ಕಾರ್ಮಿಕರ ಮೇಲೆ ಹಲ್ಲೆ; ಆರೋಪಿಗಳ ಬಂಧನಕ್ಕೆ ಆಗ್ರಹ
Team Udayavani, Feb 21, 2018, 3:21 PM IST
ರಾಯಚೂರು: ನೀರು ನಿರ್ವಹಣಾ ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಗಂಭೀರ ಗಾಯಗೊಳಿಸಿದ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಮೀನ ಮೇಷ ಎಣಿಸುತ್ತಿರುವ ಕ್ರಮ ಸರಿಯಲ್ಲ ಎಂದು ತುಂಗಭದ್ರಾ ನೀರಾವರಿ ವಲಯ ಹಂಗಾಮಿ ಕಾರ್ಮಿಕರ ಸಂಘ (ಟಿಯುಸಿಐ ಸಂಯೋಜಿತ) ಅಧ್ಯಕ್ಷ ಆರ್. ಮಾನಸಯ್ಯ ದೂರಿದರು.
ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಕ್ರಮ ನೀರು ಪೂರೈಕೆಗೆ ಸಹಕರಿಸದ ಕಾರ್ಮಿಕರಾದ ನರಸಿಂಹ ನಾಯಕ, ಬಸವರಾಜ, ಶಿವಕುಮಾರ ಹಾಗೂ ವೆಂಕಟೇಶರ ಮೇಲೆ ತುಂಗಭದ್ರಾ ಎಡದಂಡೆ ಕಾಲುವೆ ವಿತರಣಾ ಕಾಲುವೆ ನಂಬರ್ 76ರಲ್ಲಿ ನಡುಗಡ್ಡೆ ಕ್ಯಾಂಪ್‌ನ ಪುಲ್ಲರಾವ್, ಸುಬ್ಟಾರಾವ್ ಹಲ್ಲೆ ನಡೆಸಿದ್ದಾರೆ. ದುಷ್ಕರ್ಮಿಗಳು ಕಾರ್ಮಿಕರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದು, ಈ ಕುರಿತು ಕವಿತಾಳ ಠಾಣೆಗೆ ದೂರು ಸಲ್ಲಿಸಿದರೂ 10 ಗಂಟೆಗಳ ನಂತರ ದೂರು ದಾಖಲಿಸಲಾಗಿದೆ. ಆದರೆ, ಕವಿತಾಳ ಪೊಲೀಸರು ಈವರೆಗೂ ಆರೋಪಿಗಳನ್ನು ಬಂಧಿಸಿಲ್ಲ ಎಂದು ದೂರಿದರು. ಆರೋಪಿಗಳು ಎಂಎಲ್‌ಸಿ ಎನ್.ಎಸ್.ಬೋಸರಾಜ ಅವರ ಬೆಂಬಲಿಗರೊಂದಿಗೆ ಕಾರ್ಮಿಕರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿದ್ದಾರೆ.
ನಡುಗಡ್ಡೆ ಕ್ಯಾಂಪ್‌ನಲ್ಲಿ ರೈತರಿಗಿಂತ ಭೂ ಮಾಲೀಕರ ಭೂಮಿ ಹೆಚ್ಚಿನ ಪ್ರಮಾಣದಲ್ಲಿದೆ. ರೈತರ ಹೆಸರಿನಲ್ಲಿ ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ದೂರಿದರು. ಕುಡಿಯುವ ನೀರಿಗಿಂತ ಸಾಗುವಳಿ ನೀರಿಗೆ ಹೆಚ್ಚಿನ ಮಹತ್ವ ನೀಡಬಾರದು ಎಂಬ ನಿಯಮವಿದೆ. ನೀರಾವರಿ ಇಲಾಖೆ ಮುನ್ಸೂಚನೆ ನೀಡಿದ್ದರೂ ಭತ್ತ ನಾಟಿ ಮಾಡಿದ್ದಾರೆ. ರೈತರ ಹೆಸರಿನಲ್ಲಿ ಗೂಂಡಾಗಿರಿ ಮಾಡುತ್ತಿದ್ದಾರೆ. ಅಕ್ರಮ ಮರಳು, ನೀರು, ಭೂಮಿ ಲಾಬಿ ನಿರಂತರವಾಗಿ ನಡೆಯುತ್ತಿದ್ದರೂ ಜಿಲ್ಲೆಯ ಪೊಲೀಸರು ನಿಷ್ಕ್ರಿàಯರಾಗಿದ್ದಾರೆ. ಎನ್.ಎಸ್.ಬೋಸರಾಜ ಹಾಗೂ ಅವರ ಪುತ್ರ ರವಿ ಬೋಸರಾಜ ಅವರಿಂದ ಕಾರ್ಮಿಕರ ಮೇಲೆ ನಡೆದ ಹಲ್ಲೆಯನ್ನು ಮುಚ್ಚಿಹಾಕಲು ಪ್ರಯತ್ನಿಸಲಾಗುತ್ತಿದೆ ಎಂದು ಆಪಾದಿಸಿದರು.
24 ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸದಿದ್ದರೆ, ಕಾರ್ಮಿಕರು ಕೆಲಸ ಸ್ಥಗಿತಗೊಳಿಸಿ ಹೋರಾಟಕ್ಕೆ ಧುಮುಕಬೇಕಾಗುತ್ತದೆ ಎಂದು ಎಚ್ಚರಿಸಿದರು. ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಅಡವಿರಾವ್, ಕಾರ್ಮಿಕ ಮುಖಂಡ ಜಿ.ಅಮರೇಶ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.