![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Aug 15, 2019, 4:00 PM IST
ರಾಮನಗರ ಜಿಲ್ಲೆ ಕನಕಪುರ ತಾಲೂಕು ಸಂಗಮದಲ್ಲಿ ಕಾವೇರಿ ನದಿಯನ್ನು ವೀಕ್ಷಿಸುತ್ತಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್.
ರಾಮನಗರ/ಕನಕಪುರ: ಇನ್ನು 15 ದಿನಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇದ್ದು, ಕಾವೇರಿ ನದಿ ಪಾತ್ರದಲ್ಲಿ ನೀರು ಹರಿವಿನ ಪ್ರಮಾಣ ಮತ್ತೆ ಏರಿಕೆಯಾಗುವ ಸಾಧ್ಯತೆ ಇದೆ. ಜನ, ಜಾನುವಾರುಗಳಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕಾಗಿದೆ. ಹೀಗಾಗಿ ಪರಿಶೀಲನೆ ನಡೆಸಿರುವುದಾಗಿ ಮಾಜಿ ಸಚಿವ ಹಾಗೂ ಕನಕಪುರ ಶಾಸಕ ಡಿ.ಕೆ.ಶಿವಕುಮಾರ್ ಹೇಳಿದರು.
ಜಿಲ್ಲೆಯ ಕನಕಪುರ ತಾಲೂಕು ಉಯ್ಯಂಬಳ್ಳಿ ಹೋಬಳಿ ಸಂಗಮದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಕಬಿನಿ, ಹೇಮಾವತಿ ನದಿಗಳು ಮತ್ತು ಕೆಆರ್‌ಎಸ್ ಜಲಾಶಯದಿಂದ ಹೆಚ್ಚುವರಿ ನೀರು ಕಾವೇರಿ ನದಿ ಪಾತ್ರದಲ್ಲಿ ಹರಿದ ಕಾರಣ ಸಂಗಮದಲ್ಲಿ ಎಂದಿಗಿಂತ ಸುಮಾರು 10 ಅಡಿ ಎತ್ತರಕ್ಕೆ ನೀರು ಹರಿದಿದೆ. ಸಂಗಮದಲ್ಲಿರುವ ಪ್ರವಾಸಿಗರ ಕಟ್ಟಡದವರೆಗೂ ನೀರು ಬಂದಿದೆ. ಹೀಗೆ ಅಪಾರ ಪ್ರಮಾಣದ ನೀರು ಹರಿಯುವಾಗ ನದಿ ಪಾತ್ರದ ಬಳಿ ಇರುವ ಗ್ರಾಮಗಳಿಗೂ ನೀರು ನುಗ್ಗುವ ಸಾಧ್ಯತೆ ಇರುವುದರಿಂದ ಖುದ್ದ ಪರಿಶೀಲನೆ ನಡೆಸಿರುವುದಾಗಿ ಮತ್ತು ಅಧಿಕಾರಿಗಳಿಂದ ಮಾಹಿತಿ ಪಡೆದಿರುವುದಾಗಿ ಹೇಳಿದರು.
ಮುಂಜಾಗ್ರತಾ ಕ್ರಮಗಳಿಗೆ ಸೂಚನೆ: ಕಾವೇರಿ ಜಲಾನಯನ ಪ್ರದೇಶದಲ್ಲಿ ಅರ್ಕಾವರಿ ಹೊರತುಪಡಿಸಿ, ಎಲ್ಲಾ ನದಿಗಳಲ್ಲೂ ನೀರು ಹಿರಿವಿನ ಪ್ರಮಾಣ ಅಧಿಕವಾಗಿದೆ. ಹೀಗಾಗಿ ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದೇವೆ. ಅಪಾಯದ ಮುನ್ಸೂಚನೆ ಇದ್ದರೆ, ಗ್ರಾಮಸ್ಥರನ್ನು ಬೇರೆಡೆಗೆ ಸ್ಥಳಾಂತರಿಸಲು ಸಹ ಸಿದ್ಧವಾಗಿರುವಂತೆ ತಾವು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ ಎಂದು ತಿಳಿಸಿದರು.
ಬರ ಪರಿಹಾರ ನೀಡಲು ಸರ್ಕಾರಕ್ಕೆ ಮನವಿ: ರಾಮನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಕೋಲಾರ, ಮಂಡ್ಯ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ತುಮಕೂರು ಜಿಲ್ಲೆಗಳಲ್ಲಿ ಮಳೆ ಕೊರತೆ ಕಾಡುತ್ತಿದೆ. ಶೇ.20ರಷ್ಟು ಮಾತ್ರ ಬಿತ್ತನೆಯಾಗಿದೆ. ಈ ಭಾಗದ ದುರ್ದೈವ ಬರ ಕಾಡುತ್ತಿದೆ. ಸಿಎಂ ಯಡಿಯೂರಪ್ಪ ಅವರು ಶೀಘ್ರದಲ್ಲೇ ಬರ ಪರಿಹಾರ ಕೊಡಿಸಬೇಕು. ನರೇಗಾ ಯೋಜನೆಯಡಿಯಲ್ಲಿ 150 ದಿನಗಳ ಕಾಲ ಕೂಲಿ ಕೊಡಲು ಅವಕಾಶ ಇದೆ. ಪ್ರತಿ ಪಂಚಾಯ್ತಿಯಲ್ಲೂ ಕನಿಷ್ಠ 3-4 ಕೋಟಿ ರೂ., ಕಾಮಗಾರಿ ಕೈಗೊಂಡು ಕೃಷಿ ಕಾರ್ಮಿಕರಿಗೆ ಉದ್ಯೋಗ ಸೃಷ್ಟಿಸಬೇಕು ಎಂದು ಆಗ್ರಹಿಸಿದರು.
ಮುಖ್ಯಮಂತ್ರಿ ಯಡಿಯೂರಪ್ಪ ಅವರು ನೋಟು ಪ್ರಿಂಟ್ ಮಾಡುತ್ತಿಲ್ಲ ಎಂಬ ಹೇಳಿಕೆ ಕೊಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆಗೆ ಹೆಚ್ಚು ಪರಿಹಾರದ ಹಣ ಘೋಷಿಸಿದ್ದಾರೆ. ಬಾಡಿಗೆ ಮನೆಗೆ 5 ಸಾವಿರ ರೂ., ಮನೆ ಕಟ್ಟಿಕೊಳ್ಳಲು 5 ಲಕ್ಷ ರೂ. ನೆರವು ಘೋಷಿಸಿದ್ದಾರೆ. ಈ ವಿಚಾರದಲ್ಲಿ ಈಗ ಚರ್ಚೆ ಬೇಡ ಎಂದು ತಿಳಿಸಿದರು.
ಕೆರೆಗಳಿಗೆ ನೀರು ಹರಿಸಲು ಆಗ್ರಹ: ಕೆ.ಆರ್.ಎಸ್ ಜಲಾಶಯದಲ್ಲಿ 124 ಟಿಎಂಸಿ ನೀರು ಸಂಗ್ರಹವಾಗಿದೆ. ಒಳಹರಿವು ಇನ್ನು ಇದೆ. ಹೀಗಾಗಿ ಅಧಿಕಾರಿಗಳು ಕಾವೇರಿ ಕೊಳ್ಳದ ಕೆರೆಗಳಿಗೆ ನೀರು ಹರಿಸಲು ಮುಂದಾಗಬೇಕು ಎಂದು ಸಚಿವರು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಮೇಕೆದಾಟು ಯೋಜನೆಗೆ ಅನುಮತಿ ಅಗತ್ಯ: ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದಿಂದ ಅಗತ್ಯ ಪ್ರಸ್ತಾವನೆ ಕಳುಹಿಸಲಾಗಿದೆ. ಆದರೆ, ಕೇಂದ್ರ ಸರ್ಕಾರದಿಂದ ಇನ್ನೂ ಎನ್ವಿರಾನ್‌ಮೆಂಟಲ್ ಕ್ಲಿಯರೆನ್ಸ್ ಸಿಕ್ಕಿಲ್ಲ. ಯೋಜನೆಗೆ ಬೇಕಾದ ಅಡಿಪಾಯವನ್ನು ಮೈತ್ರಿ ಸರ್ಕಾರ ಹಾಕಿ ಕೊಟ್ಟಿದೆ. ಇನ್ನು ಮುಂದೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.
ಈ ವೇಳೆ ಎಂ.ಎಲ್.ಸಿ ಎಸ್.ರವಿ, ಜಿಲ್ಲಾ ಪಂಚಾಯ್ತಿ ಸದಸ್ಯರಾದ ಶಿವಕುಮಾರ್ ಬಸಪ್ಪ, ತಾಪಂ ಅಧ್ಯಕ್ಷ ಧನಂಜಯ, ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ, ಎಸ್‌ಪಿ ಅನೂಪ್ ಶೆಟ್ಟಿ, ಡಿಸಿಎಫ್ ರಮೇಶ್ ಕುಮಾರ್, ಎಸಿಎಫ್ ರಾಜು, ಆರ್‌ಎಫ್ಒ ಕಿರಣ್ ಕುಮಾರ್, ತಹಶೀಲ್ದಾರ್ ಆನಂದಯ್ಯ ಮುಂತಾದವರು ಹಾಜರಿದ್ದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.