ಶ್ರೀ ಚಾಮುಂಡೇಶ್ವರಿ ಕರಗ ಮಹೋತ್ಸವ ಯಶಸ್ವಿ

ರಾತ್ರಿಯಿಡೀ ಸಿಂಗ್ರಾಬೋವಿ ದೊಡ್ಡಿ, ನಗರದ ಪ್ರಮುಖ ಬಡಾವಣೆಗಳಿಗಳಲ್ಲಿ ಕರಗ ಮೆರವಣಿಗೆ

Team Udayavani, Jul 25, 2019, 3:52 PM IST

25-JUly-35

ರಾಮನಗರದಲ್ಲಿ ಶ್ರೀ ಚಾಮುಂಡೇಶ್ವರಿ ಅಮ್ಮನವರ ಕರಗ ಮತ್ತು ಅಗ್ನಿಕೊಂಡ ಮಹೋತ್ಸವ ಯಶಸ್ವಿಯಾಗಿ ನೆರೆವೇರಿತು.

ರಾಮನಗರ: ನಗರದ ಶಕ್ತಿದೇವತೆ ಶ್ರೀ ಚಾಮುಂಡೇಶ್ವರಿ ಅಮ್ಮನವರ ಕರಗ ಮತ್ತು ಅಗ್ನಿಕೊಂಡ ಮಹೋತ್ಸವ ಯಶಸ್ವಿಯಾಗಿ ನೆರೆವೇರಿದೆ.

ಮಂಗಳವಾರ ರಾತ್ರಿ ಸಿಂಗ್ರಾಬೋವಿ ದೊಡ್ಡಿಯಿಂದ ಹೊರಟ ಕರಗ, ನಗರದ ಪ್ರಮುಖ ಬಡಾವಣೆಗಳಿಗೆ ಭೇಟಿ ಕೊಟ್ಟು ಭಕ್ತರಿಂದ ಪೂಜೆ ಸ್ವೀಕರಿಸಿ ಬುಧವಾರ ಬೆಳಗ್ಗೆ 6.15ರ ವೇಳೆಗೆ ಚಾಮುಂಡೇಶ್ವರಿ ದೇವಾಲಯದ ಮುಂಭಾಗ ನಿರ್ಮಿಸಲಾಗಿದ್ದ ಅಗ್ನಿಕೊಂಡವನ್ನು ಹಾಯ್ದು ದೇವಾಲಯ ಪ್ರವೇಶಿಸಿತು. ಕಿಕ್ಕಿರಿದು ಸೇರಿದ್ದ ಭಕ್ತ ಸಮೂಹ ಮಾಡಿದ ಅಮ್ಮನವರ ಜಯಘೋಷ ಮುಗಿಲು ಮುಟ್ಟುವಂತಿತ್ತು. ಈ ಬಾರಿಯೂ ದೇವಿ ಪ್ರಸಾದ್‌ ಸಿಂಗ್‌ ಕರಗ ಧಾರಣೆ ಮಾಡಿದ್ದರು. ಅಗ್ನಿಕೊಂಡಕ್ಕೆ ಬೇಕಾದ ಸೌಧೆ, ಕಟ್ಟಿಗೆ, ಉಪ್ಪು ಇತ್ಯಾದಿಯನ್ನು ತಾಲೂಕಾದ್ಯಂತ ಭಕ್ತರು ಟ್ರ್ಯಾಕ್ಟರ್‌ ಸೇರಿದಂತೆ ತಮಗೆ ಅನುಕೂಲವಾದ ವಾಹನಗಳಲ್ಲಿ ತಂದು ಒಪ್ಪಿಸಿದರು.

ಭಕ್ತರಿಂದ ಪೂಜೆ: ಮಂಗಳವಾರ ಇಡೀ ರಾತ್ರಿ ನಗರಾದ್ಯಂತ ವಿವಿಧ ಬಡಾವಣೆಗಳು, ಪ್ರಮುಖ ದೇವಾಲಗಳಿಗೆ ಭೇಟಿ ಕೊಟ್ಟ ಶ್ರೀ ಚಾಮುಂಡೇಶ್ವರಿ ಅಮ್ಮನವರ ಕರಗ ಭಕ್ತರಿಂದ ಪೂಜೆ ಸ್ವೀಕರಿಸಿತು. ಕೆಲವೆಡೆ ಕರಗ ಹಾದು ಹೋಗುವ ರಸ್ತೆಗಳನ್ನು ಬಗೆ ಬಗೆಯ ಹೂಗಳಿಂದ ಶೃಂಗರಿಸಲಾಗಿತ್ತು.

ಕರಗ ಮಹೋತ್ಸವದ ಅಂಗವಾಗಿ ನಗರ ವಿದ್ಯುತ್‌ ದೀಪಗಳು, ತಳಿರು, ತೋರಣಗಳಿಂದ ಶೃಂಗಾರಗೊಂಡಿತ್ತು. ಅರಳೀ ಮರ ವೃತ್ತ ಮತ್ತು ಜಿಲ್ಲಾ ಕ್ರೀಡಾಂಗಣಗಳಲ್ಲಿ ನಾಡಿನ ಖ್ಯಾತ ಸಂಗೀತಗಾರರಿಂದ ರಸಸಂಜೆ ಏರ್ಪಡಿಸಲಾಗಿತ್ತು. ಜೂನಿಯರ್‌ ಕಾಲೇಜು ಮೈದಾನದಲ್ಲಿ ಬಗೆಬಗೆಯ ಮನರಂಜನಾ ಆಟಗಳು ಏರ್ಪಡಿಸಿದ್ದರಿಂದ ಸಾವಿರಾರು ಮಂದಿ ನಾಗರಿಕರು ತಮ್ಮ ಕುಟುಂಬ ಸಮೇತ ಇಡೀ ರಾತ್ರಿ ಮನರಂಜನೆಯ ಸವಿ ಸವಿದರು. ಮಂಗಳವಾರ ಇಡೀ ರಾತ್ರಿ ಜಿಲ್ಲಾ ಕೇಂದ್ರ ನಿದ್ರೆಗೆ ಜಾರಲಿಲ್ಲ. ಬುಧವಾರ ದೇವಾಲಯದ ಆವರಣದಲ್ಲಿ ಸಿಡಿ ಉತ್ಸವ ನಡೆಯಿತು.

ನವಶಕ್ತಿಯರ ಕರಗ: ಮಂಗಳವಾರ ಶ್ರೀ ಚಾಮುಂಡೇಶ್ವರಿ ಅಮ್ಮನವರ ಕರಗದ ಜೊತೆಯಲ್ಲೇ ನಗರದ ವಿವಿಧೆಡೆ ನೆಲೆಸಿರುವ ಅಷ್ಟ ಶಕ್ತಿ ದೇವತೆಗಳ ಕರಗ ಮಹೋತ್ಸವವು ಯಶಸ್ವಿಯಾಗಿ ನೆರೆವೇರಿದವು. ಐಜೂರು ಆದಿಶಕ್ತಿ, ಬಿಸಿಲು ಮಾರಮ್ಮ ಕರಗ, ಮಗ್ಗದಕೇರಿ ಮಾರಮ್ಮ, ಭಂಡಾರಮ್ಮ ದೇವಿ, ಮುತ್ತುಮಾರಮ್ಮ ಕರಗ, ಶೆಟ್ಟಿಹಳ್ಳಿ ಆದಿಶಕ್ತಿ ಕರಗ, ಕೊಂಕಾಣಿದೊಡ್ಡಿ ಆದಿಶಕ್ತಿ ಕರಗ, ಚೌಡೇಶ್ವರಿ ಅಮ್ಮನವರ ಕರಗ ಕೂಡ ನೆರೆವೇರಿದವು. ಯಾವುದೇ ಅಹಿತಕರ ಘಟನೆಗೆ ಅವಕಾಶವಾಗದಂತೆ ಜಿಲ್ಲಾ ಪೊಲೀಸರು ಸೂಕ್ತ ಬಂದೋಬಸ್ತ್ ಏರ್ಪಡಿಸಿದ್ದರು.

ಟಾಪ್ ನ್ಯೂಸ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Explainer: HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ

Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ

9-ckm

Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.