ಗ್ರಾಮಸ್ಥರೇ ಬೇಡವೆಂದರೂ ಅಕ್ರಮ ಮದ್ಯ ಮಾರಾಟಕ್ಕಿಲ್ಲ ಬ್ರೇಕ್‌!

•ಎಲೆಬಿಚ್ಚಾಲಿಯಲ್ಲಿ ಕಿರಾಣಿ ಅಂಗಡಿಗಳಲ್ಲೂ ಸಿಗುತ್ತೇ ಎಣ್ಣೆ •ಗ್ರಾಮಕ್ಕೆ ಬಂದ ಅಕ್ರಮ ಮದ್ಯ ಸರಬರಾಜು ವಾಹನ ತಡೆದು ಗ್ರಾಮಸ್ಥರ ಪ್ರತಿಭಟನೆ

Team Udayavani, Jul 10, 2019, 3:32 PM IST

1–July-36

ರಾಯಚೂರು: ಎಲೆಬಿಚ್ಚಾಲಿ ಗ್ರಾಮದಲ್ಲಿ ಮಂಗಳವಾರ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ವಾಹನಕ್ಕೆ ಮುತ್ತಿಗೆ ಹಾಕಿದ ಗ್ರಾಮಸ್ಥರು.

ರಾಯಚೂರು: ಇಡೀ ಗ್ರಾಮಸ್ಥರೇ ನಮ್ಮ ಊರಲ್ಲಿ ಮದ್ಯ ಮಾರುವುದು ಬೇಡ. ನೀವು ತಂದು ಮಾರಾಟ ಮಾಡಬೇಡಿ ಎಂದರೂ ಕೆಲ ಪ್ರಭಾವಿಗಳು ಅಕ್ರಮ ಮಾರಾಟ ದಂಧೆ ನಿಲ್ಲಿಸುತ್ತಿಲ್ಲ. ಇದರಿಂದ ಮಂಗಳವಾರ ಮದ್ಯ ಪೂರೈಕೆಗೆ ಆಗಮಿಸಿದ್ದ ವಾಹನವನ್ನು ಗ್ರಾಮಸ್ಥರು ತಡೆದು ಪ್ರತಿಭಟಿಸಿದ ಘಟನೆ ನಡೆದಿದೆ.

ತಾಲೂಕಿನ ಎಲೆ ಬಿಚ್ಚಾಲಿಯಲ್ಲಿ ಮದ್ಯ ಮಾರಾಟಕ್ಕೆ ಕಡಿವಾಣವೇ ಇಲ್ಲದಂತಾಗಿದೆ. ಮಾನ್ಯತೆ ಹೊಂದಿದ ಯಾವುದೇ ಮದ್ಯದಂಗಡಿ ಇರದಿದ್ದರೂ ಗ್ರಾಮದ ಕಿರಾಣಿ ಅಂಗಡಿ, ಪಾನ್‌ಶಾಪ್‌ಗ್ಳಲ್ಲಿ ಎಲ್ಲ ರೀತಿಯ ಮದ್ಯ ಸಿಗುತ್ತಿದೆ. ಇದರಿಂದ ಗ್ರಾಮದ ಯುವಕರು ಕೂಡ ಹಾಳಾಗುತ್ತಿದ್ದು, ನಮ್ಮೂರಿಗೆ ಮದ್ಯ ಸರಬರಾಜು ಮಾಡದಂತೆ ಗ್ರಾಮಸ್ಥರು ಮಾಡಿದ ಮನವಿಗೆ ಇಲಾಖೆ ಯಾವುದೇ ಕಡಿವಾಣ ಹಾಕುತ್ತಿಲ್ಲ.

ಗ್ರಾಮದಲ್ಲಿ ಸಂಜೆಯಾದರೆ ಪರಿಸ್ಥಿತಿ ಭಿನ್ನವಾಗುತ್ತಿದೆ. ಮತ್ತಿನಲ್ಲಿ ತೇಲಾಡುವವರ ಸಂಖ್ಯೆ ಹೆಚ್ಚುತ್ತಿದೆ. ಕೆಲವರು ದುಡಿದು ಬಂದ ಹಣವನ್ನೆಲ್ಲ ಮದ್ಯಕ್ಕೆ ಇಡುತ್ತಿದ್ದು, ಕುಟುಂಬಗಳು ಸಂಕಷ್ಟ ಎದುರಿಸುವಂತಾಗಿದೆ. ಅಲ್ಲದೇ, ಕಿರಾಣಿ ಅಂಗಡಿಗಳಲ್ಲೂ ಮದ್ಯ ಮಾರುವುದರಿಂದ ಮಹಿಳೆಯರು ಅಂಗಡಿಗಳಿಗೆ ಹೋಗುವುದು ಕಷ್ಟ ಎನ್ನುವಂತಾಗಿದೆ. ಈ ಹಿಂದೆಯೇ ಇದಕ್ಕೆ ಕಡಿವಾಣ ಹಾಕುವಂತೆ ಮಾಡಿದ ಒತ್ತಾಯಕ್ಕೆ ಕೆಲಕಾಲ ಪರಿಸ್ಥಿತಿ ಹತೋಟಿಗೆ ಬಂದಿತ್ತು. ಈಗ ಪುನಃ ಅಂಥದ್ದೇ ಸಮಸ್ಯೆ ಎದುರಾಗಿದ್ದು, ಬೇಡ ಎಂದರೂ ಕೆಲವರೂ ಅಕ್ರಮವಾಗಿ ಮದ್ಯ ಮಾರುತ್ತಿದ್ದಾರೆ ಎಂದು ದೂರುತ್ತಾರೆ ಗ್ರಾಮಸ್ಥರು.

ಇದರಿಂದ ಬೇಸತ್ತ ಗ್ರಾಮಸ್ಥರು ಈ ಹಿಂದೆ ಅಬಕಾರಿ ಇಲಾಖೆ ಅಧಿಕಾರಿಗಳು, ಸ್ಥಳೀಯ ಠಾಣೆಗೂ ದೂರು ನೀಡಿದ್ದಾರೆ. ಒಂದು ವಾರ ಇದಕ್ಕೆ ಕಡಿವಾಣ ಹಾಕಲಾಗಿತ್ತು. ಈಗ ಪುನಃ ಅಕ್ರಮ ಮದ್ಯ ಮಾರಾಟ ಶುರುವಾಗಿದೆ. ಇದರಿಂದ ಆಕ್ರೋಶಗೊಂಡ ಗ್ರಾಮದ ಪುರುಷರು, ಮಹಿಳೆಯರು ವಾಹನಕ್ಕೆ ಮುತ್ತಿಗೆ ಹಾಕಿ ಪ್ರತಿಭಟಿಸಿದ್ದಾರೆ.

ಗ್ರಾಪಂ ಅಧ್ಯಕ್ಷ ಭೀಮಣ್ಣ, ತಾಪಂ ಸದಸ್ಯ ಎಚ್.ರಮೇಶ, ಮುಖಂಡರಾದ ಮಹಾಂತಪ್ಪ, ಹನುಮಂತ ನಾಯಕ, ಶ್ರೀನಿವಾಸ ನಾಯಕ ಸೇರಿದಂತೆ ನೂರಾರು ಗ್ರಾಮಸ್ಥರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Railway-Minister-MP-DK

Udupi: ಕೊಂಕಣ ರೈಲು ವಿಲೀನಕ್ಕೆ ರೈಲ್ವೆ ಸಚಿವರಿಂದ ಸಹಮತ: ಕೋಟ ಶ್ರೀನಿವಾಸ ಪೂಜಾರಿ

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

Maharashtra; Ekmath hey to safe hey says Shivsena

Maharashtra: ಏಕ್‌ನಾಥ್‌ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

Draupadi Murmu addresses the joint House at the Old Parliament House

Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Railway-Minister-MP-DK

Udupi: ಕೊಂಕಣ ರೈಲು ವಿಲೀನಕ್ಕೆ ರೈಲ್ವೆ ಸಚಿವರಿಂದ ಸಹಮತ: ಕೋಟ ಶ್ರೀನಿವಾಸ ಪೂಜಾರಿ

2

Malpe: ಬೋಟಿನಲ್ಲಿದ್ದ ಮೀನುಗಾರ ನಾಪತ್ತೆ; ಪ್ರಕರಣ ದಾಖಲು

crime

Padubidri: ಸ್ಕೂಟಿಯಿಂದ ಬಿದ್ದು ಮಹಿಳೆಗೆ ತೀವ್ರ ಗಾಯ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Railway-Minister-MP-DK

Udupi: ಕೊಂಕಣ ರೈಲು ವಿಲೀನಕ್ಕೆ ರೈಲ್ವೆ ಸಚಿವರಿಂದ ಸಹಮತ: ಕೋಟ ಶ್ರೀನಿವಾಸ ಪೂಜಾರಿ

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

Maharashtra; Ekmath hey to safe hey says Shivsena

Maharashtra: ಏಕ್‌ನಾಥ್‌ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ

2

Malpe: ಬೋಟಿನಲ್ಲಿದ್ದ ಮೀನುಗಾರ ನಾಪತ್ತೆ; ಪ್ರಕರಣ ದಾಖಲು

crime

Padubidri: ಸ್ಕೂಟಿಯಿಂದ ಬಿದ್ದು ಮಹಿಳೆಗೆ ತೀವ್ರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.