ಲೋಕ್‌ ಅದಾಲತ್‌ನಲ್ಲಿ 1,836 ಪ್ರಕರಣ ಇತ್ಯರ್ಥ

Team Udayavani, Jul 15, 2019, 12:28 PM IST

rn-tdy-1..

ರಾಮನಗರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ರಾಷ್ಟ್ರೀಯ ಲೋಕ ಅದಾಲತ್‌ ನಡೆಯಿತು.

ರಾಮನಗರ: ಜಿಲ್ಲೆಯ 4 ತಾಲೂಕುಗಳ ನ್ಯಾಯಾಲಯಗಳಲ್ಲಿ ವಿಚಾರಣೆ ಹಂತದಲ್ಲಿದ್ದ 4133 ಪ್ರಕರಣಗಳು ಲೋಕ್‌ ಅದಾಲತ್‌ ಮುಂದೆ ಬಂದಿದ್ದು ಈ ಪೈಕಿ 1607 ಪ್ರಕರಣಗಳನ್ನು ಅದಾಲತ್‌ನಲ್ಲಿ ಇತ್ಯರ್ಥಪಡಿಸಲಾಗಿದೆ ಎಂದು ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಡಿ.ವೆಂಕಟಪ್ಪ ತಿಳಿಸಿದರು.

ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಭಾಗವಹಿಸಿ ಮಾತನಾಡಿದರು.

ನ್ಯಾಯಾಲಯಗಳಲ್ಲಿರುವ ಪ್ರಕರಣಗಳನ್ನು ಶೀಘ್ರ ಇತ್ಯರ್ಥ ಪಡಿಸುವುದು, ನ್ಯಾಯಾಲಯಗಳ ಮೇಲಿನ ಒತ್ತಡ ಕಡಿಮೆ ಮಾಡುವ ಉದ್ದೇಶದೊಂದಿಗೆ ರಾಷ್ಟ್ರೀಯ ಲೋಕ ಅದಾಲತ್‌ ಹಮ್ಮಿಕೊಳ್ಳಲಾಗುತ್ತಿದೆ. ವ್ಯಾಜ್ಯ ಪೂರ್ವ 2191 ಪ್ರಕರಣಗಳ ಪೈಕಿ 229 ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗಿದೆ ಎಂದು ಹೇಳಿದರು.

538 ರಾಜೀ ಆಗಬಲ್ಲ ಕ್ರಿಮಿನಲ್ ಅಪರಾಧಿಕ ಪ್ರಕರಣಗಳು, 90 ಮೋಟಾರ್‌ ವಾಹನ ಕಾಯ್ದೆ ಪ್ರಕರಣ, 1 ಕಾರ್ಮಿಕ ವಾದ ಪ್ರಕರಣ, 6 ವೈವಾಹಿಕ, ಕೌಟುಂಬಿಕ ದೌರ್ಜನ್ಯ ಪ್ರಕರಣ, 131 ಚೆಕ್‌ ಬೌನ್ಸ್‌ ಪ್ರಕರಣ, ಇತರೆ 160 ಸಿವಿಲ್, 688 ವಿವಿಧ ರೀತಿಯ ಅಪರಾಧ ವ್ಯಾಜ್ಯ ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳು ರಾಜಿಯಾಗಿವೆ. ಒಟ್ಟಾರೆ 1,836 ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗಿದೆ ಎಂದರು.

4 ಕೋಟಿ ರೂ.ಗೂ ಹೆಚ್ಚು ಪರಿಹಾರ: ಹಣಕಾಸು ಸಂಬಂಧ ವ್ಯಾಜ್ಯ ಪ್ರಕರಣಗಳಲ್ಲಿ 3.43 ಲಕ್ಷ, ವ್ಯಾಜ್ಯ ಪೂರ್ವ ಪ್ರಕರಣಗಳಲ್ಲಿ 96 ಲಕ್ಷ ಮೊತ್ತದ ವಾದಗಳನ್ನು ಇತ್ಯರ್ಥ ಪಡಿಸಲಾಗಿದೆ. ಮೋಟಾರು ವಾಹನ ಕಾಯ್ದೆಯಡಿ 90 ಪ್ರಕರಣ ಇತ್ಯರ್ಥ ಪಡಿಸಿದ್ದು, ಆಯಾ ಸಂತ್ರಸ್ತರಿಗೆ ಒಟ್ಟು 2.63 ಕೋಟಿ ರೂ. ಪರಿಹಾರ ಮೊತ್ತ ದೊರೆತಿದೆ. 131 ಚೆಕ್‌ ಬೌನ್ಸ್‌ ಪ್ರಕರಣಗಳಲ್ಲಿ 36.72 ಲಕ್ಷ ರೂ ಪರಿಹಾರ, ಇತರೆ ಸಿವಿಲ್ ಪ್ರಕರಣಗಳಲ್ಲಿ 1.69 ಲಕ್ಷ ರೂ. 688 ವಿವಿಧ ಅಪರಾಧ ಪ್ರಕರಣಗಳಲ್ಲಿ 27.50 ಲಕ್ಷ ರೂ. ದಂಡ ವಸೂಲಿ ನಿರ್ಧಾರದೊಂದಿಗೆ ಪ್ರಕರಣಗಳು ಇತ್ಯರ್ಥವಾಗಿದೆ. ಇವುಗಳ ಒಟ್ಟು ಮೌಲ್ಯ ಸುಮಾರು 4.40 ಕೋಟಿ ಎಂದು ತಿಳಿಸಿದ್ದಾರೆ.

ಬಾಂಧವ್ಯ ವೃದ್ಧಿ:ರಾಷ್ಟ್ರೀಯ ಲೋಕ್‌ ಅದಾಲತ್‌ ಮೂಲಕ ವ್ಯಾಜ್ಯಗಳು ಶೀಘ್ರ ಇತ್ಯರ್ಥವಾಗುವುದಲ್ಲದೆ, ವ್ಯಾಜ್ಯದಲಿರುವ ನಾಗರೀಕರ ನಡುವೆ ಉತ್ತಮ ಬಾಂಧವನ್ನು ವೃದ್ದಿಸಲು ಸಹಕಾರಿಯಾಗುತ್ತಿದೆ ಎಂದು ಮಾಹಿತಿ ನೀಡಿದರು.

ಲೋಕ್‌ ಅದಾಲತ್‌ನಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಂ.ಜಿ.ಉಮಾ, ಒಂದನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾದ ಎಚ್.ಎಸ್‌. ಮರುಳಸಿದ್ದಾರಾಧ್ಯ, ಮೂರನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾದ ಸಿದ್ಧಲಿಂಗಪ್ರಭು, ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ, ಸಿಜೆಎಂ ಎನ್‌.ಎಸ್‌.ಕುಲಕರ್ಣಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಡಿ.ವೆಂಕಪ್ಪ, ದಿನೇಶ್‌ ಇದ್ದರು.

ಟಾಪ್ ನ್ಯೂಸ್

Upendra’s UI Movie Review

UI Movie Review: ಫೋಕಸ್‌ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

German: ಮಾರುಕಟ್ಟೆಗೆ ನುಗ್ಗಿಸಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

tobacc

Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

10-ramanagara

Ramanagara: ಕಾಡಾನೆ ದಾಳಿಗೆ ರೈತ ಬಲಿ

DOG (2)

Ramanagara:ನಾಯಿ ಜತೆ ಮೂವರ ಅನೈಸರ್ಗಿಕ ಲೈಂಗಿ*ಕ ಚಟುವಟಿಕೆ: ಓರ್ವ ಸೆರೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

Toll: ವರ್ಷದಲ್ಲೇ 438 ಕೋ.ರೂ. ಟೋಲ್‌ ಶುಲ್ಕ ಸಂಗ್ರಹ

Toll: ವರ್ಷದಲ್ಲೇ 438 ಕೋ.ರೂ. ಟೋಲ್‌ ಶುಲ್ಕ ಸಂಗ್ರಹ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Upendra’s UI Movie Review

UI Movie Review: ಫೋಕಸ್‌ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

German: ಮಾರುಕಟ್ಟೆಗೆ ನುಗ್ಗಿಸಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.