ಇಂದು 4.75 ಲಕ್ಷ ಕ್ಯೂಸೆಕ್‌ ನೀರು ಸಾಧ್ಯತೆ

ನದಿ ಪಾತ್ರದ ಹಳ್ಳಿಗಳು-ಜಮೀನುಗಳಿಗೆ ನುಗ್ಗಿದ ನೀರು•ರಕ್ಷಣಾ ಕಾರ್ಯ ಚುರುಕುಗೊಳಿಸಿದ ಜಿಲ್ಲಾಡಳಿತ

Team Udayavani, Aug 8, 2019, 10:35 AM IST

8–Agust-9

ದೇವದುರ್ಗ: ನಾರಾಯಣಪುರ ಬಸವಸಾಗರ ಜಲಾಶಯ ಭರ್ತಿ ಆಗಿದ್ದರಿಂದ ಕೃಷ್ಣಾ ನದಿಗೆ ನೀರು ಬಿಟ್ಟ ಹಿನ್ನೆಲೆಯಲ್ಲಿ ಗದ್ದೆಗೆ ನುಗ್ಗಿದ ನೀರು.

ರಾಯಚೂರು: ಕೃಷ್ಣಾ ನದಿಗೆ ಬುಧವಾರ 4.50 ಲಕ್ಷ ಕ್ಯೂಸೆಕ್‌ ನೀರು ಹರಿಸಿದ್ದು, ನದಿ ಪಾತ್ರದ ಕೆಲ ಹಳ್ಳಿಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಸಿದರೆ, ಅಪಾರ ಪ್ರಮಾಣದ ಬೆಳೆ ಹಾನಿಯಾಗಿ ರೈತರು ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದೆ.

ಜಲಾಶಯದಿಂದ ನದಿಗೆ ಬಿಡುತ್ತಿರುವ ನೀರಿನ ಪ್ರಮಾಣ ದಿನೇ ದಿನೆ ಹೆಚ್ಚಾಗುತ್ತಿರುವ ಕಾರಣ ಜಿಲ್ಲಾಡಳಿತ ರಕ್ಷಣಾ ಕಾರ್ಯ ಮತ್ತಷ್ಟು ಚುರುಕುಗೊಳಿಸಿದೆ. ತೀರ ಅಪಾಯ ಎದುರಿಸುತ್ತಿರುವ ಹಳ್ಳಿಗಳ ಜನರನ್ನು ಅಧಿಕಾರಿಗಳು ಸ್ಥಳಾಂತರ ಮಾಡಿಸುತ್ತಿದ್ದಾರೆ. ಬುಧವಾರ ದೇವದುರ್ಗ ತಾಲೂಕಿನ ಗೂಗಲ್ ಬ್ರಿಡ್ಜ್ ಬಳಿ ನೀರು ನುಗ್ಗಿ ಹೊಟೇಲ್, ಮನೆಗಳಿಗೆಲ್ಲ ನೀರು ಬಂದಿದೆ. ಅಲ್ಲಿನ ಜನರನ್ನು ಅಧಿಕಾರಿಗಳು ಸುರಕ್ಷಿತ ಸ್ಥಳಕ್ಕೆ ಕಳುಹಿಸಿದರು.

ಬುಧವಾರ ಮಧ್ಯಾಹ್ನದ 3ಕ್ಕೆ ಹೊತ್ತಿಗೆ 4.32 ಲಕ್ಷ ಕ್ಯೂಸೆಕ್‌ ನೀರು ಹರಿಸಲಾಗಿತ್ತು. ಸಂಜೆ ವೇಳೆ ಆ ಪ್ರಮಾಣ 4.50 ಲಕ್ಷ ತಲುಪಿತು. ಗುರುವಾರ ಅದು 4.75 ಲಕ್ಷ ಕ್ಯೂಸೆಕ್‌ ಆಗಬಹುದು ಎಂದು ಅಂದಾಜಿಸಿದ್ದಾರೆ. ಅಧಿಕಾರಿಗಳು. ನದಿ ಪಾತ್ರದ 52 ಹಳ್ಳಿಗಳಿಗೆ ಪ್ರವಾಹ ಭೀತಿಯಿದ್ದು, ಆ ಗ್ರಾಮಗಳಿಗೆ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಲೆಕ್ಕಾಧಿಕಾರಿಗಳನ್ನು ನಿಯೋಜಿಸಲಾಗಿದೆ. ರಾತ್ರಿ ಕೂಡ ಅಲ್ಲಿಯೇ ಉಳಿಯುವಂತೆ ಜಿಲ್ಲಾಡಳಿತ ನಿರ್ದೇಶನ ನೀಡಿದೆ.

ದೇವದುರ್ಗ ತಾಲೂಕಿನ ನದಿ ತೀರದ ಮ್ಯಾದರಗೋಳ ಗ್ರಾಮದ 13 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ರಾಯಚೂರು ತಾಲೂಕಿನ ಗುರ್ಜಾಪುರ ಗ್ರಾಮದ ಬ್ರಿಡ್ಜ್ ಕಂ ಬ್ಯಾರೇಜ್‌ ಸಂಪೂರ್ಣ ಮುಳುಗಡೆಯಾಗಿದ್ದು, ಅದಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ಬೊಂಗಾಗಳು ಬಿದ್ದಿದ್ದು, ಅಪಾಯದ ಮುನ್ಸೂಚನೆ ನೀಡಿದೆ. ನದಿ ತೀರದ ಭತ್ತದ ಗದ್ದೆಗಳಿಗೆ ನೀರು ನುಗ್ಗಿ ಸಾಕಷ್ಟು ಹಾನಿಯಾಗಿದೆ.

ರಾಯಚೂರು ತಾಲೂಕಿನ ಕಾಡ್ಲೂರು ಗ್ರಾಮದ ಶ್ರೀ ಉಪೇಂದ್ರತೀರ್ಥ ಕರಾರ್ಚಿತ ಪ್ರಾಣದೇವರ ದೇವಸ್ಥಾನ ಮುಳುಗಡೆಯಾದರೆ, ದೇವದುರ್ಗ ತಾಲೂಕಿನ ಕೊಪ್ಪರ ಗ್ರಾಮದ ಶ್ರೀ ಲಕ್ಷ್ಮೀ ನರಸಿಂಹ ದೇವರ ದೇವಸ್ಥಾನ ಮುಳುಗಡೆಯಾಗಿದೆ. ದೇವಸ್ಥಾನದ ಅರ್ಚಕರ ಮನೆ, ಕಲ್ಯಾಣ ಮಂಟಪ ಜಲಾವೃತಗೊಂಡಿದೆ. ಗೂಗಲ್ ಗ್ರಾಮದ ಶ್ರೀ ಅಲ್ಲಮ ಪ್ರಭುಲಿಂಗೇಶ್ವರ ದೇವಸ್ಥಾನದ ಗರ್ಭಗುಡಿ ಹಾಗೂ ಅಕ್ಕ ಪಕ್ಕದ ಅಂಗಡಿ ಮುಂಗಟ್ಟು, ಕಲ್ಯಾಣ ಮಂಟಪಕ್ಕೆ ನೀರು ನುಗ್ಗಿವೆ. ಪಂಪ್‌ ಸೆಟ್ ಮೂಲಕ ಗರ್ಭಗುಡಿಯ ನೀರನ್ನು ಹೊರಹಾಕಲಾಗುತ್ತಿದೆ. ಗೂಗಲ್ ಬ್ರಿಡ್ಜ್ ಹತ್ತಿರ ಹಾಕಿರುವ ಮೀನುಗಾರರ ಶೆಡ್‌ಗಳು ಮುಳುಗಿವೆ. ಮೀನುಗಾರರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳಿಸಲಾಗಿದೆ. ಅಲ್ಲದೇ ಗೂಗಲ್ ಬ್ರಿಡ್ಜ್ ಕಂ ಬ್ಯಾರೇಜ್‌ ಸಂಪೂರ್ಣ ಮುಳುಗಡೆಯಾಗಿದೆ.

ರಾಯಚೂರು ತಾಲ್ಲೂಕಿನ ಕಾಡ್ಲೂರು-ಅರಷಿಣಗಿ, ಗುರ್ಜಾಪುರ, ಮದರಕಲ್, ಯಮನೂರು ಸೇರಿ ಐದು ಗ್ರಾಮಗಳಿಗೆ ರಸ್ತೆ ಸಂಪರ್ಕ ಕಡಿತಗೊಂಡಿದೆ. ಈ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಶಾಲಾ ಕಾಲೇಜಿಗೆ ತೆರಳಲು ಪರದಾಡುತ್ತಿದ್ದಾರೆ.

ಗೂಗಲ್ ಬ್ರಿಡ್ಜ್ ಕಂ ಬ್ಯಾರೇಜ್‌ ಸೇರಿದಂತೆ ನದಿ ಪಾತ್ರದ ಅಪಾಯಕರ ಸ್ಥಳಗಳಲ್ಲಿ ಪ್ಯಾರಾ ಮಿಲಿಟರಿ ಪಡೆ ಕಾರ್ಯ ನಿರ್ವಹಿಸುತ್ತಿದೆ. ಲಿಂಗಸುಗೂರು ತಾಲೂಕಿನ ಕೃಷ್ಣಾನದಿಯ ಟಣಮನಕಲ್ ಗ್ರಾಮ ನಡುಗಡ್ಡೆಯಾಗಿದೆ. ಗುರಗುಂಟಾ ಗ್ರಾಮದಿಂದ ಸಂಪರ್ಕ ಕಲ್ಪಿಸುವ ಸೇತುವೆ ಮುಳುಗಡೆಯಾಗಿದೆ.

ಟಾಪ್ ನ್ಯೂಸ್

Emergency: ಹತ್ತಾರು ವಿಳಂಬದ ಬಳಿಕ ಕೊನೆಗೂ ಕಂಗನಾ ʼಎಮರ್ಜೆನ್ಸಿʼ ರಿಲೀಸ್ ಗೆ ಡೇಟ್‌ ಫಿಕ್ಸ್

Emergency: ಹತ್ತಾರು ವಿಳಂಬದ ಬಳಿಕ ಕೊನೆಗೂ ಕಂಗನಾ ʼಎಮರ್ಜೆನ್ಸಿʼ ರಿಲೀಸ್ ಗೆ ಡೇಟ್‌ ಫಿಕ್ಸ್

IPL Mega Auction: 13-year-old boy in mega auction: Who is Vaibhav Suryavanshi?

IPL Mega Auction: ಮೆಗಾ ಹರಾಜಿನಲ್ಲಿ 13ರ ಬಾಲಕ: ಯಾರಿದು ವೈಭವ್‌ ಸೂರ್ಯವಂಶಿ

Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್‌ ವಿದ್ಯಾರ್ಥಿ ಸಾ*ವು

Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್‌ ವಿದ್ಯಾರ್ಥಿ ಸಾ*ವು

ಮೀನಿನ ಹಿಡಿಯಲು ಹೋಗಿದ್ದ ತಂದೆ, ಇಬ್ಬರು ಮಕ್ಕಳು ನೀರುಪಾಲು

Hukkeri: ಮೀನು ಹಿಡಿಯಲು ಹೋಗಿದ್ದ ತಂದೆ, ಇಬ್ಬರು ಮಕ್ಕಳು ನೀರುಪಾಲು

10

Nayanthara: ʼರಕ್ಕಯಿʼ ಆಗಿ ದುಷ್ಟರ ಪಾಲಿಗೆ ದುಸ್ವಪ್ನವಾದ ಲೇಡಿ ಸೂಪರ್‌ ಸ್ಟಾರ್

BGT 2024-25: Virat Kohli returns to form in Aussies

BGT 2024-25: ಆಸೀಸ್‌ ನಲ್ಲಿ ಲಯಕ್ಕೆ ಮರಳಿದ ವಿರಾಟ್‌ ಕೊಹ್ಲಿ

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

Mangaluru: ಹೆದ್ದಾರಿ ಬದಿ ನಿಲ್ಲುವ ವಾಹನ; ಅಪಾಯಕ್ಕೆ ಆಹ್ವಾನ

1

Puttur: ಕಲ್ಪವೃಕ್ಷಕ್ಕೆ ಮರುಜೀವವಿತ್ತ ಎಂಜಿನಿಯರ್‌

ಮೀನಿನ ಹಿಡಿಯಲು ಹೋಗಿದ್ದ ತಂದೆ, ಇಬ್ಬರು ಮಕ್ಕಳು ನೀರುಪಾಲು

Hukkeri: ಮೀನು ಹಿಡಿಯಲು ಹೋಗಿದ್ದ ತಂದೆ, ಇಬ್ಬರು ಮಕ್ಕಳು ನೀರುಪಾಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರು ಪಾಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು

Youth assaulted near Belagavi airport compound

Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Emergency: ಹತ್ತಾರು ವಿಳಂಬದ ಬಳಿಕ ಕೊನೆಗೂ ಕಂಗನಾ ʼಎಮರ್ಜೆನ್ಸಿʼ ರಿಲೀಸ್ ಗೆ ಡೇಟ್‌ ಫಿಕ್ಸ್

Emergency: ಹತ್ತಾರು ವಿಳಂಬದ ಬಳಿಕ ಕೊನೆಗೂ ಕಂಗನಾ ʼಎಮರ್ಜೆನ್ಸಿʼ ರಿಲೀಸ್ ಗೆ ಡೇಟ್‌ ಫಿಕ್ಸ್

IPL Mega Auction: 13-year-old boy in mega auction: Who is Vaibhav Suryavanshi?

IPL Mega Auction: ಮೆಗಾ ಹರಾಜಿನಲ್ಲಿ 13ರ ಬಾಲಕ: ಯಾರಿದು ವೈಭವ್‌ ಸೂರ್ಯವಂಶಿ

2

Mangaluru: ಹೆದ್ದಾರಿ ಬದಿ ನಿಲ್ಲುವ ವಾಹನ; ಅಪಾಯಕ್ಕೆ ಆಹ್ವಾನ

Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್‌ ವಿದ್ಯಾರ್ಥಿ ಸಾ*ವು

Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್‌ ವಿದ್ಯಾರ್ಥಿ ಸಾ*ವು

1

Puttur: ಕಲ್ಪವೃಕ್ಷಕ್ಕೆ ಮರುಜೀವವಿತ್ತ ಎಂಜಿನಿಯರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.