ಚನ್ನಪಟ್ಟಣದಲ್ಲಿ 2 ಲಕ್ಷ ರೂ.ಗಿಂತಅಧಿಕ ಪ್ರಮಾಣದ ದಂಡ ವಸೂಲಿ
Team Udayavani, Oct 12, 2019, 4:45 PM IST
ಚನ್ನಪಟ್ಟಣ: ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಮಾರಾಟವನ್ನು ತಡೆಯುವ ನಿಟ್ಟಿನಲ್ಲಿ ಇಲ್ಲಿನ ನಗರಸಭೆ ಕ್ರಮ ಕೈಗೊಳ್ಳುತ್ತಿದ್ದರೂ ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ.
2016ರಿಂದಲೂ ನಿರಂತರವಾಗಿ ನಿಷೇಧಿತ ಪ್ಲಾಸ್ಟಿಕ್ ಗಳನ್ನು ವಶಪಡಿಸಿಕೊಳ್ಳುವುದು, ದಂಡ ವಿಧಿಸುವುದು, ವ್ಯಾಪಾರಿಗಳಿಗೆ ಮಾರಾಟ ಮಾಡದಂತೆ, ಗ್ರಾಹಕರಿಗೆ ಬಳಸದಂತೆ ಜಾಗೃತಿ ಮೂಡಿಸುವ ಕೆಲಸವಾಗುತ್ತಿದೆ ಆದರೆ, ಪರಿಣಾಮಕಾರಿಯಾಗಿಲ್ಲ. ಅಧಿಕಾರಿಗಳ ಮಾಹಿತಿ ಪ್ರಕಾರ ಇದುವರೆಗೆ ಪಟ್ಟಣದಲ್ಲಿ ಸುಮಾರು 5-6 ಟನ್ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಅದೆಲ್ಲವನ್ನೂ ಮತ್ತೆ ಬಳಕೆ ಮಾಡಲು ಆಗದಂತೆ ಕತ್ತರಿಸಿ, ಸಿಮೆಂಟ್ ತಯಾರಿಕಾ ಕಾರ್ಖಾನೆಗೆ ರವಾನಿಸಲಾಗಿದೆ. ಅಧಿಕಾರಿಗಳು ಪ್ಲಾಸ್ಟಿಕ್ ದಾಳಿ ನಡೆಸಿದಾಗ ಸಂಗ್ರಹಿಸಿದ ಮೊತ್ತವೇ 2 ಲಕ್ಷ ರೂ.ಗಿಂತ ಅಧಿಕವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜಾಥಾ, ಬೀದಿನಾಟಕ: ಪ್ಲಾಸ್ಟಿಕ್ ಬಳಕೆ ದುಷ್ಟಪರಿಣಾಮ ಕುರಿತು ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಭಿತ್ತಿಫಲಕಗಳ ಪ್ರದರ್ಶನ, ರಸ್ತೆಗಳಲ್ಲಿ ಮೆರವಣಿಗೆ, ಜಾಥಾ, ಕಾರ್ಯಕ್ರಮವನ್ನೂ ಮಾಡಲಾಗಿದೆ. ಜತೆಗೆ ಎನ್‌ಜಿಒಗಳ ಮೂಲಕ ಬೀದಿನಾಟಕ, ಅಣಕು ಶವಯಾತ್ರೆ ಪ್ರದರ್ಶನ, ಪೌರಕಾರ್ಮಿಕರಿಂದಲೂ ಜಾಗೃತಿ ಮೂಡಿಸಲಾಗುತ್ತಿದೆ.
ಆಟೋ ಪ್ರಚಾರದ ಮೂಲಕ ಕಡ್ಡಾಯ ಬಟ್ಟೆ ಬ್ಯಾಗ್ ಬಳಕೆಗೆ ತಿಳಿಸಲಾಗಿದೆ. ಪಟ್ಟಣಾದ್ಯಂತ ನಿತ್ಯ ಜಾಗೃತಿ ಮೂಡಿಸುತ್ತಿರುವುದರಿಂದ ಪ್ಲಾಸ್ಟಿಕ್ ಬ್ಯಾಗ್ ಬಳಕೆ ಸಾಕಷ್ಟು ನಿಯಂತ್ರಣಕ್ಕೆ ಬಂದಿದೆ, ಗ್ರಾಮೀಣ ಮಂದಿ ಬಟ್ಟೆಯ ಬ್ಯಾಗ್ ಬಳಕೆ ಮಾಡುತ್ತಿಲ್ಲವೆಂದು ಅಧಿಕಾರಿಗಳ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Ramnagar; ಹೊಸವರ್ಷದಂದೇ ಎರಡು ಪ್ರತ್ಯೇಕ ಅಪಘಾ*ತ: ಮೂವರ ಸಾ*ವು
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್
540 ಅಡಿ ಆಳದ ಬೋರ್ವೆಲ್ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.