Ramnagara: 17ನೇ ವಸಂತಕ್ಕೆ ಕಾಲಿರಿಸುತ್ತಿದೆ ರೇಷ್ಮೆನಾಡು


Team Udayavani, Aug 23, 2023, 11:29 AM IST

Ramnagara: 17ನೇ ವಸಂತಕ್ಕೆ ಕಾಲಿರಿಸುತ್ತಿದೆ ರೇಷ್ಮೆನಾಡು

ರಾಮನಗರ: ರಾಜ್ಯಕ್ಕೆ ನಾಲ್ಕು ಮಂದಿ ಮುಖ್ಯಮಂತ್ರಿಗಳನ್ನು ಕೊಡುಗೆಯಾಗಿ ನೀಡಿರುವ ಜಿಲ್ಲೆ ಎಂಬ ಹಿರಿಮೆಗೆ ಪಾತ್ರವಾಗಿರುವ ರಾಮನಗರ ಜಿಲ್ಲೆ ಉದಯವಾಗಿ ಬುಧವಾರಕ್ಕೆ(ಆ.23) 16 ವರ್ಷ ಪೂರ್ಣಗೊಳ್ಳಲಿದ್ದು, ಜಿಲ್ಲೆ 17ನೇ ವಸಂತಕ್ಕೆ ಕಾಲಿರಿಸಲಿದೆ. ರಾಜಧಾನಿಯ ಮಗ್ಗುಲಲ್ಲೇ ಇರುವ ಜಿಲ್ಲೆ ರಾಜಕೀಯವಾಗಿ ಸಾಕಷ್ಟು ಸದ್ದು ಮಾಡಿದೆಯಾದರೂ, ಅಭಿವೃದ್ಧಿಯಲ್ಲಿ ಕ್ರಮಿಸಬೇಕಾದ ಹಾದಿ ಇನ್ನೂ ಸಾಕಷ್ಟಿದೆ.

2007 ಆಗಸ್ಟ್‌ 23 ರಂದು ಜೆಡಿಎಸ್‌-ಬಿಜೆಪಿ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿಯಾಗಿದ್ದ ಎಚ್‌.ಡಿ.ಕುಮಾರಸ್ವಾಮಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ ಬೇರ್ಪಡಿಸಿ ರಾಮನಗರ ಜಿಲ್ಲೆಯನ್ನು ಸ್ಥಾಪಿಸಿದರು. ರಾಮನಗರವನ್ನು ಜಿಲ್ಲಾ ಕೇಂದ್ರವಾಗಿಸಿಕೊಂಡು ರಾಮನಗರ, ಚನ್ನಪಟ್ಟಣ, ಕನಕಪುರ ಮತ್ತು ಮಾಗಡಿ ತಾಲೂಕುಗಳನ್ನು ಒಳಗೊಂಡ ನೂತನ ಜಿಲ್ಲೆ  ಹೊಸದಾಗಿ ರಚನೆಯಾಗಿರುವ ಹಾರೋಹಳ್ಳಿ ತಾಲೂಕು ಸೇರಿದಂತೆ 5 ತಾಲೂಕುಗಳು, 127 ಗ್ರಾಪಂಗಳು,18 ಹೋಬಳಿಗಳನ್ನು ಒಳಗೊಂಡಿದ್ದು, 2011ರ ಜನಗಣತಿ ಪ್ರಕಾರ ಜಿಲ್ಲೆಯ 10,82,739 ಜನರನ್ನು ಒಳಗೊಂಡಿದೆ. ಇತ್ತೀಚಿಗೆ ನೀತಿ ಆಯೋಗ ಬಿಡುಗಡೆ ಮಾಡಿ ರುವ ಬಹು ಆಯಾಮದ ಬಡತನ ಸೂಚ್ಯಂಕದಲ್ಲಿ ಅತಿ ಕಡಿಮೆ ಬಡವರನ್ನು ಒಳಗೊಂಡಿರುವ ಜಿಲ್ಲೆ ಎಂಬ ಖ್ಯಾತಿ ಪಡೆದಿದೆ.

ಅಭಿವೃದ್ಧಿಯ ನಿರೀಕ್ಷೆಯಲ್ಲಿ ಜಿಲ್ಲೆ: ರಾಜ್ಯಕ್ಕೆ ಘಟಾನುಘಟಿ ರಾಜಕಾರಣಿಗಳನ್ನು ನೀಡಿರುವ ಹಿರಿಮೆ ರಾಮನಗರ ಜಿಲ್ಲೆಗೆ ಇದೆಯಾದರೂ, ಅಭಿವೃದ್ಧಿ ಕೆಲಸ ಇನ್ನೂ ಸಾಕಷ್ಟು ನಡೆಯಬೇಕು ಎಂಬುದು ಜಿಲ್ಲೆಯ ಜನತೆಯ ಆಶಯವಾಗಿದೆ. ರಾಜಧಾನಿಗೆ ಹೊಂದಿಕೊಂಡಂತೆ ಇರುವ ಜಿಲ್ಲೆ ಸಾಕಷ್ಟು ಮೂಲಸೌಕರ್ಯದಿಂದ ವಂಚಿತ ವಾಗಿದ್ದು, ರಾಮನಗರ ಜಿಲ್ಲೆಯನ್ನು ಅಭಿ ವೃದ್ಧಿ ಮಾಡುವವರು ನಾವು ಎಂದು ರಾಜಕಾರಣಿಗಳು ಬಹಿರಂಗವಾಗಿ ವೇದಿಕೆಯ ಮೇಲೆ ಕಾದಾಡಿದ್ದರಾದರೂ ಜಿಲ್ಲೆಯಲ್ಲಿ ನಡೆಯಬೇಕಿರುವ ಅಭಿವೃದ್ಧಿ ಕೆಲಸ ಸಾಕಷ್ಟು ಬಾಕಿ ಉಳಿದಿವೆ.

ಬಾಕಿ ಉಳಿದಿರುವ ಯೋಜನೆಗಳು: ರಾಮನಗರ ಜಿಲ್ಲೆ ಪ್ರಾರಂಭವಾಗಿ 16 ವರ್ಷಗಳು ಪೂರ್ಣ ಗೊಂಡಿವೆಯಾದರೂ, ಕೆಲ ಅಭಿವೃದ್ಧಿ ಕಾರ್ಯಗಳು ಇನ್ನೂ ಬಾಕಿ ಉಳಿದಿವೆ. ರಾಜೀವ್‌ಗಾಂಧಿ ಆರೋಗ್ಯ ವಿವಿ ಹಗ್ಗ ಜಗ್ಗಾಟದಲ್ಲೇ ಕಾಲದೂಡುತ್ತಿದೆ. ಜಿಲ್ಲೆಯ ಮಹತ್ವಾಕಾಂಕ್ಷಿ ನೀರಾವರಿ ಯೋಜನೆ ಎನಿಸಿರುವ ಮೇಕೆದಾಟು ಯೋಜನೆ ಇನ್ನೂ ಭ್ರೂಣಾವಸ್ಥೆಯಲ್ಲೇ ನರಳುತ್ತಿದೆ. ರೇಷ್ಮೆ ಕೃಷಿಯಲ್ಲಿ ರಾಜ್ಯದಲ್ಲೇ ಎರಡನೇ ಸ್ಥಾನದಲ್ಲಿರುವ ಜಿಲ್ಲೆಯಲ್ಲಿ ಹೈಟೆಕ್‌ ರೇಷ್ಮೆ ಮಾರುಕಟ್ಟೆ ಇನ್ನೂ ಮೇಲೆದ್ದಿಲ್ಲ. 2018ರ ಬಜೆಟ್‌ನಲ್ಲಿ ಘೋಷಣೆಯಾದ ಮಾವು ಸಂಸ್ಕರಣಾ ಘಟಕ ತಳಪಾಯದ ಮಟ್ಟದಲ್ಲೇ ಉಳಿದಿದೆ.

ಜಿಲ್ಲೆಯ ರೈತರಿಗೆ ಸಕಾಲದಲ್ಲಿ ರಸಗೊಬ್ಬರ ದೊರೆಯುವಂತಾಗಬೇಕಿದ್ದು ಇದ ಕ್ಕಾಗಿ ರಾಮನಗರ ಜಿಲ್ಲೆಯಲ್ಲಿ ವೇರ್‌ಹೌಸ್‌ ನಿರ್ಮಾಣ ಇನ್ನೂ ಆಗಿಲ್ಲ. ಚನ್ನಪಟ್ಟಣ ಬೊಂಬೆ ಉದ್ಯಮಕ್ಕೆ ಉತ್ತೇಜನ ನೀಡುವ ಕೆಲಸ ನಡೆದಿಲ್ಲ, ಜಿಲ್ಲೆಯ ಪಟ್ಟಣ ಪ್ರದೇಶ ಗಳಿಗೆ ಬೇಕಿರುವ ಮೂಲಸೌಕರ್ಯ ಕಾಮಗಾರಿಗಳು, ಯುಜಿಡಿ ಸೌಕರ್ಯ ಇಲ್ಲ ವಾಗಿದೆ. ರಾಮನಗರ, ಮಾಗಡಿ ಪಟ್ಟಣಗಳಿಗೆ ಸಮರ್ಪಕ ಕುಡಿಯುವ ನೀರಿನ ಸೌಲಭ್ಯ, ಎಲ್ಲಾ ಪಟ್ಟಣಗಳಲ್ಲಿ ರಸ್ತೆ ಮತ್ತು ಚರಂಡಿಗಳ ಕೊರತೆ ಎದ್ದು ಕಾಣುತ್ತಿದೆ.

ಜಿಲ್ಲಾ ಕೇಂದ್ರದಲ್ಲಿ ನಾಲ್ಕು ಬೃಹತ್‌ ಕಟ್ಟಡಗಳು ತಲೆ ಎತ್ತಿವೆಯಾದರೂ ಸಾಕಷ್ಟು ಕಚೇರಿಗಳು ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿವೆ. ಹಿಂದೆ ಜಿಲ್ಲಾಧಿಕಾರಿ ಕಚೇರಿಯಾಗಿದ್ದ ಕಂದಾಯ ಭವನ ಭೂತಬಂಗಲೆಯಾಗಿ ಉಳಿದಿದೆ. ಕಂದಾಯ ಭವನವನ್ನು ಸುಸ್ಥಿತಿಗೊಳಿಸಿ ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿರುವ ಕಚೇರಿಗಳನ್ನು ಇಲ್ಲಿಗೆ  ವರ್ಗಾವಣೆ ಮಾಡುವ ಕೆಲಸ ಇನ್ನೂ ನಡೆಯದಿದೆ.

ಶ್ರೀಸಾಮಾನ್ಯರಿಗೆ ಅನುಕೂಲ:

ರಾಮನಗರ ಜಿಲ್ಲೆ ಪ್ರಾರಂಭದಲ್ಲಿ ಬೆಂಗಳೂರು ಬ್ರಾಂಡ್‌ನಿಂದ ನಮ್ಮ ಭಾಗದ ತಾಲೂಕುಗಳು ಹೊರ ಬರುತ್ತಿವೆ. ಎಂಬ ಅಪಸ್ವರಗಳು ಕೇಳಿಬಂದಿತಾದರೂ, ರಾಮನಗರ ಜಿಲ್ಲಾ ಕೇಂದ್ರವಾಗಿ ಘೋಷಣೆಯಾದ ಬಳಿಕ ಜನರ ಸಮೀಪಕ್ಕೆ ಜಿಲ್ಲಾಡಳಿತ ಬಂದಂತಾಗಿದೆ. ಜಿಲ್ಲಾ ಮಟ್ಟದ ಕಚೇರಿಗಳ ಕೆಲಸಕ್ಕಾಗಿ ಜನತೆ ಬೆಂಗಳೂರಿನ ವರೆಗೆ ಅಲೆದಾಡುವುದು ತಪ್ಪಿದಂತಾಗಿದೆ. ನ್ಯಾಯಾಲಯ, ಜಿಲ್ಲಾಧಿಕಾರಿ ಕಚೇರಿ ಸೇರಿದಂತೆ ವಿವಿಧ ಕೆಲಸ ಕಾರ್ಯಗಳಿಗೆ ತ್ವರಿತವಾಗಿ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಸಂಪರ್ಕಿಸಲು ಜನತೆಗೆ ಸಹಕಾರಿಯಾಗಿದೆ.

ಡಿಸಿಎಂ ತವರು ಜಿಲ್ಲೆ :

ರಾಜ್ಯ ಸರ್ಕಾರದ ಪ್ರಭಾವಿ ಸಚಿವರಾಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ತವರು ಜಿಲ್ಲೆ ಯಾಗಿರುವ ರಾಮನಗರ ಜಿಲ್ಲೆ 16 ವರ್ಷ ಪೂರೈಸಿದ್ದು, ಉಪ ಮುಖ್ಯಮಂತ್ರಿಗಳು ಜಿಲ್ಲೆಯ ಅಭಿವೃದ್ಧಿ ಹೆಚ್ಚಿನ ಕೊಡುಗೆ ನೀಡುವರೇ ಎಂಬ ನಿರೀಕ್ಷೆ ಜನತೆಯದ್ದಾಗಿದೆ. ಜಿಲ್ಲೆಯ ಕೃಷಿ, ಕೈಗಾರಿಕೆ, ಶಿಕ್ಷಣ, ಪ್ರವಾಸೋದ್ಯಮ ಹೀಗೆ ಎಲ್ಲಾ ಕ್ಷೇತ್ರಗಳ ಅಭಿವೃದ್ಧಿಗೆ ಸರ್ಕಾರ ವಿಶೇಷ ಯೋಜನೆಯನ್ನು ನೀಡುವ ಜೊತೆಗೆ ರಾಮನಗರದ ಸಮಗ್ರ ಅಭಿವೃದ್ಧಿಗೆ ಶ್ರಮಿಸಬೇಕಿದೆ.

ಆಗಬೇಕಿರುವುದೇನು..?

  • ಮೇಕೆದಾಟು ಅಣೇಕಟ್ಟೆ ಯೋಜನೆ ಅನುಷ್ಠಾನಗೊಳ್ಳಬೇಕು
  • ರಾಜೀವ್‌ಗಾಂಧಿ ಆರೋಗ್ಯ ವಿವಿ ನಿರ್ಮಾಣಗೊಳ್ಳಬೇಕು, ವಿವಿ ಕ್ಯಾಂಪಸ್‌ನಲ್ಲಿ ಮೆಡಿಕಲ್‌ ಕಾಲೇಜು ಸ್ಥಾಪನೆಯಾಗಬೇಕು.
  • ದಶಪಥ ರಸ್ತೆಯಿಂದ ಸ್ಥಳೀಯ ವರ್ತಕರು, ಸ್ಥಳೀಯ ಉತ್ಪನ್ನಗಳಿಗೆ ಮಾರುಕಟ್ಟೆ ಇಲ್ಲ ವಾಗಿದ್ದು, ಜನರ ಬದುಕು ಕಟ್ಟಿಕೊಡುವ ಕೆಲಸವಾಗಬೇಕು.
  • ರಸಗೊಬ್ಬರ ದಾಸ್ತಾನು ಮಾಡಲು ಜಿಲ್ಲೆಗೆ ಪ್ರತ್ಯೇಕ ಗೋದಾಮು ನಿರ್ಮಾಣವಾಗಬೇಕು.
  • ಮಾವು ಸಂಸ್ಕರಣಾ ಘಟಕ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿದ್ದು, ಕೂಡಲೇ ಮಾವು ಸಂಸ್ಕರಣಾ ಘಟಕ ಸ್ಥಾಪನೆಯಾಗಬೇಕು.
  • ಜಿಲ್ಲಾ ಕೇಂದ್ರ ರಾಮನಗರ ಸೇರಿದಂತೆ, ಚನ್ನಪಟ್ಟಣ, ಮಾಗಡಿ, ಕನಕಪುರ, ಬಿಡದಿ, ಹಾರೋಹಳ್ಳಿ ಪಟ್ಟಣಗಳಿಗೆ ಯುಜಿಡಿ, ನಗರ ವ್ಯಾಪ್ತಿಯಲ್ಲಿ ರಸ್ತೆ, ಚರಂಡಿ ಮೊದಲಾದ ಮೂಲಸೌಕರ್ಯ ಕಲ್ಪಿಸಬೇಕು.
  • ಹೈಟೆಕ್‌ ರೇಷ್ಮೆ ಮಾರುಕಟ್ಟೆ ನಿರ್ಮಾಣ ಕಾರ್ಯಕ್ಕೆ ವೇಗ ನೀಡಬೇಕು.

ಟಾಪ್ ನ್ಯೂಸ್

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

10-ramanagara

Ramanagara: ಕಾಡಾನೆ ದಾಳಿಗೆ ರೈತ ಬಲಿ

DOG (2)

Ramanagara:ನಾಯಿ ಜತೆ ಮೂವರ ಅನೈಸರ್ಗಿಕ ಲೈಂಗಿ*ಕ ಚಟುವಟಿಕೆ: ಓರ್ವ ಸೆರೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

Toll: ವರ್ಷದಲ್ಲೇ 438 ಕೋ.ರೂ. ಟೋಲ್‌ ಶುಲ್ಕ ಸಂಗ್ರಹ

Toll: ವರ್ಷದಲ್ಲೇ 438 ಕೋ.ರೂ. ಟೋಲ್‌ ಶುಲ್ಕ ಸಂಗ್ರಹ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

5

Health: ಶೀಘ್ರ ಕ್ಯಾನ್ಸರ್‌ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

4

Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.