ಸ್ವಚ್ಛಮೇವ ಜಯತೆ ಆಂದೋಲನಕ್ಕೆ ಚಾಲನೆ
ಮನುಷ್ಯನ ದುರಾಸೆಗೆ ಪರಿಸರ ಅಸಮತೋಲನ: ನಾಡಗೌಡ •ಗಿಡ-ಮರ ಬೆಳೆಸಿ ಪರಿಸರ ರಕ್ಷಿಸಿ •ನೀರು ಮಿತ ಬಳಕೆಗೆ ಸಲಹೆ
Team Udayavani, Jun 12, 2019, 2:53 PM IST
ರಾಯಚೂರು: ನಗರದ ಜಿಪಂ ಸಭಾಂಗಣದಲ್ಲಿ ನಡೆದ ಸ್ವಚ್ಛ ಮೇವ ಜಯತೆ ಕಾರ್ಯಕ್ರಮವನ್ನು ಪಶು ಸಂಗೋಪನೆ ಸಚಿವ ವೆಂಟಕರಾವ್ ನಾಡಗೌಡ ಉದ್ಘಾಟಿಸಿದರು.
ರಾಯಚೂರು: ಇಂದಿನ ಈ ಭೀಕರ ಕ್ಷಾಮಕ್ಕೆ ಮನುಷ್ಯನ ದುರಾಸೆಯೇ ಕಾರಣ. ಪರಿಸರ ಅಸಮತೋಲನ ಹೆಚ್ಚುತ್ತಿದ್ದು, ವಾತಾವರಣ ತನ್ನ ಸಮತೋಲನ ಶಕ್ತಿ ಕಳೆದುಕೊಳ್ಳುತ್ತಿದೆ ಎಂದು ಪಶು ಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ ಸಚಿವ ವೆಂಕಟರಾವ್ ನಾಡಗೌಡ ವಿಷಾದಿಸಿದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಜಿಲ್ಲಾಡಳಿತ, ಜಿಪಂ ಸಹಯೋಗದಲ್ಲಿ ಮಂಗಳವಾರ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸ್ವಚ್ಛ ಮೇವ ಜಯತೆ ಆಂದೋಲನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ರಾಜ್ಯ ಸಮ್ಮಿಶ್ರ ಸರ್ಕಾರ ಈ ವರ್ಷವನ್ನು ಜಲವರ್ಷವೆಂದು ಆಚರಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಜಿಲ್ಲೆ ಮತ್ತು ತಾಲೂಕಿನಲ್ಲಿ ಗಿಡಗಳನ್ನು ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇಂದು ಕುಡಿಯುವ ನೀರಿಗೂ ತತ್ವಾರ ಎದುರಿಸುವ ಸ್ಥಿತಿಗೆ ಬಂದು ನಿಂತಿದ್ದೇವೆ. 300-400 ಅಡಿ ಬೋರ್‌ವೆಲ್ಗಳನ್ನು ಕೊರೆದರೂ ನೀರು ಸಿಗುತ್ತಿಲ್ಲ. ರಾಜ್ಯದ ಕೆಲವೆಡೆ 1000ದಿಂದ 1500 ಅಡಿ ಬೋರ್‌ವೆಲ್ ಕೊರೆದರೂ ನೀರೇ ಸಿಗುತ್ತಿಲ್ಲ. ಇದಕ್ಕಿಂತ ದುರ್ಗತಿ ಇನ್ನೇನಿದೆ ಎಂದು ವಿಷಾದಿಸಿದರು.
ಪ್ರತಿ ಶಾಲಾ-ಕಾಲೇಜುಗಳಲ್ಲಿ ಗಿಡಗಳನ್ನು ನೆಟ್ಟು ಗಿಡದ ನಿರ್ವಹಣೆಗೆ ಒಂದೊಂದು ವಿದ್ಯಾರ್ಥಿಗಳಿಗೆ ಇದು ನಿನ್ನ ಗಿಡ ಎನ್ನುವಂತೆ ಅವರಿಗೆ ಜವಾಬ್ದಾರಿ ವಹಿಸಬೇಕು. ಉತ್ತಮ ಗಿಡಗಳನ್ನು ಬೆಳೆಸಿದ ಮಕ್ಕಳಿಗೆ ಡಿಡಿಪಿಐ ಮತ್ತು ಬಿಇಒಗಳಿಂದ ಸನ್ಮಾನಿಸಬೇಕು. ಈಗ ಕೋಲಾರದಲ್ಲಿ ನೀರಿನ ಪರಿಸ್ಥಿತಿ ಯಾವ ಹಂತಕ್ಕೆ ಬಂದಿದೆ ಎಂದರೆ ಬೆಂಗಳೂರಿನಲ್ಲಿ ಬಳಸಿದ ನೀರನ್ನೇ ಶುದ್ಧೀಕರಿಸಿ ಅಲ್ಲಿನ ಕೆರೆಗಳಿಗೆ ತುಂಬುವ ಕೆಲಸ ಮಾಡಲಾಗುತ್ತಿದೆ. ಈಗ ಮಳೆಗಾಲ ಶುರುವಾಗಿದ್ದು, ಗಿಡ ನೆಡುವ ಕಾರ್ಯಕ್ರಮ ಮಾಡಬೇಕಿದೆ ಎಂದರು.
ಜಿಪಂ ಅಧ್ಯಕ್ಷೆ ಆದಿಮನಿ ವೀರಲಕ್ಷಿ ್ಮೕ ಮಾತನಾಡಿ, ಪ್ರತಿ ವರ್ಷ ಸ್ವಚ್ಛ ಮೇವ ಜಯತೇ ಕಾರ್ಯಕ್ರಮ ಮಾಡುತ್ತೇವೆ. ಇದರ ಯಶಸ್ಸಿಗೆ ಕೇವಲ ಅಧಿಕಾರಿಗಳು ಕೆಲಸ ಮಾಡಿದರೆ ಸಾಲದು ಪ್ರತಿಯೊಬ್ಬರು ಗಿಡಗಳನ್ನು ನೆಡಬೇಕು. ಗಿಡ ನಮಗೆ ನೆರಳು ಕೊಡುವ ಜತೆಗೆ ಅದು ಪರಿಸರ ಸಂರಕ್ಷಿಸಿ ನಮ್ಮ ಮುಂದಿನ ಪೀಳಿಗೆಗೆ ಉತ್ತಮ ವಾತಾವರಣ ನೀಡುತ್ತದೆ. ಸ್ವಚ್ಛ ಮೇವ ಜಯತೆ ಆಂದೋಲನ ಜೂ.11ರಿಂದ ಜುಲೈ 10ರವರೆಗೆ ನಡೆಯಲಿದೆ. ಒಣ ಕಸ, ಹಸಿ ಕಸ ಎಂದು ವಿಂಗಡಿಸಿ ಸ್ವಚ್ಛ, ಸುಂದರ ಗ್ರಾಮೀಣ ಪರಿಸರ ನಿರ್ವಹಣೆ ಕುರಿತು ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದರು.
ಸ್ವಚ್ಛ ಮೇವ ಜಯತೆ ಆಂದೋಲನ ನಿಮಿತ್ತ ಸಚಿವರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸಸಿಗಳನ್ನು ನೆಟ್ಟು ನಂತರ ಜಿಪಂ ಸಭಾಂಗಣದ ಆವರಣದಲ್ಲಿ ಸ್ವಚ್ಛತಾ ರಥಕ್ಕೆ ಚಾಲನೆ ನೀಡಿದರು. ವೇದಿಕೆ ಕಾರ್ಯಕ್ರಮದಲ್ಲಿ ಸ್ವಚ್ಛ ಮೇವ ಜಯತೇ ಜಾಗೃತಿ ಕುರಿತು ಕರಪತ್ರಗಳನ್ನು ಬಿಡುಗಡೆಗೊಳಿಸಲಾಯಿತು. ಬಳಿಕ ಸ್ವಚ್ಛತಾ ಪ್ರತಿಜ್ಞಾವಿಧಿ ಸ್ವೀಕರಿಸಿದರು.
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ಅಧ್ಯಕ್ಷ ಬಸನಗೌಡ ದದ್ದಲ್, ಜಿಪಂ ಶಿಕ್ಷಣ ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷ ಖಾಸಿಂ ನಾಯಕ, ಜಿಪಂ ಸದಸ್ಯ ಮಹಾಂತೇಶ ಪಾಟೀಲ ಅತ್ತನೂರು, ತಾಪಂ ಅಧ್ಯಕ್ಷೆ ಜಯಮ್ಮ ಕೆ., ಜಿಲ್ಲಾಧಿಕಾರಿ ಶರತ್ ಬಿ., ಜಿಪಂ ಸಿಇಒ ನಲಿನ್ ಅತುಲ್, ಸಹಾಯಕ ಆಯುಕ್ತೆ ಶಿಲ್ಪಾ ಶರ್ಮಾ ಸೇರಿ ಇತರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪ್ರಿಯಕರನಿಂದಲೇ ಪ್ರೇಯಸಿ ಎದೆಗೆ ಇರಿದು ಹ*ತ್ಯೆ!
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
NH Highway Works: ಬಿ.ಸಿ.ರೋಡು: ಟ್ರಾಫಿಕ್ ಜಾಮ್
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.