ನಂಬಿದ ಶಕ್ತಿಗಳೇ ಕೈ ಹಿಡಿಯಲಿಲ್ಲ

ಕದನ ಕಣದಲ್ಲಿ ಒಂಟಿಯಾಗಿಯೇ ಹೋರಾಡಿದರೆ ಬಿ.ವಿ.ನಾಯಕ..?

Team Udayavani, May 24, 2019, 1:37 PM IST

24-May-21

ರಾಯಚೂರು: ಕಳೆದ ವಿಧಾನಸಭೆ ಚುನಾವಣೆಯಲ್ಲಿ 2 ಲಕ್ಷಕ್ಕೂ ಅಧಿಕ ಮತ ಪಡೆದಿದ್ದ ಜೆಡಿಎಸ್‌ ಬೆಂಬಲದೊಂದಿಗೆ ಕಣಕ್ಕಿಳಿದ ಹಾಲಿ ಸಂಸದ ಬಿ.ವಿ.ನಾಯಕರಿಗೆ ಹೀನಾಯ ಸೋಲಾಗಿದೆ. ಅಂದುಕೊಂಡ ಮಟ್ಟಿಗೆ ಮೈತ್ರಿ ಯಶಸ್ವಿಯಾಗಿಲ್ಲ ಎಂಬುದು ಒಂದೆಡೆಯಾದರೆ, ಸ್ವಂತ ಪಕ್ಷದ ನಾಯಕರೇ ಕೈ ಹಿಡಿದಿಲ್ಲ ಎನ್ನುವುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ.

ಹೇಳಿದ್ದೊಂದು ಮಾಡಿದ್ದಿನ್ನೊಂದು ಎನ್ನುವಂತೆ ಜೆಡಿಎಸ್‌ ಕಾಂಗ್ರೆಸ್‌ ಕಾರ್ಯಕರ್ತರು ಮೈತ್ರಿ ಹೆಸರಿನಲ್ಲಿ ನಡೆಸಿದ ಪ್ರಹಸನ ಬಯಲಾಗಿದೆ. ಈ ಫ‌ಲಿತಾಂಶ ಬಿಜೆಪಿಯವರು ಬೀಗುವಂತೆ ಮಾಡಿದರೆ ಜೆಡಿಎಸ್‌ ಕಾಂಗ್ರೆಸ್‌ ನಾಯಕರು ತಲೆ ತಗ್ಗಿಸುವಂತೆ ಮಾಡಿದೆ. ಮೇಲ್ನೋಟಕ್ಕೆ ನಾಯಕರು ಸಮಜಾಯಿಷಿ ನೀಡಿ ನುಣುಚಿಕೊಳ್ಳುತ್ತಿದ್ದರೂ ಒಳಗೊಳಗೆ ಹೇಳಿಕೊಳ್ಳಲಾಗದ ತಳಮಳ ಅನುಭವಿಸುತ್ತಿರುವುದಂತೂ ಸತ್ಯ.

ಬಿ.ವಿ.ನಾಯಕರ ಪರ ಕಾಂಗ್ರೆಸ್‌ನ ಕೆಲ ನಾಯಕರು ಶ್ರದ್ಧೆ ವಹಿಸಿ ಕೆಲಸ ಮಾಡಿದ್ದರೆ ಸೋಲಿನ ಪ್ರಮಾಣ ಇಷ್ಟೊಂದು ತೀವ್ರವಾಗಿ ಇರುತ್ತಿರಲಿಲ್ಲವೇನೋ. ಆದರೆ, ನಂಬಿದ ಶಕ್ತಿಗಳೇ ಕೈ ಕೊಟ್ಟಿರುವ ಲಕ್ಷಣ ನಿಚ್ಚಳವಾಗಿ ಕಾಣುತ್ತಿದೆ. ಅದರಲ್ಲೂ ಕಾಂಗ್ರೆಸ್‌ ಕೈ ಹಿಡಿಯಬೇಕಿದ್ದ ಕ್ಷೇತ್ರಗಳೇ ಕೈ ತಪ್ಪಿರುವುದು ಹೇಳಿಕೊಳ್ಳಲಾಗದ ವೇದನೆ ಸೃಷ್ಟಿಸಿರುವುದಂತೂ ಸತ್ಯ.

ರಾಯಚೂರು ಲೋಕಸಭೆ ಕ್ಷೇತ್ರ ಎಂಟು ವಿಧಾನಸಭೆ ಕ್ಷೇತ್ರಗಳನ್ನು ಒಳಗೊಂಡಿದೆ. ಎಂಟರಲ್ಲಿ ನಾಲ್ಕರಲ್ಲಿ ಬಿಜೆಪಿ ಶಾಸಕರಿದ್ದರೆ, ಉಳಿದ ಮೂರರಲ್ಲಿ ಕಾಂಗ್ರೆಸ್‌ ಹಾಗೂ ಒಂದರಲ್ಲಿ ಜೆಡಿಎಸ್‌ ಅಧಿಕಾರದಲ್ಲಿದೆ. ಬಿಜೆಪಿ ಶಾಸಕ ಇರುವ ದೇವದುರ್ಗ ಕ್ಷೇತ್ರದಲ್ಲಿ ಕಾಂಗ್ರೆಸ್‌ ಮುನ್ನಡೆ ಸಾಸಿದ್ದು ಬಿಟ್ಟರೆ ಉಳಿದ ಏಳು ಕ್ಷೇತ್ರಗಳಲ್ಲಿ ಬಿಜೆಪಿಯೇ ಮುನ್ನಡೆ ಸಾಧಿಸಿದೆ.

ಇದರಿಂದ ಗೆಲುವಿನ ಹೊಣೆ ಹೊರಬೇಕಾದ ಆಯಾ ಕ್ಷೇತ್ರಗಳ ಶಾಸಕರು ಜವಾಬ್ದಾರಿಯಿಂದ ನುಣುಚಿಕೊಳ್ಳುವ ಯತ್ನದಲ್ಲಿದ್ದಾರೆ. ಚುನಾವಣೆ ಪೂರ್ವದಲ್ಲಿ ಬೇರೆಯದ್ದೇ ಲೆಕ್ಕಾಚಾರದಲ್ಲಿದ್ದ ನಾಯಕರು ಈಗ ಮಗ್ಗಲು ಬದಲಿಸಿ ಮಾತನಾಡುತ್ತಿದ್ದಾರೆ. ಎಲ್ಲ ಕಡೆ ಇಂಥದ್ದೇ ಫಲಿತಾಂಶ ಬಂದಿದೆ ಎಂದು ಸಮಜಾಯಿಷಿ ನೀಡುತ್ತಿದ್ದಾರೆ. ಹಿಂದಿನ ವಿಧಾನಸಭೆ ಚುನಾಣೆಯಲ್ಲಿ ಜೆಡಿಎಸ್‌ಗೆ ಎರಡು ಲಕ್ಷಕ್ಕಿಂತ ಅಧಿಕ ಮತ ಲಭಿಸಿದ್ದವು. ಮಾನ್ವಿ, ಲಿಂಗಸೂಗೂರು, ಗ್ರಾಮೀಣ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಆ ಪಕ್ಷದ ಮತಗಳು ಕೈ ಹಿಡಿಯಲಿವೆ ಎಂಬ ನಿರೀಕ್ಷೆ ಹುಸಿಯಾಗಿದೆ. ಇನ್ನೂ ಅಲ್ಪಸಂಖ್ಯಾತ ಮತಗಳು ಹೆಚ್ಚಾಗಿರುವ ರಾಯಚೂರು ನಗರ ಕ್ಷೇತ್ರವೂ ಕೈ ಕೊಟ್ಟಿದೆ. ಪ್ರಭಾವಿ ನಾಯಕ ಎನಿಸಿಕೊಂಡ ಎನ್‌.ಎಸ್‌.ಬೋಸರಾಜ್‌ರ ತವರು ಕ್ಷೇತ್ರವಾದ ಮಾನ್ವಿಯಲ್ಲಿ ಹೀನಾಯ ಸೋಲಾಗಿದೆ. ಅಲ್ಪಸಂಖ್ಯಾತ ಮತಗಳನ್ನು ಸೆಳೆಯಲು ನೆರವಾಗಬೇಕಿದ್ದ ಮಾಜಿ ಶಾಸಕ ಸೈಯ್ಯದ್‌ ಯಾಸಿನ್‌ ಕೂಡ ನಿರೀಕ್ಷಿತ ಮಟ್ಟದಲ್ಲಿ ಕೆಲಸ ಮಾಡಿಲ್ಲ ಎನ್ನುವುದು ಮೇಲ್ನೋಟಕ್ಕೆ ತಿಳಿಯುತ್ತಿದೆ.

ಕಾಂಗ್ರೆಸ್‌ ಪಕ್ಷದೊಳಗಿನ ಆಂತರಿಕೆ ಕಚ್ಚಾಟ ಬಿ.ವಿ.ನಾಯಕ ಭವಿಷ್ಯ ಬಲಿ ಪಡೆದಿರುವುದನ್ನು ಅಲ್ಲಗಳೆಯಲಾಗದು. ಆದರೆ, ಸಂಸದರಾಗಿ ಅವರು ಇನ್ನೂ ಹೆಚ್ಚು ಶ್ರಮ ವಹಿಸಿ ಕೆಲಸ ಮಾಡಿದ್ದರೆ ಸ್ವಂತ ಬಲದಿಂದಲೇ ಹೋರಾಟ ನಡೆಸಬಹುದಿತ್ತು.

ಟಾಪ್ ನ್ಯೂಸ್

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

10-tumkur

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

9

Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ

8

Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Atlee to collaborate with Salman Khan

Atlee Kumar; ಸಲ್ಮಾನ್‌ ಖಾನ್‌ ಜತೆಗೆ ಅಟ್ಲಿ ಸಿನಿಮಾ

11-

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

10-tumkur

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.