ಹಕ್ಕಿಗಾಗಿ ಸಂಘಟಿತ ಹೋರಾಟ ಅಗತ್ಯ
ಜಿಲ್ಲಾದ್ಯಂತ ಶ್ರಮಜೀವಿಗೆ ಗೌರವ ನಮನ•ಕಾರ್ಮಿಕ ಸಂಘಟನೆಗಳಿಂದ ರ್ಯಾಲಿ-ಪ್ರತಿಭಟನೆ-ಧ್ವಜಾರೋಹಣ
Team Udayavani, May 2, 2019, 4:51 PM IST
ರಾಯಚೂರು: ದಿನಗೂಲಿ ನೌಕರರ ಗುತ್ತಿಗೆ ಪದ್ಧತಿ ರದ್ದುಗೊಳಿಸಿ ಸೇವೆ ಕಾಯಂಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ದಿನಗೂಲಿ ನೌಕರರ ಸಂಘದಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಎದುರಿನ ಉದ್ಯಾನವದಲ್ಲಿ ಸಾಂಕೇತಿಕ ಧರಣಿ ನಡೆಸುವ ಮೂಲಕ ವಿಶ್ವ ಕಾರ್ಮಿಕ ದಿನವನ್ನು ಭಿನ್ನವಾಗಿ ಆಚರಿಸಲಾಯಿತು.
ರಾಯಚೂರು: ಮೇ 1ರ ಕಾರ್ಮಿಕ ದಿನವನ್ನು ಬುಧವಾರ ನಗರ ಸೇರಿ ಜಿಲ್ಲಾದ್ಯಂತ ವಿವಿಧ ಕಾರ್ಮಿಕ ಸಂಘಟನೆಗಳು ಆಚರಿಸುವ ಮೂಲಕ ದುಡಿವ ವರ್ಗದ ಶ್ರಮಕ್ಕೆ ಗೌರವ ಸಲ್ಲಿಸಿದರು. ಈ ನಿಮಿತ್ತ ವಿವಿಧೆಡೆ ಕಾರ್ಯಕ್ರಮ ನಡೆದರೆ, ಕೆಲವೆಡೆ ರ್ಯಾಲಿ, ಪ್ರತಿಭಟನೆ ನಡೆಸಲಾಯಿತು.
ಸಿಐಟಿಯು ತಾಲೂಕು ಸಮಿತಿ ನೇತೃತ್ವದಲ್ಲಿ ವಿಶ್ವ ಕಾರ್ಮಿಕ ದಿನಾಚರಣೆ ನಿಮಿತ್ತ ಬಹಿರಂಗ ಸಭೆ ಮತ್ತು ರ್ಯಾಲಿ ನಡೆಯಿತು. ನಗರದ ಸಂಘದ ಕಚೇರಿ ಎದುರು ಸಂಘದ ಜಿಲ್ಲಾಧ್ಯಕ್ಷೆ ಎಚ್.ಪದ್ಮಾ ಧ್ವಜಾರೋಹಣ ನೆರವೇರಿಸಿದರು.
ಬಳಿಕ ನಡೆದ ಬಹಿರಂಗ ಸಭೆಯಲ್ಲಿ ಜಿಲ್ಲಾ ಉಪಾಧ್ಯಕ್ಷ ಪ್ರವೀಣ ರೆಡ್ಡಿ ಗುಂಜಹಳ್ಳಿ ಮಾತನಾಡಿ, ಶ್ರಮದ ಕಾಯಕ ಮಾಡುವ ಮೂಲಕ ಸಮಾಜದ ಏಳಿಗೆಗೆ ಶ್ರಮಿಸುವ ಕಾರ್ಮಿಕರಿಗೆ ಸಿಗಬೇಕಾದ ಕನಿಷ್ಠ ಸೌಲಭ್ಯಗಳು ದಕ್ಕುತ್ತಿಲ್ಲ.
ಖಾಸಗಿ ಕಂಪನಿಗಳ ಮಾಲೀಕರು, ಗುತ್ತಿಗೆ ಕಾರ್ಮಿಕರನ್ನು ಶೋಷಿಸುತ್ತಿರುವ ನೀತಿ ಖಂಡನೀಯ. ಕನಿಷ್ಠ ವೇತನವೂ ನೀಡದೆ ಯಾವುದೇ ಸೌಲಭ್ಯ ಒದಗಿಸದ ಕಾರ್ಮಿಕ ಕಾಯ್ದೆಗಳನ್ನು ಉಲ್ಲಂಘಿಸುತ್ತಿದ್ದಾರೆ ಎಂದು ದೂರಿದರು.
ಹಕ್ಕುಗಳನ್ನು ಪ್ರಶ್ನಿಸುವುದು ಮಹಾ ಅಪರಾಧ ಎನ್ನುವಂತೆ ವರ್ತಿಸುತ್ತಿದ್ದು, ಕೆಲಸದಿಂದಲೇ ತೆಗೆದುಹಾಕುವ ಬೆದರಿಕೆ ಒಡ್ಡುತ್ತಿದ್ದಾರೆ. ಇದರಿಂದ ಅಸಂಘಟಿತ ಕಾರ್ಮಿಕ ವಲಯ ಇಂದಿಗೂ ಬಲಗೊಳ್ಳುತ್ತಿಲ್ಲ. ಇದು ಇಲ್ಲಿಗೆ ಕೊನೆಗೊಳ್ಳಬೇಕು. ಕಾರ್ಮಿಕರಿಗೆ ಕನಿಷ್ಠ ವೇತನದ ಜತೆಗೆ ಕಾಯ್ದೆಯನ್ವಯ ಸಿಗಬೇಕಾದ ಎಲ್ಲ ಸೌಲಭ್ಯಗಳು ಸಿಗುವಂತೆ ಮಾಡಬೇಕು ಎಂದು ಒತ್ತಾಯಿಸಿದರು.
ವಿಮಾ ನೌಕರರ ಸಂಘದ ವಿಭಾಗೀಯ ಅಧ್ಯಕ್ಷ ಎಂ. ಶರಣಗೌಡ ಮಾತನಾಡಿ, ಕಾರ್ಮಿಕರು ತಮ್ಮ ಹಕ್ಕು ಮತ್ತು ಸೌಲಭ್ಯಗಳನ್ನು ಪಡೆಯುವ ನಿಟ್ಟಿನಲ್ಲಿ ಸಂಘಟಿತರಾಗಿ ಹೋರಾಡಬೇಕು. ಸರ್ಕಾರ ಮತ್ತು ಖಾಸಗಿ ಕಂಪನಿಗಳ ದೌರ್ಜನ್ಯ ಎದುರಿಸಲು ಮುಂದಾಗಬೇಕು. ಸರ್ಕಾರ ಮತ್ತು ಖಾಸಗಿ ಕಂಪನಿಗಳು ಕಾರ್ಮಿಕರಿಗೆ ಕನಿಷ್ಠ ವೇತನ ನೀಡದೇ ವಂಚಿಸುತ್ತಿವೆ. ಸೇವಾಭದ್ರತೆ ಕೂಡ ಇಲ್ಲ. ಕಾರ್ಮಿಕರು ಭಯದ ವಾತಾವರಣದಲ್ಲಿಯೇ ಕಾಲದೂಡುವ ಸ್ಥಿತಿ ಇದೆ. ಇದನ್ನು ಹಿಮ್ಮೆಟ್ಟಿಸುವ ನಿಟ್ಟಿನಲ್ಲಿ ಕಾರ್ಮಿಕರು ಹೋರಾಟ ನಡೆಸಬೇಕು ಎಂದರು.
ವಿಭಾಗೀಯ ಕಾರ್ಯದರ್ಶಿ ಎಂ.ರವಿ, ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಕೆ.ಜಿ.ವೀರೇಶ, ಜನವಾದಿ ಮಹಿಳಾ ಸಂಘಟನೆ ಅಧ್ಯಕ್ಷೆ ಸುಲೋಚನಾ, ಸಿಐಟಿಯು ತಾಲೂಕು ಕಾರ್ಯದರ್ಶಿ ಡಿ.ಎಸ್.ಶರಣಬಸವ ಮಾತನಾಡಿದರು. ಕಚೇರಿಯಿಂದ ನಗರದ ಪ್ರಮುಖ ಬೀದಿಗಳಲ್ಲಿ ರ್ಯಾಲಿ ನಡೆಸಲಾಯಿತು.
ಮುಖಂಡರಾದ ಮಹಾದೇವ ಜಂಬಲದಿನ್ನಿ, ವರಲಕ್ಷ್ಮೀ, ಗುರುರಾಜ ದೇಸಾಯಿ, ಚನ್ನಾರೆಡ್ಡಿ, ಮಲ್ಲಿಕಾರ್ಜುನ, ನಾಗಮ್ಮ, ಕಲ್ಯಾಣಮ್ಮ, ಚನ್ನಬಸವ ಸ್ವಾಮಿ, ಶ್ರೀನಿವಾಸ, ಈರಣ್ಣ ಸ್ವಾಮಿ, ಪಾಲ್ ಪ್ರಸಾದ, ಮಲ್ಲೇಶ ಗಧಾರ್, ಶರಣಪ್ಪ, ಭಾಸ್ಕರ, ಮಲ್ಲಿಕಾರ್ಜುನ, ಶಕುಂತಲಾ, ವೆಂಕಟಲಕ್ಷ್ಮೀ, ಗುರುನಾಥ, ರಂಗನಗೌಡ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
MUST WATCH
ಹೊಸ ಸೇರ್ಪಡೆ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.