕೇಂದ್ರ ಸರ್ಕಾರ ಜನರಿಗೆ ಶಾಕ್ ಮೇಲೆ ಶಾಕ್ ನೀಡುತ್ತಿದೆ. ಇದರಿಂದ ರೈತರಿಗೆ, ಬಡವರಿಗೆ ಸಮಸ್ಯೆಯಾಗಿದೆ.
ಕೂಡಲೇ ಕೇಂದ್ರ ಸರ್ಕಾರ ಬೆಲೆ ಇಳಿಕೆ ಮಾಡಬೇಕು. ಇಲ್ಲದಿದ್ದರೆ ವಿಧಾನಸೌಧ ಮುತ್ತಿಗೆ ಹಾಕಿ ಪ್ರತಿಭಟಿಸಲಾಗುವುದು ಎಂದರು. ಕಾಂಗ್ರೆಸ್ ಜಿಲ್ಲಾ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ನಿರ್ಮಲಾಬೆಣ್ಣೆ,ಕೆಪಿಸಿಸಿಮಹಿಳಾಘಟಕದ ಸದಸ್ಯೆ ಶ್ರೀದೇವಿ ನಾಯಕ, ಮುಖಂಡರಾದ ಶಶಿಕಲಾ ಭೀಮರಾಯ, ಈರಮ್ಮ, ವಂದನಾ, ಪದ್ಮಾ, ನವನೀತಾ, ರಜೀಯಾ ಪಟೇಲ್, ರಾಣಿರಿಚರ್ಡ್, ಮಾಲಾ ಭಜಂತ್ರಿ ಸೇರಿ ಅನೇಕರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ
Bantwal: ತುಂಬೆ ಜಂಕ್ಷನ್; ಸರಣಿ ಅಪಘಾತ
Kasaragod ಅಪರಾಧ ಸುದ್ದಿಗಳು: ವಿದ್ಯಾರ್ಥಿನಿಯರಿಗೆ ಕಿರುಕುಳ; ಕೇಸು ದಾಖಲು
Brahmavar: ಆರೂರು; ಬೆಂಕಿ ತಗಲಿ ಗಾಯಗೊಂಡಿದ್ದ ಮಹಿಳೆ ಸಾವು
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.