ಸಂಸ್ಥಾನ ದೊರೆಗೆ ಒಲಿದ ಸಂಸದ ಸ್ಥಾನ
Team Udayavani, May 24, 2019, 2:58 PM IST
ರಾಯಚೂರು: ಗುರುಗುಂಟಾ ಸಂಸ್ಥಾನದ ದೊರೆ ರಾಜಾ ಅಮರೇಶ್ವರ ನಾಯಕರಿಗೆ ಸಂಸತ್ ಪ್ರವೇಶ ಭಾಗ್ಯ ಕಲ್ಪಿಸುವ ಮೂಲಕ ಕ್ಷೇತ್ರದ ಮತದಾರರು ಜೋರಾಗಿಯೇ ಈ ಬಾರಿ ಆಶೀರ್ವದಿಸಿದ್ದಾರೆ.
ಪರಿಶಿಷ್ಟ ಪಂಗಡಕ್ಕೆ ಮೀಸಲಾದ ರಾಯಚೂರು ಲೋಕಸಭೆ ಕ್ಷೇತ್ರದಲ್ಲಿ ನಾಯಕರ ಕದನ ಏರ್ಪಟ್ಟಿತ್ತು. ಹಾಲಿ ಸಂಸದ ಬಿ.ವಿ.ನಾಯಕರಂತೆ ರಾಜಾ ಅಮರೇಶ್ವರ ನಾಯಕರು ಕೂಡ ಸಭ್ಯತೆಗೆ ಹೆಸರಾದ ವ್ಯಕ್ತಿ. ಅದರ ಜತೆಗೆ ಆಗೊಮ್ಮೆ ಈಗೊಮ್ಮೆ ಮುನ್ನೆಲೆಗೆ ಬಂದು ಅಧಿಕಾರ ಅನುಭವಿಸಿದ ಅವರನ್ನು ಜಿಲ್ಲೆಯ ಜನ ಸ್ವೀಕರಿಸಿದ್ದೂ ಉಂಟು ತಿರಸ್ಕರಿಸಿದ್ದೂ ಉಂಟು.
ಸಂಸ್ಥಾನದ ದೊರೆಗಳಾದ ಅವರಿಗೆ ಆಡಳಿತಾತ್ಮಕ ಚಿಂತನೆಗಳ ಜತೆಗೆ ರಾಜಕೀಯ ಪಟ್ಟುಗಳನ್ನು ಅರಿಯಲು ಹೆಚ್ಚು ಕಾಲ ಬೇಕಾಗಲಿಲ್ಲ. ಹೀಗಾಗಿ 1989ರಲ್ಲಿಯೇ ಅವರು ಲಿಂಗಸುಗೂರು ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದಿದ್ದರು. ಬಳಿಕ 1999ರಲ್ಲಿ ಕಲ್ಮಲ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ದಾಖಲಿಸಿದ್ದರು. ಅಚ್ಚರಿ ವಿಷಯವೆಂದರೆ ಎರಡು ಬಾರಿಯೂ ಸಚಿವ ಸ್ಥಾನ ಲಭಿಸಿತ್ತು. ಆಗ ಅವರು ಅನೇಕ ಜನಪರ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಮನೆ ಮಾತಾಗಿದ್ದರು. ಅದರಲ್ಲಿ ರಾಂಪುರ ಏತ ನೀರಾವರಿ ಯೋಜನೆಯ ಫಲವನ್ನು ಜನ ಇಂದು ಅನುಭವಿಸುತ್ತಿದ್ದಾರೆ.
ಕಾಂಗ್ರೆಸ್, ಜೆಡಿಎಸ್‌ನಲ್ಲಿ ಓಡಾಡಿಕೊಂಡಿದ್ದ ಅವರು ಜೆಡಿಎಸ್‌ನಿಂದ 2004ರಲ್ಲಿ ಸ್ಪರ್ಧಿಸಿ ಸೋತಿದ್ದರು. 2013ರಲ್ಲೂ ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧಿಸಿ ಸೋಲನುಭವಿಸಿದ್ದರು. ಆದರೆ, ಕಳೆದ 2018ರಲ್ಲಿ ವಿಧಾನಸಭೆ ಚುನಾವಣೆಯಿಂದ ದೂರ ಉಳಿದಿದ್ದರು. 2019ರ ಲೋಕಸಭೆ ಚುನಾವಣೆಯಲ್ಲಿ ರಾಯಚೂರು ಕ್ಷೇತ್ರದಲ್ಲಿ ಬಿಜೆಪಿಯಲ್ಲಿ ಸಮರ್ಥ ಅಭ್ಯರ್ಥಿ ಇಲ್ಲದಿರುವುದು ರಾಜಾ ಅಮರೇಶ್ವರ ನಾಯಕರ ರಾಜಕೀಯ ಬದುಕಿನ ಮತ್ತೂಂದು ಪರ್ವಕ್ಕೆ ನಾಂದಿ ಹಾಡಿದಂತಾಗಿದೆ. ಹಲವು ಹೊಸ ಚಿಂತನೆಗಳೊಂದಿಗೆ ಜನರ ಮುಂದೆ ಬಂದಿರುವ ಅವರ ಮೇಲೆಯೂ ಕ್ಷೇತ್ರದ ಜನ ಅಪಾರ ವಿಶ್ವಾಸ ಹೊಂದಿದ್ದಾರೆ. ಆದರೆ, ತಮಗೆ ಸಿಕ್ಕಿರುವ ಈ ಅಧಿಕಾರವನ್ನು ಹೇಗೆ ಬಳಸಿಕೊಳ್ಳುವರು ಎಂದು ಕಾದು ನೋಡಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.