ಹಿಂಗಾರು ಹಂಗಾಮಿಗೆ ಬಿತ್ತನೆ ಬೀಜ ಸಂಗ್ರಹಿಸಿ
ಪೂರ್ವಭಾವಿ ಸಭೆಯಲ್ಲಿ ಕೃಷಿ ಅಧಿಕಾರಿಗೆ ಜಿಲ್ಲಾಧಿಕಾರಿ ಸೂಚನೆ ಕಡಲೆ-ಜೋಳ-ಶೇಂಗಾ ಬೀಜಕ್ಕೆ ಬೇಡಿಕೆ ಹೆಚ್ಚು
Team Udayavani, Oct 4, 2019, 12:04 PM IST
ರಾಯಚೂರು: ಹಿಂಗಾರು ಹಂಗಾಮಿನಲ್ಲಿ ಜಿಲ್ಲೆಯ ರೈತರಿಗೆ ಅಗತ್ಯವಿರುವ ಪ್ರಮಾಣಿತ ಬಿತ್ತನೆ ಬೀಜಗಳು ಹಾಗೂ ರಸಗೊಬ್ಬರ ವಿತರಣೆಗೆ ಸಮರ್ಪಕ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ ಕೃಷಿ ಇಲಾಖೆ ಅಧಿಕಾರಿಗೆ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ 2019-20ನೇ ಸಾಲಿನಲ್ಲಿ ಹಿಂಗಾರು ಹಂಗಾಮಿನಲ್ಲಿ ಬಿತ್ತನೆ ಬೀಜ ಪೂರೈಸುವ ಕುರಿತ ಪೂರ್ವ ಸಿದ್ಧತಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯ ಕೆಲವೊಂದು ಕಡೆ ಮಳೆ ಅನಿಶ್ಚಿತತೆಯಿಂದ ಬಿತ್ತನೆ ಸಾಧ್ಯವಾಗಿಲ್ಲ. ಇದೀಗ ಹಿಂಗಾರು ಹಂಗಾಮಿನಲ್ಲಿ ಮಳೆಯಾಗುತ್ತಿದ್ದು, ಮುಂಗಾರು, ಹಿಂಗಾರು ಎರಡೂ ಹಂಗಾಮಿನ ರೈತರಿಂದ ಬಿತ್ತನೆ ಬೀಜಕ್ಕೆ ಬೇಡಿಕೆ ಬರಲಿದೆ. ಈ ಅಂಶವನ್ನು ಗಮನದಲ್ಲಿಟ್ಟುಕೊಂಡು ಜಿಲ್ಲೆಯಲ್ಲಿ ರೈತರಿಗೆ ಅಗತ್ಯವಿರುವ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಪೂರೈಕೆಗೆ ಕ್ರಮ ವಹಿಸಿ ಎಂದು ಹೇಳಿದರು.
ಮುಂಗಾರು ಹಂಗಾಮಿಗೆ ಕಡಲೆ, ಜೋಳ ಹಾಗೂ ಶೇಂಗಾ ಬಿತ್ತನೆ ಬೀಜಗಳಿಗೆ ಬೇಡಿಕೆ ಹೆಚ್ಚಾಗಿದೆ. ಭತ್ತದ ನಂತರ ಕಡಲೆ ಹೆಚ್ಚು ಬೇಡಿಕೆಯ ಬೆಳೆಯಾಗಿದ್ದು, ಅವುಗಳನ್ನು ಪೂರೈಸಲು ಬೀಜ ನಿಗಮ ಸೇರಿ ಸಂಬಂಧಿ ಸಿದ ಏಜೆನ್ಸಿಗಳೊಂದಿಗೆ ಚರ್ಚಿಸಿ ಅವುಗಳನ್ನು ಸಂಗ್ರಹಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.
ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಚೇತನಾ ಪಾಟೀಲ ಮಾತನಾಡಿ, ಹಿಂಗಾರು ಹಂಗಾಮಿನಲ್ಲಿ 1,51,728 ಹೆಕ್ಟೇರ್ ಪ್ರದೇಶದಲ್ಲಿ ಕಡಲೆ ಬಿತ್ತನೆಯಾಗಬೇಕಿದೆ. 25,035 ಕ್ವಿಂಟಲ್ ಬಿತ್ತನೆ ಬೀಜದ ಬೇಡಿಕೆಯಿದ್ದು, 20,902 ಕ್ವಿಂಟಲ್ ಲಭ್ಯವಿದೆ. 80,380 ಹೆಕ್ಟೇರ್ ಪ್ರದೇಶದಲ್ಲಿ ಜೋಳ ಬಿತ್ತನೆಯಾಗಬೇಕಿದ್ದು, ಅದಕ್ಕೆ 1,989 ಕ್ವಿಂಟಲ್ ಬಿತ್ತನೆ ಬೀಜದ ಬೇಡಿಕೆಯಿದ್ದು, 500 ಕ್ವಿಂಟಲ್‌ನಷ್ಟು ಲಭ್ಯವಿದೆ. 38,815 ಹೆಕ್ಟೇರ್ ಪ್ರದೇಶದಲ್ಲಿ ಶೇಂಗಾ ಬೆಳೆಯಲು 18,902 ಕ್ವಿಂಟಲ್ ಬಿತ್ತನೆ ಬೀಜದ ಅವಶ್ಯಕತೆಯಿದ್ದು, 20,000 ಕ್ವಿಂಟಲ್‌ನಷ್ಟು ಬಿತ್ತನೆ ಬೀಜ ಲಭ್ಯವಿದೆ. ಅಗತ್ಯವಿರುವ ಬಿತ್ತನೆ ಬೀಜಗಳನ್ನು ರಾಜ್ಯ ಬೀಜ ನಿಗಮ ಸೇರಿದಂತೆ ವಿವಿಧೆಡೆಯಿಂದ ಪೂರೈಸಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ ಎಂದು ವಿವರಿಸಿದರು.
ರಸಗೊಬ್ಬರಕ್ಕೆ ಸಂಬಂ ಧಿಸಿ ಹಿಂಗಾರು ಹಂಗಾಮಿಗೆ ಯೂರಿಯಾ 66,159 ಮೆಟ್ರಿಕ್ ಟನ್‌ನಷ್ಟು, ಡಿಎಪಿ 20,186 ಮೆಟ್ರಿಕ್ ಟನ್, ಎಂಒಪಿ 10,464 ಮೆಟ್ರಿಕ್ ಟನ್, ಎಸ್‌ಎಸ್‌ಪಿ 3,931 ಮೆಟ್ರಿಕ್ ಟನ್, 15:15:15 ಗೊಬ್ಬರ 1,713 ಮೆಟ್ರಿಕ್ ಟನ್, 10:26:26 ಗೊಬ್ಬರ 4,467 ಮೆಟ್ರಿಕ್ ಟನ್, 12:32:16 ಗೊಬ್ಬರ 1,548 ಮೆಟ್ರಿಕ್ ಟನ್, 14:35:14 ಗೊಬ್ಬರ 1,818 ಮೆಟ್ರಿಕ್ ಟನ್‌ನಷ್ಟು, 20:20:0 ಗೊಬ್ಬರ 13,059 ಮೆಟ್ರಿಕ್ ಟನ್, 16:20:0 ಗೊಬ್ಬರ 21,139 ಮೆಟ್ರಿಕ್ ಟನ್, 14:28:14 ಗೊಬ್ಬರ 1,377 ಮೆಟ್ರಿಕ್ ಟನ್, 28:28:0 ಗೊಬ್ಬರ 4,214 ಮೆಟ್ರಿಕ್ ಟನ್, 23:23:0 ಗೊಬ್ಬರ 3,696 ಮತ್ತು ಆಲ್ ಕಾಂಪ್ಲೆಕ್ಸ್ 58,333
ಮೆಟ್ರಿಕ್ ಟನ್‌ನಷ್ಟು ಜಿಲ್ಲೆಗೆ ಅಗತ್ಯವಿದೆ. ಅವುಗಳನ್ನು ರೈತರಿಗೆ ಪೂರೈಸುವುದಾಗಿ ತಿಳಿಸಿದರು. ಕೃಷಿ ಇಲಾಖೆ ಉಪ ನಿರ್ದೇಶಕರು, ಬೀಜ ನಿಗಮದ ಅಧಿಕಾರಿಗಳು ಸೇರಿ ಇತರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.