ಹೈಟೆಕ್ ಮಾರುಕಟ್ಟೆಗೆ ಕ್ರಮ: ಶಾಸಕ
ಎಪಿಎಂಸಿ ಅಧ್ಯಕ್ಷ-ನಿರ್ದೇಶಕರ ಸಭೆಯಲ್ಲಿ ಶಾಸಕರ ಭರವಸೆ
Team Udayavani, Apr 30, 2020, 5:36 PM IST
ಮಾಗಡಿ: ಕನಕಪುರದ ಮಾರುಕಟ್ಟೆ ಮಾದರಿಯಲ್ಲಿ ಮಾಗಡಿಯಲ್ಲೂ ಸುಂದರ ಹಾಗೂ ಸುಸಜ್ಜಿತ ಹೈಟೆಕ್ ಮಾರುಕಟ್ಟೆ ನಿರ್ಮಿಸಲು ಅಗತ್ಯ ಕ್ರಮಕೈಗೊಳ್ಳಲಾಗಿದೆ ಎಂದು ಶಾಸಕ ಎ.ಮಂಜುನಾಥ್ ತಿಳಿಸಿದರು. ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಏರ್ಪಡಿಸಿದ್ದ ಸದಸ್ಯರ, ಎಪಿಎಂಸಿ ಅಧ್ಯಕ್ಷ ಹಾಗೂ ನಿರ್ದೇಶಕರ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇಂದಿರಾ ಕ್ಯಾಂಟೀನ್ ಹಿಂದಿನ ಹೈಟೆಕ್ ಮಾರುಕಟ್ಟೆ ಕಟ್ಟಡ ನಿರ್ಮಿಸಲು ಕಾಮಗಾರಿ ಆರಂಭಿಸಲಾಗಿದೆ. ಅದಕ್ಕಾಗಿ ಸುಮಾರು 2.75 ಕೋಟಿ ಮೀಸಲಿಟ್ಟಿದ್ದೇವೆ. ಹೈಟೆಕ್ ಸುಮಾರು 9 ಕೋಟಿ ರೂ. ಅಂದಾಜಿಸ ಲಾಗಿದೆ. ಅದಕ್ಕಾಗಿ ಸಂಸದ, ಎಂಎಲ್‌ಸಿ, ಶಾಸಕರ ಅನುದಾನ ಕ್ರೋಢಿಕರಿಸಲು ಚಿಂತಿಸ ಲಾಗಿದೆ ಎಂದರು.
ಲಾಕ್‌ಡೌನ್ ಮುಗಿದ ನಂತರ ಪುರಸಭೆ ಅಂಗಡಿ ಮಳಿಗೆ ಬಹಿರಂಗ ಹರಾಜು ಪ್ರಕ್ರಿಯೆ ಹಮ್ಮಿಕೊಳ್ಳಲಾಗುವುದು ಎಂದು ಮುಖ್ಯಾಧಿಕಾರಿ ಮಹೇಶ್ ತಿಳಿಸಿದರು. ಪುರಸಭೆ ಸದಸ್ಯ ರಂಗಹನುಮಯ್ಯ ಮಾತನಾಡಿದರು. ಜಿಲ್ಲಾ ಎಪಿಎಂಸಿ ಅಧ್ಯಕ್ಷ ದೊರೆಸ್ವಾಮಿ, ಪಿಎಸೈ ವೆಂಕಟೇಶ್, ಪುರಸಭೆ ಸದಸ್ಯ ಕೆ.ವಿ.ಬಾಲರಘು, ಎಂ.ಎನ್.ಮಂಜುನಾಥ್, ಕಾಂತರಾಜು, ರಿಯಾಜ್, ಅನಿಲ್‌ಕುಮಾರ್, ರಘು, ಶಿವಕುಮಾರ್, ಅಶ್ವಥ್, ನಾಗರತ್ನಮ್ಮ, ರಮೇಶ್, ರೇಖಾ, ಜಯಕುಮಾರ್, ಎಪಿಎಂಸಿ ನಿರ್ದೇಶಕ ಮಾರೇಗೌಡ, ಕೆ.ಟಿ.ಮಂಜುನಾಥ್, ರೂಪೇಶ್, ನಾಗರಾಜು ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ಮಗನಿಗಾಗಿ ಎಚ್‌ಡಿಕೆ ನಿಮ್ಮ ಊರು ಹುಡುಕಿ ಬರುತ್ತಾರಷ್ಟೇ: ಡಿ.ಕೆ.ಸುರೇಶ್
Police FIR: ಎಫ್ಐಆರ್ ದಾಖಲಿಸಿ ನನ್ನ ವಿರುದ್ಧ ಸರ್ಕಾರದಿಂದ ದ್ವೇಷ ಸಾಧನೆ: ಎಚ್‌ಡಿಕೆ
By Election: ಚನ್ನಪಟ್ಟಣದಲ್ಲಿ ಧರ್ಮ-ಅಧರ್ಮದ ನಡುವೆ ಚುನಾವಣೆ: ಎಚ್.ಡಿ.ಕುಮಾರಸ್ವಾಮಿ
By Poll: ರಣರಂಗವೂ ಇಲ್ಲ, ಚದುರಂಗವೂ ಇಲ್ಲ, ಜನರೇ ಪಟ್ಟಿ ಮಾಡಿ, ಅಂಕ ನೀಡ್ತಾರೆ: ಡಿಕೆಶಿ
By Election: ಮಾತೃ ಹೃದಯಗಳಲ್ಲಿ ಕಣ್ಣೀರು ಸಹಜ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ
MUST WATCH
ಹೊಸ ಸೇರ್ಪಡೆ
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.