ವೇತನಾನುದಾನ ಕೊಡಿ
ಖಾಸಗಿ ಶಾಲಾ-ಕಾಲೇಜು ಆಡಳಿತ ಮಂಡಳಿ ಒಕ್ಕೂಟ ಪ್ರತಿಭಟನೆ ಆರ್‌ಟಿಇ ದಾಖಲಾತಿ ಮುಂದುವರಿಸಿ
Team Udayavani, Dec 11, 2019, 6:10 PM IST
ರಾಯಚೂರು: 1995ರಿಂದ ಆರಂಭಗೊಂಡ ಎಲ್ಲ ಖಾಸಗಿ ಶಾಲಾ,
ಕಾಲೇಜುಗಳ ಶಿಕ್ಷಕರಿಗೆ ಹಾಗೂ ಉಪನ್ಯಾಸಕರಿಗೆ ವೇತನಾನುದಾನ
ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕಲ್ಯಾಣ ಕರ್ನಾಟಕ
ಖಾಸಗಿ ಅನುದಾನ ರಹಿತ ಶಾಲೆ-ಕಾಲೇಜು ಆಡಳಿತ ಮಂಡಳಿಗಳ
ಒಕ್ಕೂಟದ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಮಂಗಳವಾರ ಪ್ರತಿಭಟನೆ
ನಡೆಸಲಾಯಿತು.
ನಗರ ಸೇರಿ ಜಿಲ್ಲಾದ್ಯಂತ ಮಂಗಳವಾರ ಖಾಸಗಿ ಶಾಲಾ-ಕಾಲೇಜುಗಳನ್ನು ಬಂದ್ ಮಾಡಿದ ಒಕ್ಕೂಟದ ಪದಾಧಿಕಾರಿಗಳು, ನಗರದ ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ರ್ಯಾಲಿ ನಡೆಸಿದರು. ಟಿಪ್ಪು ಸುಲ್ತಾನ ಉದ್ಯಾನವನದಲ್ಲಿ ಧರಣಿ ನಡೆಸಿ ಡಿಸಿಗೆ ಮನವಿ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು ಅನುದಾನಿತ ಶಾಲಾ, ಕಾಲೇಜು ಮಕ್ಕಳಿಗೆ ನೀಡುವ ಎಲ್ಲ ಸರ್ಕಾರಿ ಸೌಲಭ್ಯಗಳನ್ನು ಅನುದಾನ ರಹಿತ ಶಾಲಾ, ಕಾಲೇಜು ಮಕ್ಕಳಿಗೂ ಕಲ್ಪಿಸಬೇಕು. ಆರ್ ಟಿಇ ದಾಖಲಾತಿಯನ್ನು ಮೊದಲಿನಂತೆ ಮುಂದುವರಿಸಬೇಕು. ಆರ್ಥಿಕವಾಗಿ ಹಿಂದುಳಿದ ಪಾಲಕರ ಮಕ್ಕಳಿಗೆ ಸಾಮಾಜಿಕ ನ್ಯಾಯ ದೊರಕಿಸಿಕೊಡಬೇಕು ಎಂದು ಆಗ್ರಹಿಸಿದರು.
1995ರ ಮುಂಚೆ ಆರಂಭಗೊಂಡ ಶಾಲಾ ಕಾಲೇಜುಗಳನ್ನು ವೇತನಾನುದಾನಕ್ಕೆ ಒಳಪಡಿಸಲಾಗಿದೆ. ಆದರೆ,1995ರ ನಂತರ ಆರಂಭಗೊಂಡ ಶಾಲಾ ಕಾಲೇಜುಗಳ ಮನವಿಯನ್ನು ಯಾವ ಸರ್ಕಾರವೂ ಪುರಸ್ಕರಿಸುತ್ತಿಲ್ಲ ಎಂದು ಆರೋಪಿಸಿದರು.
ಈಗಾಗಲೇ ಸಾಕಷ್ಟು ನೌಕರರು ನಿವೃತ್ತಿ ಅಂಚಿನಲ್ಲಿದ್ದು ಅವರ ಇಷ್ಟು ವರ್ಷದ ಸೇವೆ ವ್ಯರ್ಥವಾಗಲಿದೆ. ಸರ್ಕಾರದಿಂದ 1ರಿಂದ 5ನೇ ತರಗತಿವರೆಗೆ ಅನುಮತಿ ಪಡೆದ ಖಾಸಗಿ ಶಾಲೆಗಳಿಗೆ ಹೈಕೋರ್ಟ್ ಆದೇಶದಂತೆ 6ರಿಂದ 8ನೇ ತರಗತಿವರೆಗೆ ಸ್ವಾಭಾವಿಕ ಬೆಳವಣಿಗೆಯ ಆಧಾರದ ಮೇಲೆ ಅನುಮತಿ ನೀಡಬೇಕು.
ಅನುದಾನ ರಹಿತ ಶಾಲಾ ಕಾಲೇಜು ಆಡಳಿತ ಮಂಡಳಿ ಅಧೀನದಲ್ಲಿರುವ ಕೃಷಿ ಜಮೀನನ್ನು 109ರ ಅಡಿ ಶುಲ್ಕ ರಹಿತ ಕಂದಾಯ ಜಮೀನನ್ನಾಗಿ ಮಾಡಿ ಆಡಳಿತ ಮಂಡಳಿಗೆ ವರ್ಗಾಯಿಸಬೇಕು. ವೇತನಾನುದಾನ ನೀಡುವವರೆಗೆ ತಾತ್ಕಾಲಿಕವಾಗಿ ಸರ್ಕಾರಿ ಶಾಲೆಯಲ್ಲಿ ಈಗಾಗಲೇ ಪ್ರಾಥಮಿಕ ಶಾಲಾ ಶಿಕ್ಷಕರಿಗೆ 6,500 ರೂ. ಮತ್ತು ಪ್ರೌಢಶಾಲಾ ಶಿಕ್ಷಕರಿಗೆ 12,500 ರೂ. ನೀಡುತ್ತಿದ್ದು ಅದರಂತೆ ಅನುದಾನ ರಹಿತ ಶಾಲೆಗಳಲ್ಲಿ ಕೆಲಸ ಮಾಡುವ ಶಿಕ್ಷಕರಿಗೆ ವೇತನ ಪಾವತಿಸಬೇಕೆಂಬ ಇತರೆ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು.
ಒಕ್ಕೂಟದ ಪದಾಧಿಕಾರಿಗಳಾದ ರವಿಕುಮಾರ, ರಾಜಾ ಶ್ರೀನಿವಾಸ, ಶಂಕರಲಿಂಗಯ್ಯ, ನರಸಪ್ಪ, ಗಿರೀಶ ಆಚಾರಿ, ಶೇಖ ಮೆಹಬೂಬ್, ಮಹಾಂತೇಶ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ
CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ
CT Ravi ಬಂಧನ ಪ್ರಕರಣ; ಗೃಹ ಸಚಿವರು ಸ್ಪಷ್ಟನೆ ನೀಡಲಿ: ಕೋಟ
Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ
Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ
CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.