100 ಹೆಚ್ಚುವರಿ ಹಾಸಿಗೆ ವ್ಯವಸ್ಥೆ
Team Udayavani, Apr 5, 2020, 11:49 AM IST
ರಾಮನಗರ: ತುರ್ತು ಪರಿಸ್ಥಿತಿ ಎದುರಾದರೆ ಸಮರ್ಥವಾಗಿ ನಿಭಾಯಿಸಲು ನಗರದ ಕೋವಿಡ್ 19 ರೆಫರಲ್ ಆಸ್ಪತ್ರೆಯಲ್ಲಿ ಹೆಚ್ಚುವರಿಯಾಗಿ 100 ಹಾಸಿಗೆಗಳು ಒಟ್ಟು 200 ಹಾಸಿಗೆಗಳ ವ್ಯವಸ್ಥೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಡಿಸಿಎಂ ಡಾ.ಸಿ.ಎನ್.ಅಶ್ವಥನಾರಾಯಣ ತಿಳಿಸಿದರು.
ನಗರದ ಕಂದಾಯ ಭವನದಲ್ಲಿ ಸ್ಥಾಪನೆಯಾಗಿರುವ ಕೋವಿಡ್-19 ರೆಫರಲ್ ಆಸ್ಪತ್ರೆ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿ ಸುದ್ದಿಗಾರರೊಂದಿಗೆ ಮಾತನಾಡಿದರು. ಹಾಲಿಯಿರುವ 100 ಹಾಸಿಗೆ ವ್ಯವಸ್ಥೆಯಲ್ಲಿ 40 ಹಾಸಿಗೆಗಳಿಗೆ ಆಕ್ಸಿಜನ್ ಮತ್ತು 4 ವೆಂಟಿಲೇಟರ್ ವ್ಯವಸ್ಥೆ ಕಲ್ಪಿಸಲಾಗಿದೆ. ತಾಲೂಕು ಮಟ್ಟದಲ್ಲೂ ಐಸೋ ಲೇಷನ್ ಮತ್ತು ಕ್ವಾರಂಟೈನ್ ವ್ಯವಸ್ಥೆ ಕಲ್ಪಿಸಲಾಗಿದೆ. ಜತೆಗೆ ಜಿಲ್ಲೆಯಲ್ಲಿ ಕೋವಿಡ್ 19 ಪಾಸಿಟಿವ್ ಪ್ರಕರಣ ಇಲ್ಲದಿರುವುದು ಸಮಾಧಾನದ ಸಂಗತಿ ಎಂದರು.
ಸ್ವಯಂ ಪ್ರೇರಣೆಯಿಂದ ಮುಂದೆ ಬನ್ನಿ: ದೆಹಲಿ ಜಮಾತ್‌ನಲ್ಲಿ ಭಾಗಿಯಾದವರು ಸ್ವಯಂ ಪ್ರೇರ ಣೆಯಿಂದ ಬಂದು ಪರೀ ಕ್ಷೆಗೆ ಒಳಪಡಬೇಕು ಎಂದು ಮನವಿ ಮಾಡಿದರು. ರೇಷ್ಮೆ ಗೂಡು ಮಾರುಕಟ್ಟೆ ವಹಿವಾಟು ಬೇಡ ಎಂಬ ಕೂಗು ಕೇಳಿ ಬಂದಿದ್ದು, ಈ ವಿಚಾರವನ್ನು ಸಿಎಂ ಗಮನಕ್ಕೆ ತರುವುದಾಗಿ ತಿಳಿಸಿದರು.
ಮೂರು ಸ್ಥಳಗಳಲ್ಲಿ ರೇಷ್ಮೆ ವಹಿವಾಟು: ರೇಷ್ಮೆ ಗೂಡು ಮಾರುಕಟ್ಟೆಯಲ್ಲಿ ಜನಸಾಂದ್ರತೆ ಹೆಚ್ಚಾಗದಂತೆ ತಡೆಯಲು ಮೂರು ಕಡೆ ರೇಷ್ಮೆ ಗೂಡು ಹರಾಜು ವ್ಯವಸ್ಥೆ ಕೈಗೊಳ್ಳಿ ಎಂದು ಅಶ್ವಥನಾರಾಯಣ ಅಧಿಕಾರಿಗಳಿಗೆ ಸೂಚನೆ ಕೊಟ್ಟರು. ರೇಷ್ಮೆ ಗೂಡು ಮಾರುಕಟ್ಟೆಗಳ ವಹಿವಾಟು ಆರಂಭಿಸಲಾಗಿದೆ. ಸೋಂಕು ಹರಡದಂತೆ ಎಚ್ಚರಿಕೆ ಕ್ರಮಕೈಗೊಳ್ಳಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!
By Election: ದೇವೇಗೌಡರನ್ನು 1994ರಲ್ಲಿ ಮುಖ್ಯಮಂತ್ರಿ ಮಾಡಿದ್ದೇ ನಾನು: ಸಿಎಂ ಸಿದ್ದರಾಮಯ್ಯ
Ramanagara: ಆರು ಟ್ರಾನ್ಸ್ ಫಾರ್ಮರ್ ಗಳ ಕಳವು
Congress Government: ಉಪಚುನಾವಣೆ ಬಳಿಕ ಗೃಹಲಕ್ಷ್ಮಿ ಸ್ಥಗಿತ: ಎಚ್.ಡಿ.ದೇವೇಗೌಡ ಭವಿಷ್ಯ
By Election: ಗದ್ದುಗೆ ಸೈನಿಕ ಯೋಗೇಶ್ವರ್‌ಗೋ? ನಿಖಿಲ್ ಕುಮಾರಸ್ವಾಮಿಗೋ?
MUST WATCH
ಹೊಸ ಸೇರ್ಪಡೆ
Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.