ಕಾಮಗಾರಿ ಮಾಹಿತಿ ವೆಬ್‌ಸೈಟ್‌ನಲ್ಲಿ ಅಪ್‌ಡೇಟ್ ಮಾಡಿ
Team Udayavani, Nov 15, 2019, 6:31 PM IST
ರಾಯಚೂರು: ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಕೈಗೊಂಡ ಕಾಮಗಾರಿಗಳ ಮಾಹಿತಿಯನ್ನು ಮಂಡಳಿ ವೆಬ್‌ಸೈಟ್‌ಗೆ ಕಾಲಕಾಲಕ್ಕೆ ಅಪ್‌ಡೇಟ್ ಮಾಡದಿದ್ದಲ್ಲಿ ಸಮಸ್ಯೆಗೆ ಸಿಲುಕುತ್ತೀರಿ ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ ಅಧಿಕಾರಿಗಳಿಗೆ ಎಚ್ಚರಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಕೆಕೆಆರ್‌ಡಿಬಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಪಿಡಬ್ಲ್ಯೂಡಿ ಸೇರಿದಂತೆ ವಿವಿಧ ಇಲಾಖೆಗಳು ಕಾಮಗಾರಿ ಮುಗಿಸದ್ದಕ್ಕೆ ಬೇಸರ ವ್ಯಕ್ತಪಡಿಸಿದರು. 2017-18, 2018-19ನೇ ಸಾಲಿನಲ್ಲಿ ಮಂಡಳಿ ಅನುಮೋದನೆ ನೀಡಿದ ಕಾಮಗಾರಿಗಳ ಕೆಲಸ ಶುರು ಮಾಡಿದರೂ ಪ್ರಗತಿಯನ್ನು ವೆಬ್‌ಸೈಟ್‌ನಲ್ಲಿ ದಾಖಲಿಸಿಲ್ಲ. ಯಾಕೆ ಇಷ್ಟು ನಿಷ್ಕಾಳಜಿ ತೋರುತ್ತಿದ್ದಿರಿ ಎಂದು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಮಂಡಳಿಯ ವೆಬ್‌ಸೈಟ್‌ನಲ್ಲಿ ಕಾಮಗಾರಿಗಳ ಪ್ರಗತಿ ವಿವರ ದಾಖಲಿಸುವುದು ಕಡ್ಡಾಯ. ಕಾಮಗಾರಿಗಳ ಆರಂಭ, ವಿವಿಧ ಹಂತಗಳು ಹಾಗೂ ಮುಗಿದಿದ್ದರೆ ಆ ಮಾಹಿತಿಯನ್ನು ಕೂಡಲೇ ಅಪ್‌ಡೇಟ್ ಮಾಡಬೇಕು. 2017-18, 2018-19ನೇ ಸಾಲಿನಲ್ಲಿ ಅಂದಾಜು ಪಟ್ಟಿ ಅನುಮೋದನೆಗೊಂಡ ಕಾಮಗಾರಿಗಳ ಪ್ರಗತಿ ವಿವರಗಳನ್ನು ಕೂಡಲೇ ಅಪ್‌ಡೇಟ್ ಮಾಡಬೇಕು. 2019-20ನೇ ಸಾಲಿನಲ್ಲಿ ಕಾಮಗಾರಿಗಳ ಅಂದಾಜು ಪಟ್ಟಿ ಸಲ್ಲಿಸದಿದ್ದರೆ ಕೂಡಲೇ ಸಲ್ಲಿಸುವಂತೆ ಸೂಚಿಸಿದರು.
ಮಂಡಳಿ ಅ ಧಿಕಾರಿಗಳು ಎಲ್ಲ ಕಾಮಗಾರಿ ಪರಿಶೀಲಿಸುತ್ತಿದ್ದಾರೆ. ವಿಡಿಯೋ ಕಾನ್ಫರೆನ್ಸ್‌ನಲ್ಲಿ ಈ ಕುರಿತು ಮಾಹಿತಿ ಕೇಳುತ್ತಾರೆ. ಇದೇ ಮಾಹಿತಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಗಮನಕ್ಕೆ ಹೋಗಲಿದ್ದು, ಸಮಸ್ಯೆ ಎದುರಿಸಬೇಕಾಗುತ್ತದೆ. ಭೌತಿಕ ಸಾಧನೆ ಕಡಿಮೆ ತೋರಿಸಿ, ಅರ್ಥಿಕ ಸಾಧನೆ ಹೆಚ್ಚು ತೋರಿಸಿದರೆ ಭೌತಿಕ ಸಾಧನೆಯನ್ನು ಸ್ಪಷ್ಟವಾಗಿ ನಮೂದಿಸಿರುವದಿಲ್ಲವೆಂದೇ ಅರ್ಥ. ಭೌತಿಕ ಸಾಧನೆಯನ್ನು ಸ್ಪಷ್ಟವಾಗಿ ದಾಖಲಿಸಬೇಕು ಎಂದು ಸಲಹೆ ನೀಡಿದರು.
ಮ್ಯಾಕ್ರೋ ಯೋಜನೆಗೆ ಸಂಬಂಧಿ ಸಿದಂತೆ ಆಡಳಿತಾತ್ಮಕ ಅನುಮೋದನೆ ನೀಡಲಾಗುವುದು. ಅವುಗಳನ್ನು ಪಡೆಯಬೇಕು. ಪರಿವೀಕ್ಷಣಾ ಮಂದಿರದ ನವೀಕರಣದ ಪ್ರಸ್ತಾವನೆ ಸಲ್ಲಿಸುವಂತೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಸಭೆಯಲ್ಲಿ ವಿವಿಧ ಇಲಾಖೆ ಕಾರ್ಯನಿರ್ವಾಹಕ ಇಂಜಿನೀಯರ್ ಗಳು, ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು. ಸಭೆಗೆ ಗೈರಾದ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗ ಹಾಗೂ ಗ್ರಾಮೀಣ ನೀರು ಪೂರೈಕೆ ಇಲಾಖೆ ಇಇಗೆ ನೋಟಿಸ್ ನೀಡುವಂತೆ ಎಡಿಸಿ ದುರುಗೇಶರಿಗೆ ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ
Gundlupete: ಬೋನಿಗೆ ಬಿದ್ದ ಗಂಡು ಚಿರತೆ
Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!
Belekeri Mining Case: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಜೈಲು ಶಿಕ್ಷೆಗೆ ಹೈಕೋರ್ಟ್ ತಡೆ
CID Inquiry: ಪರಿಷತ್ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
Max: ಇಂದು ಸುದೀಪ್ ಮ್ಯಾಕ್ಸ್ ತೆರೆಗೆ; ಆ್ಯಕ್ಷನ್ ಅಡ್ಡದಲ್ಲಿ ಕಿಚ್ಚ ಮಿಂಚು
Gundlupete: ಬೋನಿಗೆ ಬಿದ್ದ ಗಂಡು ಚಿರತೆ
Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.