ಸೇವಾ ಭದ್ರತೆ ಕಲ್ಪಿಸಲು ಕಾರ್ಮಿಕರ ಆಗ್ರಹ
•ವಸತಿ ನಿಲಯಗಳಲ್ಲಿನ ಸಮಸ್ಯೆ ಪರಿಹರಿಸಲು ಆಗ್ರಹ •ಬಾಕಿ ಇರುವ 10 ತಿಂಗಳ ವೇತನ ಪಾವತಿಸಿ •ಕಿರುಕುಳ ತಡೆಯಿರಿ
Team Udayavani, Jul 9, 2019, 11:51 AM IST
ರಾಯಚೂರು: ಜಿಲ್ಲಾಧಿಕಾರಿ ಕಚೇರಿ ಎದುರು ಕರ್ನಾಟಕ ರಾಜ್ಯ ವಸತಿ ನಿಲಯಗಳ ಕಾರ್ಮಿಕರ (ಟಿಯುಸಿಐ ಸಂಯೋಜಿತ) ಸಂಘದ ಸದಸ್ಯರು ಪ್ರತಿಭಟನೆ ನಡೆಸಿದರು.
ರಾಯಚೂರು: ಹಲವು ದಶಕಗಳಿಂದ ಸೇವೆ ಸಲ್ಲಿಸುತ್ತಿರುವ ಕಾರ್ಮಿಕರಿಗೆ ಸೇವಾ ಭದ್ರತೆ ಕಲ್ಪಿಸಬೇಕು, 2019-20ನೇ ನಿಯಮದನ್ವಯ ವೇತನ ಪಾವತಿಸಬೇಕು ಎಂಬಿತ್ಯಾದಿ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ವಸತಿ ನಿಲಯಗಳ ಕಾರ್ಮಿಕರ (ಟಿಯುಸಿಐ ಸಂಯೋಜಿತ) ಸಂಘದ ಸದಸ್ಯರು ಸೋಮವಾರ ಪ್ರತಿಭಟನೆ ನಡೆಸಿದರು.
ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಬಳಿಕ ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗೆ ಮನವಿ ಸಲ್ಲಿಸಿದರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಕಳೆದ 10 ತಿಂಗಳಿಂದ ಕಾರ್ಮಿಕರಿಗೆ ಸೂಕ್ತ ವೇತನ ಪಾವತಿಸಿಲ್ಲ. ವಸತಿ ನಿಲಯದ ಕಾರ್ಮಿಕರು ಎದುರಿಸುತ್ತಿರುವ ಅನೇಕ ಸಮಸ್ಯೆಗಳ ನಿವಾರಣೆಗೆ ಕಳೆದ ಐದಾರು ವರ್ಷದಿಂದ ಹೋರಾಟ ಮಾಡಿಕೊಂಡು ಬರಲಾಗಿದೆ. ಆದರೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳು ನಿರ್ಲಕ್ಷ ್ಯ ವಹಿಸುತ್ತಿದ್ದಾರೆ ಎಂದು ದೂರಿದರು.
ಕನಿಷ್ಠ ವೇತನ ಕಾಯ್ದೆ-1948ರ ಸೆಕ್ಷನ್ 5 ಮತ್ತು 6ರ ಪ್ರಕಾರ ವೇತನ ಪಾವತಿಸಬೇಕು ಹಾಗೂ ಸಾರ್ವತ್ರಿಕ ರಜೆ ದಿನವಾದ ರವಿವಾರ ಕಡ್ಡಾಯವಾಗಿ ರಜೆ ನೀಡಬೇಕು. ದಿನದ 8 ಗಂಟೆಗೂ ಅಧಿಕ ಕೆಲಸ ನಿರ್ವಹಿಸಿದ ಕಾರ್ಮಿಕರಿಗೆ ಹೆಚ್ಚುವರಿ ಭತ್ಯೆ ನೀಡಬೇಕು. ಕಾರ್ಮಿಕರಿಗೆ ಕಿರುಕುಳ ನೀಡುವುದು ಹಾಗೂ ಕೆಲಸದಿಂದ ತೆಗೆದುಹಾಕುವುದು, ಕಾರ್ಮಿಕರಿಗೆ ಬೆದರಿಕೆ ಹಾಕುವುದನ್ನು ಕೂಡಲೇ ನಿಲ್ಲಿಸಬೇಕು. ಕಾರ್ಮಿಕರ ಹಕ್ಕುಗಳ ಪಾಲನೆಗೆ ಅವಕಾಶ ನೀಡಬೇಕು. ಕಾರ್ಮಿಕರ ಹಕ್ಕುಗಳ ರಕ್ಷಣೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಸಂಘದ ಅಧ್ಯಕ್ಷ ಜಿ.ಅಮರೇಶ, ಉಪಾಧ್ಯಕ್ಷ ರಂಗನಾಥ, ಮುಖಂಡರಾದ ರವಿ ದಾದಾಸ್, ಕಾರ್ಮಿಕರಾದ ಕಮಲಮ್ಮ, ಲಕ್ಷ್ಮೀ ಲಿಂಗಸುಗೂರು, ನಾಗಮ್ಮ, ಮಹಾದೇವಿ, ಗುಂಡಮ್ಮ, ಹುಲಿಗೆಮ್ಮ, ಗದ್ದೆಮ್ಮ, ನಸ್ರೀನ್ ಬೇಗಂ, ಬಸವರಾಜ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.