ಹಿರಿಯರ ಅನುಭವ ಮಾರ್ಗದರ್ಶಿ
ಮಕ್ಕಳು ವೃದ್ಧ ತಂದೆ-ತಾಯಿಯನ್ನು ಚೆನ್ನಾಗಿ ನೋಡಿಕೊಳ್ಳಲಿ: ಬೋಸರಾಜ
Team Udayavani, Oct 27, 2019, 4:45 PM IST
ರಾಯಚೂರು: ಯುವ ಪೀಳಿಗೆಗೆ ಹಿರಿಯರ ಮಾರ್ಗದರ್ಶನ ಅಗತ್ಯ. ಅನುಭವದಿಂದ ಹೇಳುವ ಮಾತುಗಳನ್ನು ಕೇಳುವ ಪದ್ಧತಿಯನ್ನು ಯುವಕರು ರೂಢಿಸಿಕೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಎನ್.ಎಸ್.ಬೋಸರಾಜ್ ಹೇಳಿದರು.
ಜಿಲ್ಲಾ ನಿವೃತ್ತ ನೌಕರರ ಸಂಘ ಹಾಗೂ ರೋಟರಿ ಕ್ಲಬ್ ಸಹಯೋಗದಲ್ಲಿ ಶನಿವಾರ ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಹಿರಿಯ ನಾಗರಿಕರ ದಿನಾಚರಣೆ ಹಾಗೂ ಸನ್ಮಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಹಿರಿಯರನ್ನು ಪ್ರೀತಿ ಮತ್ತು ಗೌರವದಿಂದ ಕಾಣಬೇಕು. ತಂದೆ ತಾಯಂದಿರು ತಮ್ಮ ಜೀವನ ಮುಡಿಪಾಗಿಟ್ಟು ಮಕ್ಕಳನ್ನು ಕಷ್ಟದಿಂದ ಬೆಳೆಸಿರುತ್ತಾರೆ. ಆದರೆ, ಉದ್ಯೋಗಕ್ಕೆ ಸೇರಿದ ನಂತರ ಮಕ್ಕಳು ತಂದೆ ಮತ್ತು ತಾಯಂದಿರನ್ನು ಕಡೆಗಣಿಸುವುದು ಸರಿಯಲ್ಲ. ನಿಮ್ಮನ್ನು ಚೆನ್ನಾಗಿ ನೋಡಿಕೊಂಡ ತಂದೆ-ತಾಯಂದಿರನ್ನು ಮುಪ್ಪಿನಲ್ಲಿ ಮಕ್ಕಳು ಕೂಡ ಚೆನ್ನಾಗಿ ನೋಡಿಕೊಳ್ಳಬೇಕು ಎಂದರು.
ಇತ್ತೀಚಿನ ದಿನಗಳಲ್ಲಿ ಹಿರಿಯರನ್ನು ನಿರ್ಲಕ್ಷಿಸುವ ಪರಿಪಾಟ ಹೆಚ್ಚಾಗುತ್ತಿರುವುದು ಕಳವಳಕಾರಿ ಸಂಗತಿ. ಕೌಟುಂಬಿಕ ವ್ಯವಸ್ಥೆ ಹಾಳಾಗುತ್ತಿದೆ. ಮನೆಯಲ್ಲಿ ಹಿರಿಯರು ಇದ್ದರೆ ಸಂಬಂಧಗಳು ಗಟ್ಟಿಯಾಗಿರುತ್ತವೆ. ಆದರೆ, ಮಕ್ಕಳು ಮಾತ್ರ ಚಿಕ್ಕ ಕುಟುಂಬ ಎಂದು ತಂದೆ ತಾಯಂದಿರನ್ನೆ ತೊರೆಯುತ್ತಿರುವುದು ಸರಿಯಲ್ಲ ಎಂದರು.
ಸರ್ಕಾರಗಳು ಹಿರಿಯ ನಾಗರಿಕರಿಗಾಗಿ ಸಾಕಷ್ಟು ಸೌಲಭ್ಯಗಳನ್ನು ನೀಡುತ್ತಿದೆ. ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಇಳಿವಯಸ್ಸಿನಲ್ಲಿ ಆ ಸೌಲಭ್ಯ ಪಡೆಯುವುದು ಕಷ್ಟವಾಗಬಹುದು. ಅಂಥ ಕಡೆ ಅಧಿ ಕಾರಿಗಳು, ವಿದ್ಯಾವಂತ ಯುವಕರು ಅವರಿಗೆ ನೆರವಾಗಬೇಕು. ಸೌಲಭ್ಯ ತಲುಪುವಂತೆ ಮಾಡಬೇಕು ಎಂದರು.
ಇದೇ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಹಿರಿಯ ನಾಗರಿಕರನ್ನು, ನಿವೃತ್ತ ನೌಕರರನ್ನು ಸನ್ಮಾನಿಸಲಾಯಿತು. ನಿವೃತ್ತ ನೌಕರರ ಸಂಘದ ಅಧ್ಯಕ್ಷ ಮಹಾದೇವಪ್ಪ ಹಂಚಿನಾಳ ಪ್ರಾಸ್ತಾವಿಕ ಮಾತನಾಡಿದರು. ವೀರಶೈವ ಸಮಾಜ ಅಧ್ಯಕ್ಷ ಎಂ.ವೀರನಗೌಡ, ಮಹಿಳಾ ಘಟಕ ಅಧ್ಯಕ್ಷೆ ದಾನಮ್ಮ, ರೋಟರಿ ಕ್ಲಬ್ ಅಧ್ಯಕ್ಷ ವೆಂಕಟಸ್ವಾಮಿ, ಸಾಹಿತಿ ಅಯ್ಯಪ್ಪಯ್ಯ ಹುಡಾ, ಸರ್ಕಾರಿ ವಕೀಲ ಎನ್.ಶಿವಶಂಕರ, ಡಾ| ಬಸವರಾಜಪ್ಪ, ಮಾನ್ವಿ ತಾಲೂಕು ನಿವೃತ್ತ ನೌಕರರ ಸಂಘದ ಅಧ್ಯಕ್ಷ ಬೆಟ್ಟಪ್ಪ, ಕೆ.ಶರಣಪ್ಪ, ಜಿ.ಡೇವಿಡ್ ಸೇರಿ ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.