ಯೋಗ ಆಗಲಿ ಜೀವನದ ಭಾಗ
Team Udayavani, Jun 22, 2018, 4:39 PM IST
ರಾಯಚೂರು: ನಾಲ್ಕನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ಜಿಲ್ಲಾದ್ಯಂತ ಗುರುವಾರ ಅರ್ಥಪೂರ್ಣವಾಗಿ ಆಚರಿಸಲಾಯಿತು. ಬೆಳಗಿನ ಜಾವ ಒಂದೆಡೆ ಸೇರಿದ ಜನ ವಿವಿಧ ಯೋಗಾಸನಗಳನ್ನು ಪ್ರದರ್ಶಿಸುವ ಮೂಲಕ ಯೋಗ ದಿನ ಆಚರಿಸಿದರು. ಶಾಲಾ ಕಾಲೇಜುಗಳಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಯೋಗಾಭ್ಯಾಸ ನಡೆಯಿತು.
ಜಿಲ್ಲಾಡಳಿತ, ಜಿಪಂ ಹಾಗೂ ಜಿಲ್ಲಾ ಆಯುಷ್ ಇಲಾಖೆ ಸಹಯೋಗದಲ್ಲಿ ಗುರುವಾರ ನಗರದ ಡಿಎಆರ್ ಪೊಲೀಸ್ ಮೈದಾನದಲ್ಲಿ ಸಾಮೂಹಿಕ ಯೋಗ ಪ್ರದರ್ಶನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ ಜಿಪಂ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮೀ ಪರಮೇಶಪ್ಪ ಮಾತನಾಡಿ, ಸದೃಢ ಆರೋಗ್ಯ ಕಾಪಾಡಲು, ದೇಹಕ್ಕಂಟಿದ ರೋಗಗಳ ನಿವಾರಣೆಗೆ ಯೋಗವೇ ದಿವ್ಯ ಔಷಧ. ಪ್ರತಿನಿತ್ಯ ಯೋಗಾಭ್ಯಾಸ ಮಾಡುವುದರಿಂದ ವೈದ್ಯರ ಬಳಿಗೆ ತೆರಳುವ ಅನಿವಾರ್ಯತೆಯೇ ಬರುವುದಿಲ್ಲ.
ಯೋಗ ದಿನದಂದು ಮಾತ್ರ ಯೋಗಾಸನ ಮಾಡಿದರೆ ಸಾಲದು ಪ್ರತಿನಿತ್ಯ ಯೋಗಾಭ್ಯಾಸ ರೂಢಿಸಿಕೊಳ್ಳಬೇಕು. ಇದರಿಂದ ಮನಸ್ಸಿಗೆ ನೆಮ್ಮದಿ ಸಿಗುತ್ತದೆ. ಯೋಗಕ್ಕೆ ಕೇವಲ ದೇಹದ ಕಾಯಿಲೆಗಳನ್ನು ಮಾತ್ರವಲ್ಲದೇ ಮನಸಿನ
ಕಾಯಿಲೆಗಳನ್ನು ದೂರ ಮಾಡುವ ಶಕ್ತಿ ಇದೆ. ಯಾವ ವ್ಯಕ್ತಿ ಯೋಗ ಸಾಧನೆ ಮಾಡುವನೋ ಆತನ ಆರೋಗ್ಯ ಉತ್ತಮವಾಗಿರುತ್ತದೆ ಎಂದರು.
ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್ ಮಾತನಾಡಿ, ಅಂತಾರಾಷ್ಟ್ರೀಯ ಯೋಗ ದಿನವನ್ನು ಕಳೆದ ನಾಲ್ಕು ವರ್ಷದಿಂದ ವಿಶ್ವದ ಎಲ್ಲ ರಾಷ್ಟ್ರಗಳು ಆಚರಿಸುತ್ತಿವೆ. ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಪ್ರತಿನಿತ್ಯ 3ರಿಂದ 4 ಜನರಲ್ಲಿ ಒಬ್ಬರು ಖನ್ನತೆಯಿಂದ ಬಳಲುತ್ತಿದ್ದಾರೆ. ನಿತ್ಯ ಯೋಗ ಮಾಡುವುದರಿಂದ ಖನ್ನತೆಯಿಂದ ದೂರವಿರಬಹುದು ಎಂದರು.
ಯೋಗದ ಬಗ್ಗೆ ವಿಶ್ವಾದ್ಯಂತ ಪ್ರಚಾರ ನಡೆಯುತ್ತಿದೆ. ಕರ್ನಾಟಕದ ಯೋಗ ಗುರುಗಳು ಇಡೀ ಜಗತ್ತಿನಲ್ಲಿ ಯೋಗದ ಕುರಿತು ಪ್ರಚಾರ ಮಾಡುವಲ್ಲಿ ಸಫಲರಾಗಿದ್ದಾರೆ. ಮೈಸೂರು ಜಗತ್ತಿನ ಯೋಗ ಕೇಂದ್ರದ ಸ್ಥಾನವಾಗಿದ್ದು, ಪ್ರತಿಯೊಬ್ಬರು ಯೋಗವನ್ನು ತಮ್ಮ ಜೀವನದ ಒಂದು ಭಾಗವಾಗಿಸಬೇಕು ಎಂದರು.
ಯೋಗ ಸ್ಪರ್ಧೆಯಲ್ಲಿ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ
ಡಿ.ಕಿಶೋರಬಾಬು, ಅಪರ ಜಿಲ್ಲಾಧಿಕಾರಿ ಜಿ.ಗೋವಿಂದರೆಡ್ಡಿ, ಕೆಜಿಎಎಂಒ ರಾಜ್ಯಾಧ್ಯಕ್ಷ ಆಯುಷ್ ಡಾ| ಶಂಕರಗೌಡ ಎಸ್ .ಪಾಟೀಲ, ಜಿಲ್ಲಾ ಆಯುಷ್ ಅಧಿಕಾರಿ ಡಾ| ರೂಪಾಬಾಯಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ ಗುಣಾರೆ, ವಿವಿಧ ಇಲಾಖೆಗಳ ಅಧಿಕಾರಿಗಳು, ಸಂಘ-ಸಂಸ್ಥೆಗಳ ಸದಸ್ಯರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ವಿವಿಧೆಡೆ ಯೋಗ ದಿನಾಚರಣೆ: ಜಿಲ್ಲಾ ಕಾರಾಗೃಹದಲ್ಲೂ ಯೋಗ ದಿನ ಆಚರಿಸಲಾಯಿತು. ಆಯುಷ್ ಜಿಲ್ಲಾಧಿಕಾರಿ ಡಾ| ರೂಪಾಬಾಯಿ ಕಾರ್ಯಕ್ರಮ ಉದ್ಘಾಟಿಸಿದರು. ನವೋದಯ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲೂ ಯೋಗ ದಿನಾಚರಣೆ ನಡೆಯಿತು. ಸಂಸ್ಥೆ ಮುಖ್ಯಸ್ಥ ಎಸ್.ಆರ್.ರೆಡ್ಡಿ ನೇತೃತ್ವದಲ್ಲಿ ಕಾಲೇಜಿನ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ನಗರದ ಸೋಮಸುಭದ್ರಮ್ಮ ರಾಮನಗೌಡ ಮಹಿಳಾ ವಿದ್ಯಾಲಯದಲ್ಲೂ ಆರ್ಟ್ ಆಫ್ ಲಿವಿಂಗ್ ಸಂಸ್ಥೆ ವತಿಯಿಂದ ಯೋಗ ದಿನ ಆಚರಿಸಲಾಯಿತು. ಸಂಸ್ಥೆ ಸಂಚಾಲಕ ಮಲ್ಲಿಕಾರ್ಜುನ ಸ್ವಾಮಿ ಯೋಗದ ಕುರಿತು ಉಪನ್ಯಾಸನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.