ಹಸೆಮಣೆ ಏರಿದ 17 ಜೋಡಿ
ಮುಂಗಾರು ಸಾಂಸ್ಕೃತಿಕ ರಾಯಚೂರು ಹಬ್ಬದಂಗವಾಗಿ ಸಾಮೂಹಿಕ ವಿವಾಹ
Team Udayavani, Jun 14, 2019, 2:43 PM IST
ರಾಯಚೂರು: ಮುಂಗಾರು ಸಾಂಸ್ಕೃತಿಕ ರಾಯಚೂರು ಹಬ್ಬದ ಅಂಗವಾಗಿ ನಗರದ ಗದ್ವಾಲ್ ರಸ್ತೆಯ ಲಕ್ಷ್ಮಮ್ಮದೇವಿ ದೇವಸ್ಥಾನದಲ್ಲಿ ಸಾಮೂಹಿಕ ವಿವಾಹ ಸಮಾರಂಭ ನಡೆಯಿತು.
ರಾಯಚೂರು: ಮುಂಗಾರು ಸಾಂಸ್ಕೃತಿಕ ರಾಯಚೂರು ಹಬ್ಬದ ಅಂಗವಾಗಿ ನಗರದ ಗದ್ವಾಲ್ ರಸ್ತೆಯಲ್ಲಿನ ಲಕ್ಷ್ಮಮ್ಮದೇವಿ ದೇವಸ್ಥಾನದಲ್ಲಿ ಜಿಲ್ಲಾ ಮುನ್ನೂರು ಕಾಪು ಸಮಾಜದ ಯುವಕ ಮಂಡಳಿಯಿಂದ ಗುರುವಾರ ಸಾಮೂಹಿಕ ವಿವಾಹ ಸಮಾರಂಭ ನಡೆಯಿತು.
17 ಜೋಡಿಗಳು ನವಜೀವನಕ್ಕೆ ಕಾಲಿರಿಸಿದರು. ಸೋಮವಾರಪೇಟೆ ಹಿರೇಮಠದ ಅಭಿನವ ಶ್ರೀ ರಾಚೋಟಿ ವೀರ ಶಿವಾಚಾರ್ಯ ಸ್ವಾಮೀಜಿ, ಗಬ್ಬೂರಿನ ಶ್ರೀ ಬೂದಿ ಬಸವೇಶ್ವರ ಶಿವಾಚಾರ್ಯರು ಸಾನ್ನಿಧ್ಯ ವಹಿಸಿದ್ದರು. ಮಾಜಿ ಶಾಸಕ ಹಾಗೂ ಕಾರ್ಯಕ್ರಮ ರೂವಾರಿ ಎ.ಪಾಪಾರೆಡ್ಡಿ, ಮುನ್ನೂರು ಕಾಪು ಸಮಾಜ ಅಧ್ಯಕ್ಷ ಬೆಲ್ಲಂ ನರಸರೆಡ್ಡಿ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಂಡು ವಧು ವರರನ್ನು ಆಶಿರ್ವದಿಸಿದರು.
ಮುನ್ನೂರು ಕಾಪು ಸಮಾಜದಿಂದ ನವ ದಂಪತಿಗೆ ಕಾಲುಂಗುರ, ಬಟ್ಟೆ ಹಾಗೂ ತಾಳಿ ನೀಡಲಾಯಿತು. ಜೂ.14ರಂದು ಲಕ್ಷ್ಮಮ್ಮ ದೇವಸ್ಥಾನದಲ್ಲಿ ಮಳೆಗಾಗಿ ವಿಶೇಷ ಹೋಮ ಹವನ ಏರ್ಪಡಿಸಿದ್ದು, ಜೂ.16ರಿಂದ ಮೂರು ದಿನಗಳ ಕಾಲ ಮುಂಗಾರು ಸಾಂಸ್ಕೃತಿಕ ರಾಯಚುರು ಹಬ್ಬಕ್ಕೆ ಚಾಲನೆ ನೀಡಲಾಗುವುದು ಎಂದು ಆಯೋಜಕರು ತಿಳಿಸಿದರು.
ಮುಖಂಡರಾದ ಜಿ.ಬಸವರಾಜ ರೆಡ್ಡಿ, ರಾಳ್ಳ ತಿಮ್ಮಾರೆಡ್ಡಿ, ದೊಡ್ಡ ಮಲ್ಲೇಶಪ್ಪ, ಎಂ.ನಾಗೀರೆಡ್ಡಿ, ಜಿ.ತಿಮ್ಮಾರೆಡ್ಡಿ, ಗುಡ್ಸಿ ನರಸರೆಡ್ಡಿ, ಎನ್.ಶ್ರೀನಿವಾಸರೆಡ್ಡಿ, ಪೋಗಲ ಶೇಖರರೆಡ್ಡಿ, ಬಂಗಿ ನರಸರೆಡ್ಡಿ, ವೆಂಕಟರೆಡ್ಡಿ ಸೇರಿ ಸಮಾಜದ ಮಹಿಳೆಯರು, ಯುವಕರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mudbidri: ಸರಕಾರಿ ಬಸ್ಸಿಗಿಲ್ಲ ನಿಲ್ದಾಣ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Puttur: ಬಸ್ – ಬೈಕ್ ಅಪಘಾತ; ಸವಾರ ಸಾವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.