ತುಂಗಾಭದ್ರೆಯಲ್ಲಿ ಭಕ್ತರ ಪುಣ್ಯ ಸ್ನಾನ
ಪೂರ್ವಾರಾಧನೆಗೆ ಹರಿದು ಬಂತು ಭಕ್ತರ ದಂಡು
Team Udayavani, Aug 17, 2019, 5:00 PM IST
ರಾಯಚೂರು: ಮಂತ್ರಾಲಯದಲ್ಲಿ ರಾಯರ ಪೂರ್ವಾರಾಧನೆಗೆ ಆಗಮಿಸಿದ ಭಕ್ತರು ತುಂಗಭದ್ರಾ ನದಿಯಲ್ಲಿ ಪುಣ್ಯಸ್ನಾನ ಮಾಡಿದರು.
ರಾಯಚೂರು: ಮಂತ್ರಾಲಯದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನೆ ಮಹೋತ್ಸವದ ವೇಳೆ ತುಂಗಭದ್ರಾ ನದಿ ತುಂಬಿ ಹರಿಯುತ್ತಿರುವುದು ಭಕ್ತರ ಮನೋಲ್ಲಾಸ ಇಮ್ಮಡಿಗೊಳಿಸಿದೆ.
ಆರಾಧನೆ ಗಾಗಿ ದೂರದೂರುಗಳಿಂದ ಬರುವ ಭಕ್ತರು ತುಂಬಿದ ತುಂಗಭದ್ರೆಯಲ್ಲಿ ಮಿಂದೆದ್ದು ರಾಯರ ದರ್ಶನಾಶೀರ್ವಾದ ಪಡೆಯುವ ಮೂಲಕ ಪುನೀತರಾಗುತ್ತಿದ್ದಾರೆ. ರಾಯರ ಪೂರ್ವಾರಾಧನೆ ಅಂಗವಾಗಿ ಶುಕ್ರವಾರ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ವಿಜೃಂಭಣೆಯಿಂದ ನಡೆದವು. ಕಳೆದ ಕೆಲ ದಿನಗಳ ಹಿಂದೆ ತುಂಗಭದ್ರಾ ಜಲಾಶಯದಿಂದ ನದಿಗೆ 2.30 ಲಕ್ಷ ಕ್ಯೂಸೆಕ್ ನೀರು ಹರಿಸಿದ್ದರಿಂದ ಪ್ರವಾಹ ಭೀತಿ ಎದುರಾಗಿತ್ತು. ಆದರೆ, ಈಗ ಕೇವಲ 79 ಸಾವಿರ ಕ್ಯೂಸೆಕ್ ನೀರು ಬರುತ್ತಿರುವ ಕಾರಣ ನದಿ ಶಾಂತವಾಗಿ ಹರಿಯುತ್ತಿದೆ. ಇದರಿಂದ ಭಕ್ತರು ನದಿಯಲ್ಲಿ ಇಳಿದು ಪುಣ್ಯಸ್ನಾನ ಮಾಡುತ್ತಿರುವುದು ಕಂಡು ಬರುತ್ತಿದೆ.
ನದಿಯಲ್ಲಿ ಯಾವುದೇ ಅಪಾಯಕ್ಕೆ ಆಸ್ಪದ ನೀಡದಂತೆ ಮಠದ ಆಡಳಿತ ಮಂಡಳಿ ಮೀನುಗಾರರನ್ನು ನಿಯೋಜಿಸಿದೆ. ಮೀನುಗಾರರು ಕೂಡ ನದಿ ಪಾತ್ರದಲ್ಲಿ ತೆಪ್ಪಗಳನ್ನು ಹಾಕಿದ್ದು, ಸದಾ ಕಾವಲು ಕಾಯುತ್ತಿದ್ದಾರೆ. ಅಲ್ಲದೇ, ಮಠದ ಆಡಳಿತ ಮಂಡಳಿ ಕೂಡ ನದಿ ಆಳಕ್ಕೆ ಇಳಿಯದೇ ದಡದಲ್ಲಿಯೇ ಕುಳಿತು ಸ್ನಾನ ಮಾಡುವಂತೆ ಎಚ್ಚರಿಕೆ ನೀಡುತ್ತಿದೆ. ಇನ್ನೂ ವೃದ್ಧ, ಅಂಗವಿಕಲಾರಿಗಾಗಿಯೇ ಸ್ನಾನಘಟ್ಟದಲ್ಲಿ ನಳಗಳ ವ್ಯವಸ್ಥೆ ಮಾಡಿದ್ದು, ಅಲ್ಲಿಯೇ ಸ್ನಾನ ಮಾಡಬಹುದಾಗಿದೆ. ಮಹಿಳೆಯರಿಗೆ ಬಟ್ಟೆ ಬದಲಾಯಿಸಲು ತಾತ್ಕಾಲಿಕ ಸ್ನಾನಗೃಹಗಳು, ಮೊಬೈಲ್ ಶೌಚಗೃಹಗಳನ್ನು ನಿರ್ಮಿಸಿ ಅನುಕೂಲ ಕಲ್ಪಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.