ವಿದ್ಯುತ್‌ ಅವಘಡ; ಮುಗಿಯದ ದುರಸ್ತಿ ಕಾರ್ಯ

ಡಿಸಿ ಕಚೇರಿ ಕೆಲಸ ಕಾರ್ಯ ನಿಧಾನ • ತುರ್ತು ಕೆಲಸಗಳಿಗೆ ಮಾತ್ರ ಆದ್ಯತೆ • ಕೆಲಸ ಮುಗಿಯಲು ಇನ್ನೂ ನಾಲ್ಕಾರು ದಿನ ಬೇಕು

Team Udayavani, Jun 20, 2019, 10:22 AM IST

20-June-4

ರಾಯಚೂರು: ಇನ್‌ವಾರ್ಡ್‌ಗೆ ಬರುವ ಅರ್ಜಿ ಸೇರಿ ಅಗತ್ಯ ಕೆಲಸಗಳನ್ನು ತ್ವರಿತಗತಿಯಲ್ಲಿ ಮಾಡಿಕೊಡಲು ಡಿಸಿ ಕಚೇರಿ ಸಭಾಂಗಣಕ್ಕೆ ಕಂಪ್ಯೂಟರ್‌ ಸ್ಥಳಾಂತರಿಸಿರುವುದು.

ರಾಯಚೂರು: 10 ದಿನಗಳ ಹಿಂದೆ ವಿದ್ಯುತ್‌ ಶಾರ್ಟ್‌ ಸರ್ಕಿಟ್ನಿಂದಾಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿದ್ಯುತ್‌ ಅವಘಡ ಸಂಭವಿಸಿದ್ದು, ಸಾಕಷ್ಟು ವಸ್ತುಗಳು ಸುಟ್ಟು ಹೋಗಿದ್ದವು. ಅದರ ದುರಸ್ತಿ ಕಾರ್ಯ ಇನ್ನೂ ನಡೆಯುತ್ತಿದ್ದು, ದೈನಂದಿನ ಕೆಲಸ ಕಾರ್ಯಗಳಿಗೆ ಅಡಚಣೆಯಾಗುತ್ತಿದೆ ಎನ್ನಲಾಗುತ್ತಿದೆ.

ಜೂ.9ರಂದು ರಾತ್ರಿ ವಿದ್ಯುತ್‌ ಅವಘಡ ಸಂಭವಿಸಿದ್ದು, 10ನೇ ತಾರೀಖು ಬೆಳಗ್ಗೆ ಪ್ರಕರಣ ಬೆಳಕಿಗೆ ಬಂದಿತ್ತು. ಕಚೇರಿ ಸಂಪೂರ್ಣ ಸುಟ್ಟು ಕರಕಲಾಗಿದ್ದು, ನಾಲ್ಕಾರು ಕಂಪ್ಯೂಟರ್‌ಗಳು, ಕೆಲ ದಾಖಲೆಗಳು ಹಾಗೂ ಪೀಠೊಪಕರಣಗಳು ಸುಟ್ಟು ಹೋಗಿದ್ದವು. ಈಗ ಕಚೇರಿಯಲ್ಲಿ ಸಂಪೂರ್ಣ ಮರು ವೈರಿಂಗ್‌ ಕಾರ್ಯ ಕೈಗೆತ್ತಿಕೊಂಡಿದ್ದು, 10 ದಿನ ಕಳೆದರೂ ಇನ್ನೂ ನಡೆಯುತ್ತಿದೆ. ಅದರ ಜತೆಗೆ ಪೀಠೊಪಕರಣಗಳ ದುರಸ್ತಿ ಕಾರ್ಯ ನಡೆಯುತ್ತಿದೆ. ಆದರೆ, ನಾನಾ ಕೆಲಸ ಹೊತ್ತು ಆಗಮಿಸುವ ಸಾರ್ವಜನಿಕರಿಗೆ ತಕ್ಷಣಕ್ಕೆ ಕೆಲಸ ಆಗುತ್ತಿಲ್ಲ. ಇದರಿಂದ ಬಂದ ದಾರಿಗೆ ಸುಂಕವಿಲ್ಲದಂತೆ ಹಿಂದಿರುಗಿ ಹೋಗಬೇಕಿದೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣಕ್ಕೆ ಈಗ ಕೆಲ ಕಂಪ್ಯೂಟರ್‌ಗಳನ್ನು ಸ್ಥಳಾಂತರ ಮಾಡಿದ್ದು, ತುರ್ತು ಕೆಲಸಗಳನ್ನು ಅಲ್ಲಿಯೇ ಮಾಡಿಕೊಡಲಾಗುತ್ತಿದೆ. ಆದರೆ, ಉಳಿದ ಕೆಲಸ ಯಾವುದೇ ಕೆಲಸಗಳಿದ್ದರೂ ಸದ್ಯಕ್ಕೆ ಆಗುವುದಿಲ್ಲ ಎಂದು ಹಿಂದಕ್ಕೆ ಕಳುಹಿಸಲಾಗುತ್ತಿದೆ.

ಹಳೇ ಕಟ್ಟಡವಾದ್ದರಿಂದ ಸಮಸ್ಯೆ: ಜಿಲ್ಲಾಧಿಕಾರಿ ಕಚೇರಿ ತುಂಬಾ ಹಳೇ ಕಟ್ಟಡವಾಗಿದ್ದು, ಅಲ್ಲಿ ಈ ಮುಂಚೆ ಮಾಡಿದ್ದ ವೈರಿಂಗ್‌ ಕೂಡ ಹಳೇ ಮಾದರಿಯಲ್ಲಿತ್ತು. ಈಗ ಎಲ್ಲವನ್ನು ಹೊಸದಾಗಿ ಮಾಡುತ್ತಿದ್ದು, ಸಮಸ್ಯೆಯಾಗುತ್ತಿದೆ. ಮುಖ್ಯವಾಗಿ ಕಂಪ್ಯೂಟರ್‌ಗಳಿಗೆ ವೈರಿಂಗ್‌ ವ್ಯವಸ್ಥೆ ಮಾಡಬೇಕಿದೆ. ಈಗ ನಡೆದ ಅವಘಡದಿಂದ ಇನ್‌ ವಾರ್ಡ್‌ನ ಬಹುತೇಕ ಕಂಪ್ಯೂಟರ್‌ಗಳ ಸಂಪರ್ಕ ಕಡಿದು ಹೋಗಿದೆ. ಕೆಲ ಕಂಪ್ಯೂಟರ್‌ಗಳ ಹಾರ್ಡ್‌ ಡಿಸ್ಕ್ಗೂ ಧಕ್ಕೆ ಆಗಿದೆ ಎನ್ನಲಾಗುತ್ತಿದೆ.

ಈಗಿನ ಪರಿಸ್ಥಿತಿ ನೋಡುತ್ತಿದ್ದರೆ ಕೆಲಸ ಮುಗಿಯಲು ಇನ್ನೂ ನಾಲ್ಕಾರು ದಿನಗಳಾದರೂ ಬೇಕಾಗಬಹುದು. ವೈರಿಂಗ್‌ ಸಂಪೂರ್ಣ ಹಾಳಾಗಿದ್ದರಿಂದ ಎಲ್ಲವನ್ನು ಹೊಸದಾಗಿ ಮಾಡಲಾಗುತ್ತಿದೆ. ಹೀಗಾಗಿ ಕೆಲಸ ತುಸು ವಿಳಂಬವಾಗುತ್ತಿದೆ. ಆದಷ್ಟು ಶೀಘ್ರದಲ್ಲೇ ದುರಸ್ತಿ ಮಾಡಿ ಮುಗಿಸುವುದಾಗಿ ತಿಳಿಸುತ್ತಾರೆ ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ.

ಕಂಪ್ಯೂಟರ್‌ಗಳ ಕೊರತೆಯಿಂದ ಸಿಬ್ಬಂದಿಗೂ ಕೆಲಸವಿಲ್ಲದಾಗಿದೆ. ಪ್ರತಿ ಒಬ್ಬ ಸಿಬ್ಬಂದಿಗೂ ಪ್ರತ್ಯೇಕ ಕಂಪ್ಯೂಟರ್‌ ನೀಡಿದ್ದು, ಬಹುತೇಕ ಕೆಲಸ ಕಾರ್ಯಕ್ಕೂ ಅವುಗಳನ್ನೇ ಅವಲಂಬಿಸಲಾಗಿತ್ತು. ಈಗ ಏನು ಕೇಳಿದರೂ ಕಂಪ್ಯೂಟರ್‌ ಇಲ್ಲ ಎನ್ನುವ ಸಿದ್ಧ ಉತ್ತರ ಸಿಗುತ್ತಿದೆ.

ಆದರೆ, ಜಿಲ್ಲೆಯ ನಾನಾ ಭಾಗಗಳಿಂದ ನಿತ್ಯ ಒಂದಲ್ಲ ಒಂದು ಕೆಲಸದ ಮೇಲೆ ಬರುವವರಿಗೆ ಅನನುಕೂಲ ಆಗದ ರೀತಿಯಲ್ಲಿ ತ್ವರಿತಗತಿಯಲ್ಲಿ ಕೆಲಸ ಮಾಡಿ ಮುಗಿಸಬೇಕು ಎಂಬುದು ಸಾರ್ವಜನಿಕರ ಒತ್ತಾಯ.

ಟಾಪ್ ನ್ಯೂಸ್

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

11-

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

10-tumkur

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Atlee to collaborate with Salman Khan

Atlee Kumar; ಸಲ್ಮಾನ್‌ ಖಾನ್‌ ಜತೆಗೆ ಅಟ್ಲಿ ಸಿನಿಮಾ

11-

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.