5 ಗ್ರಾಪಂ ವ್ಯಾಪ್ತಿಯ ಅಭಿವೃದ್ಧಿ ಕಾರ್ಯಕ್ಕೆ 17.56 ಕೋಟಿ
Team Udayavani, Dec 19, 2020, 6:55 PM IST
ರಾಮನಗರ: ಬಿಡದಿ ಹೋಬಳಿಯ ಐದು ಗ್ರಾಪಂಗಳಲ್ಲಿ ಅಭಿವೃದ್ಧಿ ಕಾರ್ಯಕ್ಕೆ ಒಟ್ಟು 17.56 ಕೋಟಿ ರೂ. ಬಿಡುಗಡೆಯಾಗಿದೆ, ಗ್ರಾಮಪಂಚಾಯ್ತಿಗಳಿಗೆ ಇನ್ನಷ್ಟು ಬಲ ತುಂಬಲು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಮತ ಕೊಡುವಂತೆ ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್.ಅಶ್ವಥನಾರಾಯನ ಆ ಭಾಗದ ಮತದಾರರಿಗೆ ಮನವಿ ಮಾಡಿದರು.
ಡಿ.22ರಂದು ನಡೆಯುವ ಗ್ರಾಮಪಂಚಾಯ್ತಿ ಚುನಾವಣೆ ಹಿನ್ನೆಲೆಯಲ್ಲಿ ತಾಲೂಕಿನ ಬಿಡದಿ ಹೋಬಳಿ ಬನ್ನಿಕುಪ್ಪೆ (ಬಿ) ಗ್ರಾಮಪಂಚಾಯ್ತಿ ವ್ಯಾಪ್ತಿಯ ಗ್ರಾಮಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಪರ ಪ್ರಚಾರದಲ್ಲಿಭಾಗವಹಿಸಿದ ವೇಳೆ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಪ್ರಭಾವಿ ನಾಯಕರಿದ್ದೂ ಈ ಭಾಗದಲ್ಲಿ ಕೃಷಿಗೆ ಶಾಶ್ವತ ನೀರಾವರಿ ಯೋಜನೆ ಅನುಷ್ಠಾನವಾಗಿಲ್ಲ. ಕೇವಲ ಆಶ್ವಾಸನೆಗಳಲ್ಲೇ ಕಾಲ ಕಳೆಯಲಾಗಿದೆ. ಅವರಹಿಂಬಾಲಕರ ಅಭಿವೃದ್ಧಿ ಆಯಿತೆ ವಿನಃ, ಕ್ಷೇತ್ರದ ಅಭಿವೃದ್ಧಿಯಾಗಲಿಲ್ಲ ಎಂದು ಟೀಕಾ ಪ್ರಹಾರ ನಡೆಸಿದರು. ಬೈರಮಂಗಲ ಕೆರೆ ಅಭಿವೃದ್ಧಿ, ಜಲಾಶಯದ ಎಡ ಮತ್ತು ಬಲ ದಂಡೆಗಳ ಅಭಿವೃದ್ಧಿ, ಈ ಭಾಗದ ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿಗಳ ಬಗ್ಗೆ ಸಚಿವರು ಮಾತನಾಡಿದರು.
ಡಿ.ಕೆ. ಸಹೋದರರ ವಿರುದ್ಧಕಿಡಿ: ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ (ನರೇಗಾ) ಕನಕಪುರ ತಾಲೂಕಿ ನಲ್ಲಾಗಿರುವ ಸಾಧನೆಯ ಬಗ್ಗೆ ಪ್ರತಿಕ್ರಿಯಿಸಿದ ಡಿಸಿಎಂಡಾ.ಸಿ.ಎನ್.ಅಶ್ವಥನಾರಾಯಣ, ಅಲ್ಲಿ ನರೇಗಾ ಯೋಜನೆಯಡಿ ಏನೆಲ್ಲಾ ವ್ಯತ್ಯಾಸಗಳಾಗಿವೆ ಎಂಬುದರ ಬಗ್ಗೆ ಮುಂದಿನ ದಿನಗಳಲ್ಲಿ ತಿಳಿಸುವುದಾಗಿ, ಜಿಲ್ಲೆಯಲ್ಲಿ ಇನ್ನು ಮುಂದೆ ದಬ್ಟಾಳಿಕೆ ರಾಜಕಾರಣ, ಪ್ರಜಾ ಪ್ರಭುತ್ವದ ನಿಜ ಅರ್ಥ ತಿಳಿಯಲಿದೆ ಎಂದು ಪರೋಕ್ಷವಾಗಿ ಡಿ.ಕೆ. ಸಹೋದರರ ವಿರುದ್ಧ ಗುಡುಗಿದರು.
ಗೋಷ್ಠಿಯಲ್ಲಿ ಎಂಎಲ್ಸಿಗಳಾದ ಪುಟ್ಟಣ್ಣ, ಅ.ದೇವೇಗೌಡ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಹುಲುವಾಡಿ ದೇವರಾಜು, ಮಾಗಡಿ ಅಭಿವೃದ್ಧಿಪ್ರಾಧಿಕಾರದ ಅಧ್ಯಕ್ಷ ರಂಗಧಾಮಯ್ಯ, ಮುಖಂಡಎಚ್.ಎಂ.ಕೃಷ್ಣಮೂರ್ತಿ, ಮಾಗಡಿ ಮಂಡಲ ಘಟಕದಅಧ್ಯಕ್ಷ ಧನಂಜಯ, ಪ್ರಧಾನ ಕಾರ್ಯದರ್ಶಿ ಸಂದೀಪ್, ಕಾರ್ಯದರ್ಶಿ ಲೋಕೇಶ್, ರೈತ ಮೋರ್ಚಾ ಘಟಕದ ಉಪಾಧ್ಯಕ್ಷ ನಾರಾಯಣರೆಡ್ಡಿ, ಹಿಂದುಳಿದ ವರ್ಗ ಘಟಕದ ಅಧ್ಯಕ್ಷ ಶಿವಣ್ಣ, ಬೆಂಗಳೂರು-ಬಿಡದಿ ಸ್ಮಾರ್ಟ್ ಸಿಟಿ ಅಭಿವೃದ್ಧಿ ಪ್ರಾಧಿಕಾರದ ನಿರ್ದೇಶಕ ಮುತ್ತುರಾಜ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Ramnagar; ಹೊಸವರ್ಷದಂದೇ ಎರಡು ಪ್ರತ್ಯೇಕ ಅಪಘಾ*ತ: ಮೂವರ ಸಾ*ವು
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.