ಸ್ವಾರ್ಥಕ್ಕಾಗಿ ಶಾಸಕರ ರಾಜೀನಾಮೆ: ಆರೋಪ
ರಾಜ್ಯದಲ್ಲಿದೆ ಹಲವು ಸಮಸ್ಯೆಗಳು • ಜನ, ಜಾನುವಾರುಗಳಿಗೆ ನೀರಿಲ್ಲ • ಬೆಳೆಗೆ ಪರಿಹಾರ ಬಿಡುಗಡೆಯಾಗಿಲ್ಲ
Team Udayavani, Jul 11, 2019, 4:56 PM IST
ರಾಮನಗರದಲ್ಲಿ ರಾಜೀನಾಮೆ ನೀಡಿದ ಶಾಸಕರು ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಕಾರ್ಯಕರ್ತರು ಪ್ರತಿಭಟನೆ ನಡೆಯಿತು.
ರಾಮನಗರ: ನಾಡು, ನುಡಿ, ಗಡಿ, ಜಲ, ಭಾಷೆ, ಕಾವೇರಿ, ರೈತರ ಪರ ರಾಜೀನಾಮೆ ನೀಡದ 14 ಶಾಸಕರು, ರಾಜಕೀಯ ಹಿತಾಸಕ್ತಿಗಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಪರ ರಾಜ್ಯದಲ್ಲಿ ತಲೆ ಮರೆಸಿಕೊಂಡು, ಕರ್ನಾಟಕಕ್ಕೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಐಜೂರು ವೃತ್ತದಲ್ಲಿ ಜಮಾಯಿಸಿದ ಕರವೇ ಸ್ವಾಭಿಮಾನಿ ಬಣದ ಕಾರ್ಯಕರ್ತರು, 14 ಶಾಸಕರ ವಿರುದ್ಧ ಘೋಷಣೆ ಕೂಗಿದರು. ವೀಳ್ಯೆದಲೆ ಜಿಗಿದು ಶಾಸಕರುಗಳ ಭಾವಚಿತ್ರಗಳಿಗೆ ಉಗಿದು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಎಲ್ಲಾ ಕ್ಷೇತ್ರಗಳಲ್ಲೂ ಸಮಸ್ಯೆಗಳಿವೆ: ಈ ವೇಳೆ ಬಣದ ರಾಜ್ಯಾಧ್ಯಕ್ಷ ಪಿ.ಕೃಷ್ಣೇಗೌಡ ಮಾತನಾಡಿ, ಇಂದು ರಾಜ್ಯದಲ್ಲಿ ಹಲವಾರು ಸಮಸ್ಯೆಗಳು ಕಾಡುತ್ತಿವೆ. ಬರ ಕಾಡುತ್ತಿದೆ. ಜನ, ಜಾನುವಾರುಗಳಿಗೆ ನೀರು ಸಿಗುತ್ತಿಲ್ಲ. ರೈತರ ಬೆಳೆಗೆ ಪರಿಹಾರದ ಹಣ ಬಿಡುಗಡೆಯಾಗಿಲ್ಲ. ಸರ್ಕಾರಿ ಶಾಲೆಗಳ ಸಮಸ್ಯೆ ಇನ್ನೊಂದೆಡೆ, ರಾಜ್ಯದ ಬಹುತೇಕ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲೂ ಸಮಸ್ಯೆಗಳು ತಾಂಡವವಾಡುತ್ತಿದೆ. ಹೀಗಿದ್ದರು. 14 ಮಂದಿ ಶಾಸಕರು ತಮ್ಮ ಕ್ಷೇತ್ರಗಳ ಮತದಾರರ ಕಷ್ಟಗಳಿಗೆ ದನಿಯಾಗದೆ ಸ್ವಂತ ರಾಜಕೀಯ ಹಿತಾಸಕ್ತಿಗಾಗಿ ರಾಜೀನಾಮೆ ನೀಡಿದ್ದಾರೆ ಎಂದು ಟೀಕಾ ಪ್ರಹಾರ ನಡೆಸಿದರು.
ಶಾಸಕರಿಗೆ ಸಾಮಾಜಿಕ ಕಳಕಳಿ ಮುಖ್ಯ: ಶಾಸಕರು ರಾಜ್ಯ ಸರ್ಕಾರದ ಆಡಳಿತದ ಕಿವಿ ಹಿಂಡದೆ ಹೀಗೆ ರಾಜಕೀಯ ಸ್ವ-ಹಿತಾಸಕ್ತಿಗೆ ತೆಗೆದುಕೊಂಡ ಕ್ರಮ ಸರಿಯಲ್ಲ. ತಮ್ಮ ಸಂಘಟನೆ ಯಾವ ಪಕ್ಷದ ಪರವಾಗಿಯೂ ಇಲ್ಲ, ಯಾವ ಪಕ್ಷದ ವಿರುದ್ಧವಾಗಿಯೂ ಇಲ್ಲ. ಶಾಸಕರಿಗೆ ಸಾಮಾಜಿಕ ಕಳಕಳಿ ಮುಖ್ಯ. ಆದರೆ, 14 ಶಾಸಕರಿಗೆ ಈ ಕಳಕಳಿ ಇಲ್ಲ, ಸಂವಿಧಾನದಕ್ಕೂ ಬೆಲೆ ಕೊಟ್ಟಿಲ್ಲ ಎಂದು ದೂರಿದರು.
ರೆಸಾರ್ಟ್ ರಾಜಕಾರಣಕ್ಕೆ ಖಂಡನೆ: ಶಾಸಕರು, ಸಚಿವರು ತಮ್ಮ ಸ್ವಂತ ಕ್ಷೇತ್ರದಲ್ಲಿ ಜನಸಮಾನ್ಯರ ಸಮಸ್ಯೆಗಳಿಗೆ ಕಿವಿಗೊಡದೆ ರೆಸಾರ್ಟ್ ರಾಜಕಾರಣ ಮಾಡುತ್ತಿರುವುದನ್ನು ತಮ್ಮ ಸಂಘಟನೆ ತೀವ್ರವಾಗಿ ಖಂಡಿಸುತ್ತದೆ. ಕ್ಷುಲ್ಲಕ ಕಾರಣಗಳಿಗೆ ರಾಜೀನಾಮೆ ಕೊಟ್ಟು ಮರು ಚುನಾವಣೆಯ ಸನ್ನಿವೇಶವನ್ನು ಸೃಷ್ಟಿಸುತ್ತಿರುವುದು ಸರಿಯಲ್ಲ. ಅವರ ಕ್ರಮದಿಂದಾಗಿ ಬೊಕ್ಕಸಕ್ಕೆ ನಷ್ಟವಾಗುತ್ತದೆ. ಜನರ ತೆರಿಗೆ ಹಣವನ್ನು ಹೀಗೆ ಪೋಲು ಮಾಡುವುದರಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗುತ್ತಿದೆ ಎಂದು ಆರೋಪಿಸಿದರು.
ಮಸಿ ಬಳಿಯುವ ಎಚ್ಚರಿಕೆ: ಮುಂಬೈನಲ್ಲಿರುವ ಶಾಸಕರು, ರಾಜ್ಯವನ್ನು ಪ್ರವೇಶಿಸಬೇಕಾದರೆ ಮೊದಲು ರಾಜ್ಯದ ಜನತೆಯ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ಅವರು ಕಂಡ ಕಂಡಲ್ಲಿ ತಮ್ಮ ಸಂಘಟನೆಯ ಕಾರ್ಯಕರ್ತರು ಮಸಿ ಬಳಿಯುವ ಎಚ್ಚರಿಕೆ ನೀಡಿದರು.
ಜನರ ಸಮಸ್ಯೆಗಳಿಗೆ ದನಿಯಾಗಿ ನಿಲ್ಲುವ ಶಾಸಕರ ಪರ ತಮ್ಮ ಸಂಘಟನೆ ಎಂದಿಗೂ ಜೊತೆ ನಿಲ್ಲುತ್ತದೆ ಎಂದು ಹೇಳಿದರು. ಸಂಘಟನೆಯ ಜಿಲ್ಲಾಧ್ಯಕ್ಷ ಶಿವುಗೌಡ ಮುಂತಾದವರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು
Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್ ಸಿಬಂದಿ ಪರಾರಿ: ದೂರು
Garlic: ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್ ಬೆಳ್ಳುಳ್ಳಿ ವಶಕ್ಕೆ
Pakistan: ಬಲೂಚ್‌ನಲ್ಲಿ ಆತ್ಮಾಹುತಿ ದಾಳಿ: 6 ಸಾವು, 25 ಮಂದಿಗೆ ಗಾಯ
YouTuber: 40 ಗಂಟೆಗಳ ಕಾಲ ಖ್ಯಾತ ಯುಟ್ಯೂಬರ್ ಅಂಕುಶ್”ಡಿಜಿಟಲ್ ಅರೆಸ್ಟ್’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.