ಮದ್ಯದಂಗಡಿ ಬಂದ್‌ಗೆ ಆಗ್ರಹ

ಸಮಸ್ಯೆ ಬಗೆಹರಿಸುವಂತೆ ಗುತ್ತಿಗೋಳಿ-ಹೊಸಕೋಟಿ ಗ್ರಾಮಸ್ಥರ ಒತ್ತಾಯ

Team Udayavani, Jul 4, 2019, 12:43 PM IST

04-July-24

ರಾಮದುರ್ಗ: ಮದ್ಯದಂಗಡಿ ಬಂದ್‌ ಮಾಡುವಂತೆ ಆಗ್ರಹಿಸಿ ತಾಲೂಕಿನ ಗುತ್ತಿಗೋಳಿ-ಹೊಸಕೋಟಿ ಗ್ರಾಮಸ್ಥರು ಹಾಗೂ ಮಹಿಳಾ ಸ್ವಸಹಾಯ ಸಂಘಗಳ ಸ್ತ್ರೀಯರು, ಯುವಕ ಮಂಡಳ ಸದಸ್ಯರು ಮಂಗಳವಾರ ಸಂಜೆ ಮದ್ಯದಂಗಡಿ ಎದುರು ಪ್ರತಿಭಟನೆ ನಡೆಸಿದರು.

ರಾಮದುರ್ಗ: ಮದ್ಯದಂಗಡಿ ಬಂದ ಮಾಡುವಂತೆ ಆಗ್ರಹಿಸಿ ತಾಲೂಕಿನ ಗುತ್ತಿಗೋಳಿ-ಹೊಸಕೋಟಿ ಗ್ರಾಮಸ್ಥರು ಹಾಗೂ ಮಹಿಳಾ ಸ್ವಸಹಾಯ ಸಂಘಗಳ ಸ್ತ್ರೀಯರು, ಯುವಕ ಮಂಡಳದ ಸದಸ್ಯರು ಮಂಗಳವಾರ ಸಂಜೆ ಮದ್ಯದಂಗಡಿ ಎದುರು ಪ್ರತಿಭಟನೆ ನಡೆಸಿದರು.

ಈ ವೇಳೆ ಗ್ರಾಮಸ್ಥರು ಮಾತನಾಡಿ, ಗುತ್ತಿಗೋಳಿ-ಹೊಸಕೋಟಿಯಲ್ಲಿ 3 ವರ್ಷಗಳಿಂದ ಮದ್ಯದಂಗಡಿ ಇದ್ದು, ಅದನ್ನು ಸಂಪೂರ್ಣ ಬಂದ್‌ ಮಾಡುವಂತೆ ಹಲವು ಬಾರಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಶೀಘ್ರವೇ ಮದ್ಯಂದಗಡಿ ಬಂದ್‌ ಮಾಡುವಂತೆ ಒತ್ತಾಯಿಸಿದರು.

ಗುತ್ತಿಗೋಳಿ -ಹೊಸಕೋಟಿ ಗ್ರಾಮವು ಬಹುದೊಡ್ಡ ಗ್ರಾಮವಾಗಿದ್ದು, ಸ್ಥಳೀಯವಾಗಿಯೇ ಮದ್ಯ ದೊರೆಯುವುದರಿಂದ ಚಿಕ್ಕ ಮಕ್ಕಳು ಸಹ ಮದ್ಯದ ಚಟಕ್ಕೆ ಅಂಟಿಕೊಂಡು ಅನೇಕ ಕುಟುಂಬಗಳು ಬೀದಿಗೆ ಬಂದಿವೆ. ಕುಡುಕರು ಕುಡಿದು ಬಂದ್‌ ಅಮಲಿನಲ್ಲಿ ಪತ್ನಿ ಮಕ್ಕಳೊಂದಿಗೆ ಜಗಳವಾಡಿಕೊಂಡು ಅನೇಕ ಕುಟುಂಬಗಳಲ್ಲಿ ನೆಮ್ಮದಿ ಮಾಯವಾಗಿ ಹಲವು ಕುಟುಂಬಗಳು ಬೀದಿಗೆ ಬಂದಿವೆ ಎಂದು ಆಕ್ರೋಶ ವ್ಯಕ್ತ ಪಡಿಸಿದರು.

ಗ್ರಾಮದಲ್ಲಿ ಕುಡುಕರ ಅತೀರೇಕಕ್ಕೇರಿದ್ದು, ಗ್ರಾಮದಲ್ಲಿ ನೆಮ್ಮದಿ ಮಾಯವಾಗಿದೆ. ಕಾರಣ ಗ್ರಾಮದಲ್ಲಿರುವ ಮದ್ಯದಂಗಡಿಯ ಪರವಾನಿಗೆ ಬಂದ್‌ ಮಾಡಬೇಕೆಂದು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಲಿಖೀತ ಹಾಗೂ ಮೌಖೀಕ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಇನ್ನು ಮುಂದಾದರು ಸಂಬಂಧಪಟ್ಟ ಇಲಾಖೆಯವರು ಎಚ್ಚೆತ್ತುಕೊಂಡು ಮದ್ಯದಂಗಡಿ ಬಂದ್‌ ಮಾಡಬೇಕು. ಇಲ್ಲವಾದಲ್ಲಿ ಗ್ರಾಮದ ಮಹಿಳೆಯರು ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಮಹಿಳೆಯರು ಎಚ್ಚರಿಕೆ ನೀಡಿದರು.

ಪ್ರತಿಭಟನಾ ಸ್ಥಳಕ್ಕಾಗಮಿಸಿದ ಅಬಕಾರಿ ಇಲಾಖೆಯ ಡಿವೈಏಸ್‌ಪಿ ಶಿವಲಿಂಗಪ್ಪ ಬನಹಟ್ಟಿ, ಪಿಎಸ್‌ಐ ಮಲ್ಲಪ್ಪ ಪಡಸಲಗಿ ಇಲಾಖೆ ಹಾಗೂ ಸರಕಾರದ ನೀತಿ ನಿಯಮಗಳಿಗೆ ತಕ್ಕಂತೆ ಗ್ರಾಮದ ಮಹಿಳೆಯರ ಒತ್ತಾಯ ಪರಿಶೀಲಿಸಿ ಸೂಕ್ತ ಕ್ರಮ ತೆಗೆದುಕೊಳ್ಳಲು ಮೇಲಧಿಕಾರಿಗಳಿಗೆ ವರದಿ ನೀಡಿ ಸಮಸ್ಯೆ ಬಗೆಹರಿಸುವುದಾಗಿ ತಿಳಿಸಿ , ಇಲಾಖೆಯ ಮುಂದಿನ ಆದೇಶದವರೆಗೆ ಅಂಗಡಿಗೆ ಬಿಗ್‌ ಹಾಕುವಂತೆ ಸೂಚಿಸಿದರು.

ಪ್ರತಿಭಟನೆಯಲ್ಲಿ ಗ್ರಾಮದ ಮಹಿಳಾ ಸಂಘಗಳ ಮುಖಂಡೆ ಹಾಗೂ ತಾಪಂ ಸದಸ್ಯೆ ವಿಜಯಲಕ್ಷ್ಮೀ ನಾಡಗೌಡರ, ಮುಖಂಡರಾದ ಈರಯ್ಯ ಮಠಪತಿ, ಹಣಮಂತಗೌಡ ಕೃಷ್ಣಗೌಡರ, ಗಿರೀಶ ನಾಡಗೌಡರ, ಬಸವರಾಜ ನಾಡಗೌಡರ, ಮಹಾಲಿಂಗಪ್ಪ ಕೃಷ್ಣಗೌಡರ, ಕೃಷ್ಣಾ ಈರಡ್ಡಿ, ಇಂದಿರಾಬಾಯಿ ನಾಯಕ, ಶಂಕ್ರಯ್ಯ ವಿರಕ್ತಮಠ, ಲಕ್ಷ್ಮಣ ದಳವಾಯಿ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

10-karkala

Karkala: ಬಾವಿ‌ಗೆ ಬಿದ್ದು ವ್ಯಕ್ತಿ‌ ‌ಸಾವು‌; ಮೃತದೇಹ ಮೇಲಕ್ಕೆತ್ತಿದ ಅಗ್ನಿಶಾಮಕ‌ ಪಡೆ

3-beehive

Bengaluru: ಇನ್ಮುಂದೆ ಜೇನುಗೂಡು ಕಟ್ಟಬೇಕಿಲ್ಲ; 3ಡಿ ಗೂಡು ಆವಿಷ್ಕಾರ!

4-cock

Bengaluru: ಮಾಂಸದ ನಾಟಿ ಕೋಳಿಗೆ ಭರ್ಜರಿ ಡಿಮ್ಯಾಂಡ್‌!

Kiran Raj will be a superhero in next film

Kiran Raj: ಸೂಪರ್‌ ಹೀರೋ ಆಗಲಿದ್ದಾರೆ ಕಿರಣ್‌ ರಾಜ್‌

5-agri

Bengaluru: ಸಾವಯವ, ಸಿರಿಧಾನ್ಯ ಉತ್ಪನ್ನಕ್ಕೆ ಮುಗಿಬಿದ್ದ ಜನ

24 Karnataka players in IPL Mega Auction; Here is the list

IPL Mega Auction: ಅದೃಷ್ಟ ಪರೀಕ್ಷೆಯಲ್ಲಿ ಕರ್ನಾಟಕದ 24 ಮಂದಿ ಆಟಗಾರರು; ಇಲ್ಲಿದೆ ಪಟ್ಟಿ

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-karkala

Karkala: ಬಾವಿ‌ಗೆ ಬಿದ್ದು ವ್ಯಕ್ತಿ‌ ‌ಸಾವು‌; ಮೃತದೇಹ ಮೇಲಕ್ಕೆತ್ತಿದ ಅಗ್ನಿಶಾಮಕ‌ ಪಡೆ

KLE Technological University: Awarded Honorary Doctorate to Murugesh Nirani

KLE Technological University: ಮುರುಗೇಶ್‌ ನಿರಾಣಿ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ

3-beehive

Bengaluru: ಇನ್ಮುಂದೆ ಜೇನುಗೂಡು ಕಟ್ಟಬೇಕಿಲ್ಲ; 3ಡಿ ಗೂಡು ಆವಿಷ್ಕಾರ!

4-cock

Bengaluru: ಮಾಂಸದ ನಾಟಿ ಕೋಳಿಗೆ ಭರ್ಜರಿ ಡಿಮ್ಯಾಂಡ್‌!

5-agri

Bengaluru: ಸಾವಯವ, ಸಿರಿಧಾನ್ಯ ಉತ್ಪನ್ನಕ್ಕೆ ಮುಗಿಬಿದ್ದ ಜನ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

10-karkala

Karkala: ಬಾವಿ‌ಗೆ ಬಿದ್ದು ವ್ಯಕ್ತಿ‌ ‌ಸಾವು‌; ಮೃತದೇಹ ಮೇಲಕ್ಕೆತ್ತಿದ ಅಗ್ನಿಶಾಮಕ‌ ಪಡೆ

KLE Technological University: Awarded Honorary Doctorate to Murugesh Nirani

KLE Technological University: ಮುರುಗೇಶ್‌ ನಿರಾಣಿ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ

3-beehive

Bengaluru: ಇನ್ಮುಂದೆ ಜೇನುಗೂಡು ಕಟ್ಟಬೇಕಿಲ್ಲ; 3ಡಿ ಗೂಡು ಆವಿಷ್ಕಾರ!

4-cock

Bengaluru: ಮಾಂಸದ ನಾಟಿ ಕೋಳಿಗೆ ಭರ್ಜರಿ ಡಿಮ್ಯಾಂಡ್‌!

Kiran Raj will be a superhero in next film

Kiran Raj: ಸೂಪರ್‌ ಹೀರೋ ಆಗಲಿದ್ದಾರೆ ಕಿರಣ್‌ ರಾಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.