ವಸತಿ ಫಲಾನುಭವಿಗಳ ಆಯ್ಕೆಗೆ ಗ್ರಾಮಸಭೆ ಮಾಡಿ
ಲಿಂಗಸುಗೂರು ವಿಧಾನಸಭಾ ಕ್ಷೇತ್ರದ ಪಿಡಿಒ-ತಾಂತ್ರಿಕ ಅಧಿಕಾರಿಗಳ ಸಭೆಯಲ್ಲಿ ಸಿಇಒ ಸೂಚನೆ
Team Udayavani, Jul 21, 2019, 3:24 PM IST
ರಾಯಚೂರು: ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಿಇಒ ಲಕ್ಷಿ ್ಮೕಕಾಂತ ರೆಡ್ಡಿ ಅಧ್ಯಕ್ಷತೆಯಲ್ಲಿ ಲಿಂಗಸುಗೂರು ವಿಧಾನಸಭಾ ಕ್ಷೇತ್ರದ ಪಿಡಿಒ, ತಾಂತ್ರಿಕ ಸಹಾಯಕ ಅಧಿಕಾರಿಗಳ ಸಭೆ ನಡೆಯಿತು.
ರಾಯಚೂರು: ವಸತಿ ಯೋಜನೆಗಳ ಫಲಾನುಭವಿಗಳ ಆಯ್ಕೆಗೆ ವಾರದೊಳಗೆ ಗ್ರಾಮಸಭೆ ನಡೆಸಬೇಕು. ಗ್ರಾಮಸಭೆ ಮಾಡಿ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡದಿದ್ದರೆ ಶೋಕಾಸ್ ನೋಟೀಸ್ ನೀಡಲಾಗುವುದು ಎಂದು ಜಿಪಂ ಸಿಇಒ ಲಕ್ಷ್ಮೀಕಾಂತರೆಡ್ಡಿ ಪಿಡಿಒಗಳಿಗೆ ಎಚ್ಚರಿಸಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ನಡೆದ ಲಿಂಗಸುಗೂರು ವಿಧಾನಸಭಾ ಕ್ಷೇತ್ರದ ಪಿಡಿಒ ಮತ್ತು ತಾಂತ್ರಿಕ ಅಧಿಕಾರಿಗಳ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರಧಾನಮಂತ್ರಿ ಆವಾಸ್ ಹಾಗೂ ಬಸವ ಯೋಜನೆಯಡಿ ವಸತಿ ರಹಿತ ಫಲಾನುಭವಿಗಳ ಆಯ್ಕೆಗೆ ನಡೆಸುವ ಗ್ರಾಮಸಭೆಯನ್ನು ಸಂಪೂರ್ಣ ಚಿತ್ರೀಕರಿಸಬೇಕು. ಭಾವಚಿತ್ರ ಅಗತ್ಯ ದಾಖಲೆಗಳೊಂದಿಗೆ ಕಾರ್ಯನಿರ್ವಾಹಕ ಅಧಿಕಾರಿಗೆ ಸಲ್ಲಿಸಬೇಕು ಎಂದು ಸೂಚಿಸಿದರು.
ಈ ಯೋಜನೆಯಡಿ ಪಿಡಿಒಗಳು ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಿ ಅವರ ವಿವರಗಳನ್ನು ಗಣಕಯಂತ್ರದಲ್ಲಿ ದಾಖಲಿಸಬೇಕು. ಕಾಲಹರಣ ಮಾಡದೇ ಗ್ರಾಮಸಭೆ ನಡೆಸಿ ಫಲಾನುಭವಿಗಳನ್ನು ಆಯ್ಕೆ ಮಾಡಬೇಕು ಎಂದು ಹೇಳಿದರು.
ಗ್ರಾಮಸಭೆ ನಡೆಸದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಂದ ಮಾಹಿತಿ ಪಡೆದರು. ಲಿಂಗಸುಗೂರು ತಾಲೂಕು ವ್ಯಾಪ್ತಿಯಲ್ಲಿ ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ಅರ್ಧಕ್ಕೆ ಸ್ಥಗಿತಗೊಂಡ ವೈಯಕ್ತಿಕ ಶೌಚಾಲಯಗಳ ಕಾಮಗಾರಿ ಗಳನ್ನು ಮುಂದಿನ ಸಭೆಯೊಳಗೆ ಪೂರ್ಣಗೊಳಿಸಬೇಕು. ಸಮಸ್ಯೆಗಳಿದ್ದರೆ, ಸ್ವಚ್ಛ ಭಾರತ ಮಿಷನ್‌ನ ಸಂಯೋಜನಾಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಪರಿಹಾರ ಕಂಡುಕೊಳ್ಳಬೇಕು ಎಂದರು.
ಗುಳೆ ಹೋಗುವುದನ್ನು ತಡೆದು ಉದ್ಯೋಗ ಖಾತ್ರಿ ಯೋಜನೆಯಡಿ ಶೇ.100ರಷ್ಟು ಉದ್ಯೋಗ ನೀಡಿದ ಖೈರವಾಡಗಿ ಗ್ರಾಪಂ ಅಭಿವೃದ್ಧಿ ಅಧಿಕಾರಿ ರಾಮಪ್ಪ ಅವರ ಕಾರ್ಯವನ್ನು ಸಿಇಒ ಶ್ಲಾಘಿಸಿದರು. ಐಎಎಸ್ ಪ್ರಬೇಷನರಿ ಅಧಿಕಾರಿ ರಿತೇಶ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ
Atul Subhash Case: ಪತ್ನಿ ಮೇಲಿನ ಕೇಸ್ ರದ್ದತಿಗೆ ನಿರಾಕರಣೆ
Suspend: ನಕಲಿ ದಾಖಲೆ ಕೊಟ್ಟು ಹುದ್ದೆ ಪಡೆದ ಪಿಎಸ್‌ಐ ಸಸ್ಪೆಂಡ್
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.