ವೈದ್ಯರ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ

ಡಿಸಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ •ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಐಎಂಎ ಆಗ್ರಹ

Team Udayavani, Jun 15, 2019, 11:01 AM IST

15-June-9

ರಾಯಚೂರು: ಡಿಸಿ ಕಚೇರಿ ಎದುರಿನ ಉದ್ಯಾನವನದಲ್ಲಿ ಭಾರತೀಯ ವೈದ್ಯಕೀಯ ಸಂಘದ ನೇತೖತ್ವದಲ್ಲಿ ವೈದ್ಯರು ಧರಣಿ ನಡೆಸಿದರು.

ರಾಯಚೂರು: ಕೋಲ್ಕತ್ತಾದ ಖಾಸಗಿ ಆಸ್ಪತ್ರೆಯಲ್ಲಿ ಕರ್ತವ್ಯನಿರತ ವೈದ್ಯರ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ ದುಷ್ಕರ್ಮಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಆಗ್ರಹಿಸಿ ಭಾರತೀಯ ವೈದ್ಯಕೀಯ ಸಂಘದ ನೇತೃತ್ವದಲ್ಲಿ ವೈದ್ಯರು ಹಾಗೂ ವೈದ್ಯಕೀಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಡಿಸಿ ಕಚೇರಿ ಎದುರಿನ ಉದ್ಯಾನವನದಲ್ಲಿ ಕೈಗೆ ಕಪ್ಪು ಪಟ್ಟಿ ಧರಿಸಿ ಧರಣಿ ನಡೆಸಿದ ಪ್ರತಿಭಟನಾಕಾರರು, ಬಳಿಕ ಅಲ್ಲಿಂದ ವೀರಶೈವ ಕಲ್ಯಾಣ ಮಂಟಪ, ಈದ್ಗಾ ಮೈದಾನ, ಬಸವೇಶ್ವರ ವೃತ್ತದ ಮಾರ್ಗವಾಗಿ ಡಿಸಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ಬಳಿಕ ಈ ಕುರಿತು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ಪ್ರತಿಭಟನಾಕಾರರು ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕೋಲ್ಕತ್ತಾದ ಎನ್‌ಆರ್‌ಎನ್‌ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆಯಲ್ಲಿ ಕರ್ತವ್ಯದ ಮೇಲಿದ್ದ ಡಾ|ಪರಿಬಾಹ ಮುಖರ್ಜಿ ಅವರ ಮೇಲೆ ಅಮಾನವೀಯವಾಗಿ ಹಲ್ಲೆ ಮಾಡಲಾಗಿದೆ. ಚಿಕಿತ್ಸೆಗೆ ಬಂದಿದ್ದ 85 ವರ್ಷ ವಯಸ್ಸಿನ ವೃದ್ಧನ ಸಾವಿಗೆ ವೈದ್ಯರೇ ಕಾರಣ ಎಂದು ಸಂಬಂಧಿಗಳು ಈ ರೀತಿ ರಕ್ಕಸ ಧೋರಣೆ ಪ್ರದರ್ಶಿಸಿದ್ದಾರೆ. ದಾಳಿಯಿಂದ ಗಂಭೀರ ಗಾಯಗೊಂಡಿರುವ ವೈದ್ಯ ಈಗ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಅನ್ಯರ ಜೀವ ಉಳಿಸಲು ಹಗಲಿರುಳು ಶ್ರಮಿಸುತ್ತಿರುವ ವೈದ್ಯರಿಗೆ ರಕ್ಷಣೆ ಇಲ್ಲದಿದ್ದರೆ ನಿರ್ಭಯದಿಂದ ಕೆಲಸ ಮಾಡುವುದಾದರೂ ಹೇಗೆ ಎಂದು ಪ್ರಶ್ನಿಸಿದರು.

ವೈದ್ಯರ ಮೇಲೆ ನಿತ್ಯ ಒಂದಲ್ಲ ಒಂದು ಕಡೆ ಇಂಥ ಘಟನೆಗಳು ಮರುಕಳಿಸುತ್ತಿವೆ. ಯಾವ ವೈದ್ಯರು ಕೂಡ ಜೀವ ತೆಗೆಯುವ ಮಟ್ಟಕ್ಕೆ ಕಠೊರವಾಗಿ ವರ್ತಿಸುವುದಿಲ್ಲ. ಎಲ್ಲ ವೈದ್ಯರು ರೋಗಿ ಜೀವ ಉಳಿಸಲು ಹೋರಾಡುತ್ತಾರೆ. ಆದರೆ, ಪರಿಸ್ಥಿತಿ ಅರ್ಥ ಮಾಡಿಕೊಳ್ಳದೆ ಹೀಗೆ ವೈದ್ಯರ ಮೇಲೆ ದಾಳಿಗಳನ್ನು ಮಾಡಿದರೆ ವೈದ್ಯ ವೃತ್ತಿಗೆ ಸೇರಿದ ಯುವ ಸಮುದಾಯ ಆತಂಕಕ್ಕೊಳಗಾಗಿ ವೃತ್ತಿಗೆ ವಿದಾಯ ಹೇಳುವ ಸ್ಥಿತಿ ನಿರ್ಮಾಣವಾಗಲಿದೆ ಎಂದು ದೂರಿದರು.

ಈ ಕೂಡಲೇ ಘಟನೆಗೆ ಕಾರಣರಾದವರನ್ನು ಬಂಧಿಸಬೇಕು. ಕೇಂದ್ರ ಸರ್ಕಾರ ಹೊಸ ಕಾನೂನು ಜಾರಿಗೊಳಿಸಿ ಕರ್ತವ್ಯದಲ್ಲಿರುವ ವೈದ್ಯರ ರಕ್ಷಣೆಗೆ ಮುಂದಾಗಬೇಕು. ಈಗ ರಾಜ್ಯದಲ್ಲಿರುವ ಕಾನೂನಿನ ಪ್ರಕಾರ ಇಂಥ ತಪ್ಪಿಗೆ ಮೂರು ವರ್ಷ ಶಿಕ್ಷೆ ಇದೆ. ಅದನ್ನು ತಿದ್ದುಪಡಿ ಮಾಡಿ ಏಳು ವರ್ಷ ಕಠಿಣ ಶಿಕ್ಷೆಗೆ ಹೆಚ್ಚಿಸಬೇಕು. ಇಲ್ಲವಾದಲ್ಲಿ ವೈದ್ಯರು ವೃತ್ತಿ ಮಾಡುವುದನ್ನು ಬಿಟ್ಟು ಹೋರಾಟಕ್ಕಿಳಿಯಬೇಕಾಗುತ್ತದೆ ಎಂದು ಎಚ್ಚರಿಸಿದರು.

ಸಂಘದ ಅಧ್ಯಕ್ಷ ಡಾ| ಮಹಾಲಿಂಗಪ್ಪ ಬಿ., ಕಾರ್ಯದರ್ಶಿ ಡಾ| ಅನಿರುದ್ಧ ಸಿ. ಕುಲಕರ್ಣಿ, ರಾಜ್ಯ ಸಮಿತಿ ಸದಸ್ಯರಾದ ಡಾ| ಸುರೇಶ ಸಗರದ ಸೇರಿದಂತೆ ವೈದ್ಯರಾದ ಶ್ರೀಧರ ರೆಡ್ಡಿ, ನಾಗರಾಜ ಭಾಲ್ಕಿ, ವಿ.ಎ. ಮಾಲಿಪಾಟೀಲ, ವೈದ್ಯಕೀಯ ವಿದ್ಯಾರ್ಥಿಗಳು ಸೇರಿ ಅನೇಕರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

muslim marriage

Marriage registration ಪ್ರಮಾಣಪತ್ರ ನೀಡುವ ಅಧಿಕಾರ ವಕ್ಫ್ ಬೋರ್ಡ್‌ಗೆ ಎಲ್ಲಿದೆ?

1-libbb

Libya; 8 ವರ್ಷಗಳ ಬಳಿಕ ಲಿಬಿಯಾಕ್ಕೆ ತೆರಳಲು ಭಾರತೀಯರಿಗೆ ಅನುಮತಿ

sidda dkshi

CM-DCM ಮಹಾರಾಷ್ಟ್ರ ಚುನಾವಣ ಪ್ರಚಾರದಲ್ಲಿ ಭಾಗಿ

Iran: ಹಿಜಾಬ್‌ ನಿರಾಕರಿಸಿದರೆ ವಿಶೇಷ ಕ್ಲಿನಿಕ್‌: ಇರಾನ್‌ ತೀರ್ಮಾನಕ್ಕೆ ಆಕ್ರೋಶ

Iran: ಹಿಜಾಬ್‌ ನಿರಾಕರಿಸಿದರೆ ವಿಶೇಷ ಕ್ಲಿನಿಕ್‌: ಇರಾನ್‌ ತೀರ್ಮಾನಕ್ಕೆ ಆಕ್ರೋಶ

HDK (3)

Siddaramaiah; ಕೊಳ್ಳೆ ಹೊಡೆಯುತ್ತಿದ್ದರೂ ನಿಮ್ಮನ್ನು ಮುಟ್ಟಬಾರದಾ: ಎಚ್‌ಡಿಕೆ

1-sugama

Music; ಸುಗಮ ಸಂಗೀತಕ್ಕೆ ನವೋದಯ ಸಾಹಿತ್ಯ ಬುನಾದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ullala-ABVP

Mangalore: ಪರೀಕ್ಷಾ ಶುಲ್ಕ ಹೆಚ್ಚಳ ಖಂಡಿಸಿ ವಿವಿಯಲ್ಲಿ ಎಬಿವಿಪಿ ಪ್ರತಿಭಟನೆ

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Suilla

Punjalkatte: ಬೈಕ್‌ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

muslim marriage

Marriage registration ಪ್ರಮಾಣಪತ್ರ ನೀಡುವ ಅಧಿಕಾರ ವಕ್ಫ್ ಬೋರ್ಡ್‌ಗೆ ಎಲ್ಲಿದೆ?

1-libbb

Libya; 8 ವರ್ಷಗಳ ಬಳಿಕ ಲಿಬಿಯಾಕ್ಕೆ ತೆರಳಲು ಭಾರತೀಯರಿಗೆ ಅನುಮತಿ

sidda dkshi

CM-DCM ಮಹಾರಾಷ್ಟ್ರ ಚುನಾವಣ ಪ್ರಚಾರದಲ್ಲಿ ಭಾಗಿ

police

Kumbala: ಸಂತ್ರಸ್ತೆಯ ತಾಯಿ ಆತ್ಮಹ*ತ್ಯೆ: ಸಚಿತಾ ರೈ ವಿರುದ್ಧ ಮತ್ತೊಂದು ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.