ಯೋಗಾಭ್ಯಾಸದಿಂದ ಸದೃಢ ಆರೋಗ್ಯ
ನಾಳೆ ಯೋಗ ದಿನಾಚರಣೆ ••ಜಾಗೃತಿ ಜಾಥಾ
Team Udayavani, Jun 20, 2019, 11:17 AM IST
ರಾಯಚೂರು: ಯೋಗ ದಿನಾಚರಣೆ ನಿಮಿತ್ತ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಬುಧವಾರ ರ್ಯಾಲಿ ನಡೆಸಲಾಯಿತು. ತಹಶೀಲ್ದಾರ್ ಡಾ| ಹಂಪಣ್ಣ ಸೇರಿ ಅನೇಕರು ಪಾಲ್ಗೊಂಡಿದ್ದರು.
ರಾಯಚೂರು: ಪ್ರತಿನಿತ್ಯ ಯೋಗಾಭ್ಯಾಸ ಮಾಡುವುದರಿಂದ ಉತ್ತಮ ಆರೋಗ್ಯ ಹೊಂದುವುದರ ಜೊತೆಗೆ ಅನೇಕ ದೈಹಿಕ ಸಮಸ್ಯೆಗಳಿಂದ ಮುಕ್ತರಾಗಬಹುದು ಎಂದು ತಹಶೀಲ್ದಾರ್ ಡಾ| ಹಂಪಣ್ಣ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಆಯುಷ್ ಇಲಾಖೆ ಸಹಯೋಗದಲ್ಲಿ ಐದನೇ ಅಂತಾರಾಷ್ಟ್ರಿಯ ಯೋಗ ದಿನಾಚರಣೆ ನಿಮಿತ್ತ ಬುಧವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಹಮ್ಮಿಕೊಂಡಿದ್ದ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಯೋಗ ಕೇವಲ ಮಾನಸಿಕ ನೆಮ್ಮದಿಯನ್ನು ಮಾತ್ರ ನೀಡದೆ ದೈಹಿಕ ಸದೃಢತೆಗೂ ನೆರವಾಗಲಿದೆ. ಈಗಾಗಲೇ ಯೋಗದಲ್ಲಿನ ಮಹತ್ವವನ್ನು ಅನೇಕ ಮಹನೀಯರು ಸಾಬೀತು ಮಾಡಿದ್ದಾರೆ. ಅದು ವೈಜ್ಞಾನಿಕವಾಗಿಯೂ ರುಜುವಾತಾಗಿದೆ. ಇಡೀ ವಿಶ್ವವೇ ಯೋಗದಿಂದ ಆಗುವ ಉಪಯೋಗಗಳ ಬಗ್ಗೆ ಅರಿತು ಶರಣಾಗಿದೆ ಎಂದರು.
ಪ್ರತಿ ವರ್ಷ ಜೂನ್ 21ರಂದು ವಿಶ್ವ ಯೋಗ ದಿನ ಆಚರಿಸಲಾಗುತ್ತಿದೆ. ಈ ಬಾರಿ 5ನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ವಿಶ್ವಾದ್ಯಂತ ಆಚರಿಸಲಾಗುತ್ತಿದೆ. ಯೋಗ ಮತ್ತು ಆಯುರ್ವೇದ ವೈದ್ಯಕೀಯ ವಿಜ್ಞಾನಗಳು ಭಾರತೀಯ ಪರಂಪರೆಯನ್ನು ಜಗತ್ತಿಗೆ ನೀಡಿದ ಅದ್ಭುತ ಕೊಡುಗೆಗಳಾಗಿವೆ. ವಿಶ್ವದ ಸುಮಾರು 185ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಈ ಯೋಗ ದಿನವನ್ನು ಆಚರಿಸಲಾಗುತ್ತಿದೆ ಎಂದರು.
ಜಿಲ್ಲಾಧಿಕಾರಿ ಕಚೇರಿಯಿಂದ ಶುರುವಾದ ಜಾಥಾವು ಗಾಂಧಿಚೌಕ್, ಮಹಾವೀರ ಚೌಕ್, ತೀನ್ ಕಂದಿಲ್ ವೃತ್ತದ ಮೂಲಕ ಜಿಲ್ಲಾ ಆಯುಷ್ ಕಚೇರಿವರೆಗೆ ನಡೆಸಲಾಯಿತು. ಜಾಥಾದಲ್ಲಿ ಜಿಲ್ಲಾ ಆಯುಷ್ ಅಧಿಕಾರಿ ಡಾ| ಶಂಕರಗೌಡ ಎಸ್.ಪಾಟೀಲ, ಡಾ| ಚಂದ್ರಶೇಖರ ಸುವರ್ಣಗಿರಿ ಮಠ, ಡಾ| ಶಾಕೀರ, ಡಾ| ಹುಲ್ಲೂರು, ಭಾರತೀಯ ಸೇವಾದಳ ರೆಡ್‌ಕ್ರಾಸ್ ಸಂಸ್ಥೆ ಹಾಗೂ ವಿವಿಧ ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.