ಕಾಂಗ್ರೆಸ್ ಗೆಲುವಿಗೆ ಶ್ರಮಿಸಿ
Team Udayavani, Mar 7, 2019, 9:15 AM IST
ಜಗಳೂರು: ತಾಲೂಕಿನ ನೀರಾವರಿ ಯೋಜನೆಗಳ ಜಾರಿಗೆ ನಾವು ನಮ್ಮ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಬೇಕಾಗಿದೆ ಎಂದು ಕಾಂಗ್ರೆಸ್ ಮಾಜಿ ಶಾಸಕ ಎಚ್.ಪಿ. ರಾಜೇಶ್ ಕಾರ್ಯಕರ್ತರಿಗೆ ಕರೆ ನೀಡಿದರು.
ಪಟ್ಟಣದ ವಾಲ್ಮೀಕಿ ಭವನದಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬ್ಲಾಕ್ ಕಾಂಗ್ರೆಸ್ ಮಟ್ಟದ ಬೂತ್ ಅಧ್ಯಕ್ಷರ ಸಿದ್ಧತಾ ಶಿಬಿರದಲ್ಲಿ ಅವರು ಮಾತನಾಡಿದರು. ಕಳೆದ 15 ವರ್ಷಗಳಿಂದ ಸಂಸದರಾಗಿರುವ ಸಿದ್ದೇಶ್ವರ ಅವರ ಸಾಧನೆ ಶೂನ್ಯವಾಗಿದ್ದು, ನಮ್ಮ ತಾಲೂಕಿಗೆ ಯಾವುದೇ ಕೊಡುಗೆ ನೀಡಿಲ್ಲ. ಕೆಲವು ಗ್ರಾಮಗಳಲ್ಲಿ ಬಸ್ ನಿಲ್ದಾಣ ನಿರ್ಮಿಸಿದ್ದು ಬಿಟ್ಟರೆ ಯಾವುದೇ ಕೆಲಸ ಮಾಡಿಲ್ಲ.
ತಾಲೂಕು ಬರಗಾಲ ಪ್ರದೇಶವಾಗಿದ್ದು ಭದ್ರಾ ಮೇಲ್ದಂಡೆ ನೀರಾವರಿ ಯೋಜನೆ, ಬಹುಗ್ರಾಮ ಕುಡಿಯುವ ನೀರಿನ ಯೋಜನೆ, ಕೆರೆಗಳಿಗೆ ನೀರು ತುಂಬಿಸುವ ಯೋಜನೆಗಳು ಜಾರಿಯಾಗಬೇಕಾದರೆ ನಮ್ಮ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಬೇಕು.
ಆದ್ದರಿಂದ ಬೂತ್ ಮಟ್ಟದ ಅಧ್ಯಕ್ಷರು ಗ್ರಾಮಿಣ ಪ್ರದೇಶಗಳಲ್ಲಿ ನಮ್ಮ ಸರಕಾರದ ಸಾಧನೆಗಳನ್ನು ಪ್ರತಿಯೊಂದು ಮನೆಗೆ ತಿಳಿಸಬೇಕು ಎಂದು ಕರೆ ನೀಡಿದರು. ನಮ್ಮಲ್ಲಿ ಏನೇ ಸಮಸ್ಯೆ ಇದ್ದರೂ ಸರಿಪಡಿಸಿಕೊಂಡು ಹೋಗಬೇಕು. ವ್ಯಕ್ತಿಗಿಂತ ಪಕ್ಷ ದೊಡ್ಡದು ಎಂದರು.
ಕೆಪಿಸಿಸಿ ಕಾರ್ಯದರ್ಶಿ ಯೋಗೀಶ್ ಮಾತನಾಡಿ, ಸಂಸದರು ಈ ಭಾಗದಲ್ಲಿ ಅಭಿವೃದ್ಧಿ ಕೆಲಸ ಮಾಡದಿದ್ದರೂ ಸಹ ಯುವ ಜನತೆಗೆ ಗುಟ್ಕಾ ಕೊಡುವಂತಹ ಕೆಲಸ ಮಾಡುತ್ತಿದ್ದಾರೆ ಎಂದು ಟೀಕಿಸಿದರು. ಪಕ್ಷ ದೇಶಕ್ಕೆ ಸ್ವಾತಂತ್ರ್ಯಾ ದೊರಕಿಸಿದ್ದು, ನಂತರ ನೆಹರೂ, ಇಂದಿರಾ, ರಾಜೀವ್
ಗಾಂಧಿಯವರ ನೇತೃತ್ವದಲ್ಲಿ ದೇಶ ಅಭಿವೃದ್ಧಿ ಹೊಂದಿದೆ. ಇದನ್ನು ಅರಿತು ವಿರೋಧ ಪಕ್ಷದವರು ಮಾತನಾಡಬೇಕು ಎಂದು ನುಡಿದರು.
ಕಾಂಗ್ರೆಸ್ ಪರಿಶಿಷ್ಟ ವರ್ಗಗಳ ಘಟಕದ ರಾಜ್ಯಾಧ್ಯಕ್ಷ ಕೆ.ಪಿ. ಪಾಲಯ್ಯ ಮಾತನಾಡಿ, ಭಾರತದ ಮೇಲೆ ದಾಳಿ ನಡೆದಾಗ
ಎಂದೂ ನಮ್ಮ ದೇಶ ಸೋತಿಲ್ಲ. ಕಳೆದ ಕೆಲ ದಿನಗಳ ಹಿಂದಿನ ಪಾಕ್ ಮೇಲಿನ ದಾಳಿ ಮುಂದಿಟ್ಟುಕೊಂಡು ನಾವು ಸಾಧನೆ ಮಾಡಿದ್ದೇವೆ ಎಂದು ಹೇಳುವುದು ಸರಿಯಲ್ಲ ಎಂದು ಹೇಳಿದರು.
ಜಿಪಂ ಸದಸ್ಯೆ ಉಮಾ, ತಾಪಂ ಉಪಾಧ್ಯಕ್ಷ ಮುದೇಗೌಡ ಬಸವರಾಜ್, ಎಸ್ಸಿ ಘಟಕದ ಅಧ್ಯಕ್ಷ ಕೇಶವಮೂರ್ತಿ, ತಾಲೂಕು ಪ್ರಚಾರ ಸಮಿತಿಯ ಹರೀಶ್, ಮುಖಂಡರಾದ ಪಲ್ಲಾಗಟ್ಟೆ ಶೇಖರಪ್ಪ, ಕಲ್ಲೇಶ್‌ರಾಜ್, ಷಂಷೀರ್ ಇಕ್ಬಾಲ್, ದಿದ್ದಿಗಿ ವಿಜಯ್, ನಾಗರಾಜ್, ಪಪಂ ಸದಸ್ಯರಾದ ರಮೇಶ್,
ಮಹಮದ್ ಅಲಿ, ರವಿಕುಮಾರ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ
Davangere: ಮಹಿಳೆಯ ಮೇಲೆ ಕರಡಿ ದಾಳಿ
Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್
MUST WATCH
ಹೊಸ ಸೇರ್ಪಡೆ
Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.