ಡಿಕೆಶಿ ಬಂಧನ: ಜಿಲ್ಲಾದ್ಯಂತ ಪ್ರತಿಭಟನೆ
ಬೈಕ್‌ಗಳಿಗೆ ಬೆಂಕಿ, ಕೇಶ ಮುಂಡನ ಮಾಡಿಸಿಕೊಂಡು ಪ್ರತಿಭಟನೆ • ಇಂದು ಮತ್ತೆ ಜಿಲ್ಲಾ ಬಂದ್‌ಗೆ ಕರೆ
Team Udayavani, Sep 5, 2019, 4:14 PM IST
ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಬಂಧನ ವಿರೋಧಿಸಿ ರಾಮನಗರ ತಾಲೂಕು ಕೈಲಾಂಚ ಗ್ರಾಮದಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಟೈರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದರು.
ರಾಮನಗರ: ಕನಕಪುರ ವಿಧಾನಸಭಾ ಕ್ಷೇತ್ರದ ಶಾಸಕ ಡಿ.ಕೆ.ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ಬಂಧಿಸಿರುವುದು ರಾಜಕೀಯ ಪ್ರೇರಿತ ಎಂದು ಆರೋಪಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು, ಜೆಡಿಎಸ್ ಕಾರ್ಯಕರ್ತರು, ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಮತ್ತು ಡಿಕೆಶಿ ಅಭಿಮಾನಿಗಳು ಜಿಲ್ಲಾದ್ಯಂತ ಬುಧವಾರ ಪ್ರತಿಭಟನೆ ನಡೆಸಿದರು.
ಜಿಲ್ಲೆಯ ನಾಲ್ಕೂ ತಾಲೂಕು ಕೇಂದ್ರಗಳು, ಹೋಬಳಿ ಕೇಂದ್ರಗಳಲ್ಲಿ ಪ್ರತಿಭಟನೆಗಳು ನಡೆದಿವೆ. ಕನಕಪುರ ತಾಲೂಕಿನಲ್ಲಿ ತೀವ್ರ ಸ್ವರೂಪ ಪಡೆದುಕೊಂಡ ಪ್ರತಿಭಟನೆಯ ವೇಳೆ ಸಾತನೂರಿನಲ್ಲಿ ಎರಡು ಬೈಕ್‌ಗಳಿಗೆ ಬೆಂಕಿ ಹಚ್ಚಲಾಗಿದೆ.
ಕೇಶ ಮುಂಡನ ಮಾಡಿಸಿ ಧರಣಿ: ಡಿಕೆಶಿ ಅವರ ಸ್ವಗ್ರಾಮ ದೊಡ್ಡಾಲಹಳ್ಳಿಯಲ್ಲಿ ಅವರ ಕಟ್ಟಾಭಿಮಾನಿಗಳು ಸಾರ್ವಜನಿಕವಾಗಿ ಕೇಶ ಮುಂಡನ ಮಾಡಿಸಿ ಕೊಂಡು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾಲ್ಕೂ ತಾಲೂಕು ಕೇಂದ್ರಗಳಲಿ ಬುಧವಾರ ಬೆಳ್ಳಂಬೆಳಿಗೆ ಪ್ರಮುಖ ರಸ್ತೆಗಳಲ್ಲಿ ಟೈರ್‌ಗಳಿಗೆ ಬೆಂಕಿ ಹಚ್ಚಿದ್ದರಿಂದ ವಾಹನ ಸಂಚಾರದಲ್ಲಿ ವ್ಯತ್ಯಯವುಂಟಾಗಿತ್ತು.
ಕನಕಪುರ ಬಂದ್: ರಾಮನಗರ, ಚನ್ನಪಟ್ಟಣ ಮತ್ತು ಕನಕಪುರ ನಗರಗಳಲ್ಲಿ ಕೆಲವರು ಗುಂಪುಕಟ್ಟಿ ಕೊಂಡು ಬಲವಂತವಾಗಿ ಅಂಗಡಿಗಳನ್ನು ಮುಚ್ಚಿಸಿರುವ ಪ್ರಕರಣಗಳಿವೆ. ಪ್ರತಿಭಟನಾಕಾರರ ಬಲವಂತಕ್ಕೆ ಅಂಗಡಿ ಮಾಲೀಕರು, ಹೋಟೆಲ್ ಮಾಲೀಕರು ವ್ಯಾಪಾರ ಸ್ಥಗಿತಗೊಳಿಸಿದ್ದರು. ಕನಕಪುರದಲ್ಲಿ ರೇಷ್ಮೆ ಗೂಡು ಮಾರುಕಟ್ಟೆಯಲ್ಲಿ ಕೆಲಕಾಲ ಹರಾಜು ಸ್ಥಗಿತಗೊಂಡಿತ್ತು. ಜಿಲ್ಲಾ ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರು ಗುರುವಾರ ರಾಮ ನಗರ ಜಿಲ್ಲಾ ಬಂದ್‌ಗೆ ಕರೆ ನೀಡಿದ ಹಿನ್ನಲೆಯಲ್ಲಿ ಮಧ್ಯಾಹ್ನದ ನಂತರ ವ್ಯಾಪಾರವಹಿವಾಟು ಸಹಜ ಸ್ಥಿತಿಗೆ ಮರಳಿದೆ.
ರಸ್ತೆಗಿಳಿಯದ ಕೆ.ಎಸ್.ಆರ್.ಟಿ.ಸಿ ಬಸ್‌ಗಳು: ಮಂಗಳವಾರ ಸಂಜೆ ಡಿಕೆಶಿ ಅವರ ಬಂಧನದ ವಿಚಾರ ಪ್ರಸಾರವಾಗುತ್ತಿದ್ದಂತೆ ಆಕ್ರೋಶ ಭುಗಿಲೆದ್ದಿತ್ತು. ಕನಕಪುರದಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್‌ಗಳಿಗೆ ಕಲ್ಲು ತೂರಾಟ ಮತ್ತು ಒಂದು ಬಸ್ಸಿಗೆ ಬೆಂಕಿ ಹಚ್ಚಿದ್ದ ಕಾರಣ ಬುಧವಾರ ಮಧ್ಯಾಹ್ನದವರೆಗೆ ಜಿಲ್ಲೆಯ ಯಾವ ಡಿಪೋದಿಂದಲೂ ಕೆ.ಎಸ್.ಆರ್.ಟಿ.ಸಿ ಬಸ್‌ಗಳು ರಸ್ತೆಗೆ ಇಳಿಯಲಿಲ್ಲ. ರಾಮನಗರದ ಐಜೂರು ವೃತ್ತ ಬಿಡದಿ ಮತ್ತು ಚನಪಟ್ಟಣಗಳಲ್ಲಿ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಪ್ರತಿಭಟನೆ ಮತ್ತು ಬೆಂಗಳೂರು- ಕನಕಪುರ ರಸ್ತೆಯಲ್ಲಿಯೂ ಪ್ರತಿಭಟನೆ ತೀವ್ರವಾಗಿದ್ದರಿಂದ ಬೆಂಗಳೂರಿನಿಂದ ಆಗಮಿಸುತ್ತಿದ್ದ ವಾಹನಗಳನ್ನು ವಾಪಸ್ಸು ಕಳುಹಿಸಿಲಾಗಿದೆ. ಇತ್ತ ಚನ್ನಪಟ್ಟಣದ ಹೊರವಲಯದಲ್ಲಿ ಮೈಸೂರಿನಿಂದ ಬರುತ್ತಿದ್ದ ವಾಹನಗಳನ್ನು ವಾಪಸ್ಸು ಕಳುಹಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ
Bajpe: ತರಕಾರಿ ಬೀಜ ಬಿತ್ತನೆಗೆ ಹಿಂದೇಟು
Manmohan Singh: ಮನಮೋಹನ್ ಸಿಂಗ್ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ
Puttur ನಗರಕ್ಕೂ ಬೇಕು ಟ್ರಾಫಿಕ್ ಸಿಗ್ನಲ್
INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.