ಪೌರತ್ವ ಕಾಯ್ದೆ -ಎನ್‌ಆರ್‌ಸಿಗೆ ವಿರೋಧ

Team Udayavani, Dec 22, 2019, 1:10 PM IST

22-Decemebrer-8

ರಾಯಚೂರು: ಜಿಲ್ಲಾದ್ಯಂತ 144 ಸೆಕ್ಷನ್‌ ಜಾರಿಯಲ್ಲಿದ್ದರೂ ಕೇಂದ್ರ ಸರ್ಕಾರ ಜಾರಿಗೊಳಿಸಿದ ಪೌರತ್ವ ಕಾಯ್ದೆ ತಿದ್ದುಪಡಿ ಹಾಗೂ ನಾಗರಿಕ ರಾಷ್ಟ್ರೀಯ ನೋಂದಣಿ ಖಂಡಿಸಿ ಸೋಷಲಿಸ್ಟ್‌ ಯೂನಿಟಿ ಸೆಂಟರ್‌ ಆಫ್‌ ಇಂಡಿಯಾ-ಕಮ್ಯುನಿಸ್ಟ್‌ ಸಂಘಟನೆ ಕಾರ್ಯಕರ್ತರು ಶನಿವಾರ ಮುಖಕ್ಕೆ ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ ನಡೆಸಿದರು. ಪೊಲೀಸರು 15 ಜನ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನಗರದ ಭಗತ್‌ಸಿಂಗ್‌ ವೃತ್ತದಲ್ಲಿ ಸಂಘಟನೆ ನೇತೃತ್ವದಲ್ಲಿ ನೂರಾರು ಜನ ಮುಖಕ್ಕೆ ಕಪ್ಪು ಬಟ್ಟೆ ಕಟ್ಟಿಕೊಂಡು ರಸ್ತೆಗಿಳಿದು ಹೋರಾಟ ಮಾಡಿದರು. ಕೇಂದ್ರ ಸರ್ಕಾರದ ಧೋರಣೆ ಖಂಡಿಸಿ ಘೋಷಣೆ ಕೂಗಿದರು. ಕೆಲಕಾಲ ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸಲಾಯಿತು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಜಿಲ್ಲೆಯಲ್ಲಿ ಇಂದು ಕೂಡ ನಿಷೇಧಾಜ್ಞೆ ಜಾರಿಯಲ್ಲಿದ್ದು, ಹೋರಾಟ ಮೊಟಕು ಗೊಳಿಸುವಂತೆ ಸೂಚಿಸಿದರು. ಆದರೆ, ಪ್ರತಿಭಟನಾಕಾರರು ಮಾತ್ರ ಪೊಲೀಸರ ಮಾತಿಗೆ ಮನ್ನಣೆ ನೀಡದೆ ಹೋರಾಟ ಮುಂದುವರಿಸಿದರು. ಈ ವೇಳೆ ಬಲವಂತವಾಗಿ ಪ್ರತಿಭಟನಾಕಾರರನ್ನು ಚದುರಿಸಲು ಮುಂದಾದಾಗ ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಯಿತು.

ಡಿ.19ರಿಂದ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದು, ಪ್ರತಿಭಟನೆ, ಧರಣಿ ನಡೆಸುವುದು, ಗುಂಪು ಚರ್ಚೆ ನಡೆಸುವುದನ್ನು ನಿಷೇಧಿಸಲಾಗಿದೆ. ಆದರೆ, ಪೊಲೀಸರ ಅನುಮತಿ ಪಡೆಯದೆ ಹೋರಾಟ ನಡೆಸಿದ್ದಕ್ಕಾಗಿ ಪ್ರತಿಭಟನಾಕಾರರನ್ನು ಬಂಧಿಸಲಾಯಿತು. 144ಕಲಂ ನಿಷೇಧಾಜ್ಞೆ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಸ್ಥಳೀಯ ಸದರ್‌ ಬಜಾರ್‌ ಠಾಣೆ ಪೊಲೀಸರು ಪ್ರತಿಭಟನಾಕಾರರನ್ನು ಬಲವಂತದಿಂದ ವ್ಯಾನ್‌ ಹತ್ತಿಸಿದರು. 15 ಜನರ ವಿರುದ್ಧ ಕರ್ನಾಟಕ ಪೊಲೀಸ್‌ ಕಾಯ್ದೆ 71ರ ಪ್ರಕಾರ ಪ್ರಕರಣ ದಾಖಲಿಸಿಕೊಂಡರು.

ಇದಕ್ಕೂ ಮುನ್ನ ಮಾತನಾಡಿದ ಸಂಘಟನೆ ಮುಖಂಡರು, ದೇಶದಲ್ಲಿ ಒಂದೆಡೆ ಆರ್ಥಿಕ ಬಿಕ್ಕಟ್ಟು ಎದುರಾಗಿ ಯುವಕರಿಗೆ ಕೆಲಸ ಇಲ್ಲದ ಸ್ಥಿತಿ ಎದುರಾಗಿದೆ. ಇಂಥ ವೇಳೆ ಅನಗತ್ಯ ಮಸೂದೆಗಳನ್ನು ಜಾರಿಗೊಳಿಸಿ ದೇಶದಲ್ಲಿ ಅಶಾಂತಿ ನೆಲೆಸಲು ಕೇಂದ್ರ ಸರ್ಕಾರ ಹುನ್ನಾರ ನಡೆಸಿದೆ. ದಿನಬಳಕೆ ವಸ್ತುಗಳ ಬೆಲೆ ಗಗನಕ್ಕೇರಿದ್ದು, ಬಡಜನರು ಜೀವನ ನಡೆಸುವುದೇ ಕಷ್ಟವಾಗುತ್ತಿದೆ ಎಂದು ದೂರಿದರು.

ಇಂಥ ವೇಳೆ ದೇಶದ ನಾಗರಿಕರು ನೆಮ್ಮದಿಯಿಂದ ಬಾಳಲು ಆಗದಂತ ಕಾನೂನು ಜಾರಿ ಮಾಡುತ್ತಿರುವುದು ಖಂಡನೀಯ. ಇದರಿಂದ ಜನ ಆತಂಕದಲ್ಲೇ ದಿನದೂಡಬೇಕಿದ್ದು, ಕೂಡಲೇ ಮಸೂದೆ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ಸಂಘಟನೆ ಮುಖಂಡರಾದ ಚಂದ್ರಗಿರೀಶ, ಶರಣಪ್ಪ ಉದ್ಬಾಳ, ಎನ್‌.ಎಸ್‌.ವೀರೇಶ, ಚನ್ನಬಸವ ಜಾನೇಕಲ್‌, ಮಹೇಶ, ಪ್ರಮೋದ ಕುಮಾರ, ಮಲ್ಲನಗೌಡ, ಆಂಜನೇಯ, ಸಲೀಂ, ಮಹ್ಮದ್‌ ಇಕ್ಬಾಲ್‌, ನಿಸಾರ್‌ ಅಹ್ಮದ್‌, ಈಶ್ವರ, ಗಣೇಶ, ಚೋಟುಬಾಯಿ ಸೇರಿದಂತೆ ಅನೇಕರಿದ್ದರು.

ಟಾಪ್ ನ್ಯೂಸ್

Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ

Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ

Maha-Leaders

Assembly Election: ಮಹಾರಾಷ್ಟ್ರ ಕದನದಲ್ಲಿ ಘಟಾನುಘಟಿಗಳ ಭವಿಷ್ಯ ಪಣಕ್ಕೆ

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

Siddu-Somanna

MUDA: ಸುಮ್ನಿರಯ್ಯ ಗೊತ್ತಿಲ್ದೆ ಮಾತಾಡ್ತಿಯಾ: ಸೋಮಣ್ಣಗೆ ಸಿದ್ದರಾಮಯ್ಯ ಪ್ರೀತಿಯ ಗದರಿಕೆ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Siddu–Muniyappa

Ration Card: ಬಡವರಿಗೆ ಬಿಪಿಎಲ್‌ ಕಾರ್ಡ್‌ ತಪ್ಪದಂತೆ ನೋಡಿಕೊಳ್ಳಿ: ಸಿಎಂ ಸೂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

10

Puttur: ರಸ್ತೆಯಲ್ಲಿ ಕಾರ್ಮಿಕನ ಮೃತದೇಹ; ಮೂವರ ಮೇಲೆ ಪ್ರಕರಣ ದಾಖಲು; ಓರ್ವ ವಶಕ್ಕೆ

SUBHODH

Bantwala: ಕೆದಿಲ: ಸಿಡಿಲಿಗೆ ಮೃತಪಟ್ಟ ಬಾಲಕನಿಗೆ ಕಣ್ಣೀರ ವಿದಾಯ

1-karkala

Karkala: ನಕ್ಸಲ್ ನಾಯಕ ವಿಕ್ರಂ ಗೌಡ ಹೆಬ್ರಿಯ‌ ಕಾಡಿನಲ್ಲಿ ಎನ್ ಕೌಂಟರ್ ಗೆ ಬಲಿ

Cheluvaraya-swamy

By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ

Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ

Maha-Leaders

Assembly Election: ಮಹಾರಾಷ್ಟ್ರ ಕದನದಲ್ಲಿ ಘಟಾನುಘಟಿಗಳ ಭವಿಷ್ಯ ಪಣಕ್ಕೆ

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

Siddu-Somanna

MUDA: ಸುಮ್ನಿರಯ್ಯ ಗೊತ್ತಿಲ್ದೆ ಮಾತಾಡ್ತಿಯಾ: ಸೋಮಣ್ಣಗೆ ಸಿದ್ದರಾಮಯ್ಯ ಪ್ರೀತಿಯ ಗದರಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.