ಚಿಕಿತ್ಸೆಯಿಂದ ಕ್ಷಯರೋಗ ನಿವಾರಣೆ

ಶಂಕಿತ ರೋಗಿಗಳ ಕಫ ಸಂಗ್ರಹಿಸಿ ತಪಾಸಣೆ • ಆರೋಗ್ಯ ಇಲಾಖೆ ಸಿಬ್ಬಂದಿ ಮನೆ-ಮನೆಗೆ ಭೇಟಿ

Team Udayavani, Jul 17, 2019, 10:39 AM IST

17-July-9

ರಾಯಚೂರು: ಹರಿಜನವಾಡಾದ ಪ್ರಾಥಮಿಕ ಆರೋಗ್ಯ ಕೇಂದ್ರದ ಸಮುದಾಯ ಭವನದಲ್ಲಿ ಸಕ್ರೀಯ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸೆ ಆಂದೋಲನಕ್ಕೆ ಚಾಲನೆ ನೀಡಲಾಯಿತು.

ರಾಯಚೂರು: ಸೂಕ್ತ ಚಿಕಿತ್ಸೆಯಿಂದ ಕ್ಷಯರೋಗ ನಿವಾರಣೆ ಸಾಧ್ಯ. ಈ ನಿಟ್ಟಿನಲ್ಲಿ ಪ್ರತಿಯೊಬ್ಬ ಕಿರಿಯ ಆರೋಗ್ಯ ಸಹಾಯಕರು ಮತ್ತು ಆಶಾ ಕಾರ್ಯಕರ್ತೆಯರು ಹೆಚ್ಚು ಸಕ್ರೀಯವಾಗಿ ಕ್ಷಯರೋಗ ಪತ್ತೆ ಆಂದೋಲನದಲ್ಲಿ ಪಾಲ್ಗೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ| ಎಂ.ಕೆ.ಎಸ್‌.ನಸೀರ್‌ ಹೇಳಿದರು.

ಜು.27ರವರೆಗೆ ನಡೆಯುವ ಸಕ್ರೀಯ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸೆ ಆಂದೋಲನ ಕಾರ್ಯಕ್ರಮಕ್ಕೆ ನಗರದ ಹರಿಜನವಾಡದ ಪ್ರಾಥಮಿಕ ಆರೋಗ್ಯ ಕೇಂದ್ರದ ಸಮುದಾಯ ಭವನದಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು.

ರಾಯಚೂರು ತಾಲೂಕಿನಲ್ಲಿ 5,77,931 ಜನಸಂಖ್ಯೆಯಿದ್ದು, ಗ್ರಾಮೀಣ ಪ್ರದೇಶದ 32 ಹಳ್ಳಿಗಳ 52,629 ಮತ್ತು ನಗರದಲ್ಲಿ 26 ಬಡಾವಣೆಗಳ 57,101 ಜನರನ್ನು ಕ್ಷಯರೋಗ ತಪಾಸಣೆಗೆ ಒಳಪಡಿಸಲಾಗುವುದು ಎಂದರು.

ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ| ಸುರೇಂದ್ರಬಾಬು ಮಾತನಾಡಿ, ಕಿರಿಯ ಆರೋಗ್ಯ ಸಹಾಯಕರು ಮತ್ತು ಆಶಾ ಕಾರ್ಯಕರ್ತೆಯರು ಜು.27ರವರೆಗೆ ಮನೆ ಮನೆಗೆ ಭೇಟಿ ನೀಡಿ ಸಂಶಯಾಸ್ಪದ ರೋಗಿಗಳಲ್ಲಿ ಕೆಮ್ಮು ಇದ್ದರೆ ಅವರ ಕಫವನ್ನು ಪಡೆಯುತ್ತಾರೆ. ಕ್ಷಯ ರೋಗದಲ್ಲಿ ಎರಡು ರೀತಿ ಕ್ಷಯರೋಗ ಇರುತ್ತವೆ. ಶ್ವಾಸಕೋಶದ ಕ್ಷಯರೋಗ, ಶ್ವಾಸಕೋಶೇತ್ತರ ಕ್ಷಯರೋಗ. ಇಲಾಖೆ ಸಿಬ್ಬಂದಿ ಮನೆಗೆ ಭೇಟಿ ನೀಡಿದಾಗ ಸಾರ್ವಜನಿಕರು ಸಹಕಾರ ನೀಡಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಹೇಳಿದರು.

ತಾಲೂಕು ಆರೋಗ್ಯ ಅಧಿಕಾರಿ ಡಾ| ಎಂ.ಡಿ.ಶಾಕೀರ ಮೊಯಿದ್ದೀನ್‌ ಮಾತನಾಡಿ, ಸಕ್ರೀಯ ಕ್ಷಯರೋಗ ಪತ್ತೆ ಚಿಕಿತ್ಸಾ ಆಂದೋಲನ ಕಾರ್ಯಕ್ರಮದಲ್ಲಿ ಕ್ಷಯರೋಗದ ಲಕ್ಷಣಗಳ ಬಗ್ಗೆ ಸವಿವರವಾಗಿ ತಿಳಿಸಿದರು. ಒಂದು ವಾರಕ್ಕಿಂತ ಹೆಚ್ಚು ಕೆಮ್ಮು, ಸಂಜೆ ಜ್ವರ ಬರುವುದು, ತೂಕ ಕಡಿಮೆಯಾಗುವುದು, ಹಸಿವಾಗದಿರುವುದು, ಒಂದು ವೇಳೆ ಈ ಲಕ್ಷಣಗಳು ಕಂಡುಬಂದಲ್ಲಿ ಯಾವ ರೀತಿ ಕಫ ತೆಗೆಯಬೇಕು ಎಂಬ ವಿಧಾನವನ್ನು ತಿಳಿಸಿದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಸರೋಜಾ ಕೆ. ನಿರೂಪಿಸಿದರು. ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ| ಗಣೇಶ, ವೈದ್ಯಾಧಿಕಾರಿ ಡಾ| ಶಿವಕುಮಾರ, ಡಾ| ಅಹಮದಿ, ಉಪ ಜಿಲ್ಲಾ ಆರೋಗ್ಯ ಶಿಕ್ಷಾಣಾಧಿಕಾರಿ ಲಕ್ಷ್ಮೀ ಮಂಡಾಸ್‌, ಸಂಧ್ಯಾ, ಕ್ಷಯರೋಗ ನಿಯಂತ್ರಣ ಕಚೇರಿ ಸಿಬ್ಬಂದಿ, ಆರೋಗ್ಯ ಕೇಂದ್ರದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

MCC-BankArrest

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್‌ ಅಧ್ಯಕ್ಷನ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

MCC-BankArrest

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್‌ ಅಧ್ಯಕ್ಷನ ಬಂಧನ

KND-Amber-greece

Whale: ಅಂಬರ್‌ ಗ್ರೀಸ್‌ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!

Surthkal-Spota

Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.