ಸಂಚಾರ ನಿಯಮ ಉಲ್ಲಂಘಿಸಿದರೆ ಕ್ರಮ
ಮೊದಲ ಬಾರಿ ನಿಯಮ ಉಲ್ಲಂಘನೆಗೆ 500 ರೂ. ದಂಡ • ಮುಂದುವರಿಸಿದರೆ ಪರವಾನಗಿ ರದ್ದು
Team Udayavani, Aug 14, 2019, 4:16 PM IST
ಚನ್ನಪಟ್ಟಣದಲ್ಲಿರುವ ಬೆಂಗಳೂರು- ಬಂಟ್ವಾಳ ರಾಷ್ಟ್ರೀಯ ಹೆದ್ದಾರಿ.
ಚನ್ನಪಟ್ಟಣ: ಸಂಚಾರ ನಿಯಮಗಳ ಉಲ್ಲಂಘನೆಗೆ ಕಡಿವಾಣ ಹಾಕಲು ಮುಂದಾಗಿರುವ ಸಂಚಾರ ಠಾಣೆ ಪೊಲೀಸರು, ಆ.15ರಿಂದ ವಾಹನ ಸವಾರರು ಸಂಚಾರ ನಿಯಮಗಳ ಪಾಲನೆ ಮಾಡುವ ಸಂಬಂಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.
ನಿಯಮಗಳ ಉಲ್ಲಂಘನೆಯಿಂದಾಗಿ ಬೆಂಗಳೂರು- ಬಂಟ್ವಾಳ ರಾಷ್ಟ್ರೀಯ ಹೆದ್ದಾರಿ 275 ಸೇರಿದಂತೆ ರಾಜ್ಯ ಹೆದ್ದಾರಿಗಳಲ್ಲಿ ಸಾಕಷ್ಟು ಅಪಘಾತಗಳು ಪ್ರತಿದಿನ ಸಂಭವಿಸುತ್ತಿದ್ದು, ಸಾವು ನೋವು ಹೆಚ್ಚಾಗುತ್ತಿವೆ. ಬಹುತೇಕ ಅಪಘಾತಗಳಲ್ಲಿ ಸಂಚಾರ ನಿಯಮ ಉಲ್ಲಂಘನೆ ಸ್ಪಷ್ಟವಾಗಿ ಗೋಚರವಾಗುತ್ತಿದೆ. ಎಲ್ಲ ಬಗೆಯ ವಾಹನ ಸವಾರರಿಗೂ ಈಗಾಗಲೇ ತಿಳಿವಳಿಕೆ ನೀಡಿ, ಕಡ್ಡಾಯ ಅನುಷ್ಠಾನಕ್ಕೆ ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ.
ವಾಹನ ಸವಾರರಿಗೆ ಎಚ್ಚರಿಕೆ: ಹೆಲ್ಮೆಟ್, ಸೀಟ್ ಬೆಲ್r ಧರಿಸದೇ ಚಾಲನೆ, ಮಿತಿಮೀರಿದ ವೇಗ, ಅಡ್ಡಾದಿಡ್ಡಿ ಚಾಲನೆ, ಸಿಗ್ನಲ್ಜಂಪ್, ಎಲ್ಲೆಂದರಲ್ಲಿ ವಾಹನ ನಿಲುಗಡೆ, ದಾಖಲೆಗಳಿಲ್ಲದೇ ವಾಹನ ಚಾಲನೆ, ವಾಹನಗಳಿಗೆ ವಿಮೆ ಇಲ್ಲದೆ ಚಾಲನೆ ಹೀಗೆ ಎಲ್ಲ ಬಗೆಯ ನಿಯಮ ಉಲ್ಲಂಘನೆ ಮಾಡಿದವರಿಗೆ ದಂಡ ವಿಧಿಸುವ ಜತೆಗೆ, ಇನ್ನೊಮ್ಮೆ ಉಲ್ಲಂಘನೆ ಮಾಡಿದರೆ ಪರವಾನಗಿ ರದ್ದುಪಡಿಸುವ ಎಚ್ಚರಿಕೆ ನೀಡಲು ಪೊಲೀಸರು ಮುಂದಾಗಲಿದ್ದಾರೆ.
ಸಿಸಿ ಕ್ಯಾಮರಾಗಳ ಅಳವಡಿಕೆ: ಎಲ್ಲಾ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವ ಹಿನ್ನಲೆಯಲ್ಲಿ ಬೆಂಗಳೂರು-ಮೈಸೂರು ಹೆದ್ದಾರಿಯ ಪಟ್ಟಣ ವ್ಯಾಪ್ತಿಯಲ್ಲಿ ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಪ್ರಮುಖ ಸಿಗ್ನಲ್ಗಳಲ್ಲಿ ಸಿಸಿ ಟಿವಿ ಕಣ್ಗಾವಲು ವಾಹನ ಸವಾರರ ನಿಯಮ ಉಲ್ಲಂಘನೆ ಸೆರೆ ಹಿಡಿಯಲು ಸಜ್ಜಾಗಿವೆ. ಕೆಂಗಲ್, ಶೇರೂ ಹೋಟೆಲ್, ಸಾತನೂರು ವೃತ್ತ, ಪೊಲೀಸ್ ಠಾಣೆ ವೃತ್ತ, 8ನೇ ಕ್ರಾಸ್‌ಗಳಲ್ಲಿ ಹೈ ರೆಸಲ್ಯೂಷನ್ ಕ್ಯಾಮರಾಗಳು ಈಗಾಗಲೇ ಕಾರ್ಯನಿರ್ವಹಿಸುತ್ತಿವೆ.
ಜತೆಗೆ ಇಂಟರ್‌ಸೆಪ್ಟರ್‌ಗಳು, ತಪಾಸಣೆ ತಂಡ ಸಹ ಸವಾರರ ಮೇಲೆ ಹದ್ದಿನ ಕಣ್ಣಿಡಲಿದೆ. ಸಂಚಾರ ಉಲ್ಲಂಘನೆ ಮಾಡಿ, ತಪ್ಪಿಸಿಕೊಂಡರೂ ಪ್ರಕರಣ ಆನ್‌ಲೈನ್‌ನಲ್ಲಿ ದಾಖಲಾಗಿ, ನೇರ ಮನೆಗೆ ನೋಟಿಸ್ ಬರಲಿದೆ. ವಾಹನದ ಆರ್.ಸಿ. ದಾಖಲಾತಿಯೊಂದಿಗೆ ಸೇರ್ಪಡೆಗೊಳ್ಳಲಿದೆ. ಮುಂದೆ ಮತ್ತೆ ಉಲ್ಲಂಘನೆ ಮಾಡಿ ಸಿಕ್ಕಿಬಿದ್ದಾಗ ಹಳೆಯ ಪ್ರಕರಣ ಸೇರಿ ದಂಡ ಕಟ್ಟಬೇಕಿದೆ.
ಪಾರ್ಕಿಂಗ್ ಹಾವಳಿಗೂ ಕಡಿವಾಣ: ಪಟ್ಟಣದಲ್ಲಿ ಪ್ರಮುಖವಾಗಿ ಪಾರ್ಕಿಂಗ್ ಸಮಸ್ಯೆ ಯಥೇಚ್ಚವಾಗಿ ಕಾಡುತ್ತಿದೆ. ಎಂ.ಜಿ.ರಸ್ತೆ, ಜೆಸಿ ರಸ್ತೆ ಸೇರಿದಂತೆ ಬೆಂಗಳೂರು- ಮೈಸೂರು ಹೆದ್ದಾರಿ ಅಕ್ಕಪಕ್ಕದಲ್ಲಿ ಎಲ್ಲೆಂದರಲ್ಲಿ ಪಾರ್ಕಿಂಗ್ ಮಾಡಲಾಗುತ್ತಿದೆ. ಈಗಾಗಲೇ ಪ್ರಮುಖ ರಸ್ತೆಗಳಲ್ಲಿ ದಿನಗಳನ್ನು ನಿಗದಿಪಡಿಸಿ, ಏಕಮುಖ ಪಾರ್ಕಿಂಗ್ ಜಾರಿಯಲ್ಲಿದ್ದರೂ ಸಮರ್ಪಕವಾಗಿ ಅನುಷ್ಠಾನವಾಗುತ್ತಿಲ್ಲ. ಇದಕ್ಕೂ ಸಹ ಮುಂದಿನ ದಿನಗಳಲ್ಲಿ ಕಡಿವಾಣ ಬೀಳಲಿದೆ.
ಎಷ್ಟಿದೆ ದಂಡ?: ಹೆಲ್ಮೆಟ್ ಧರಿಸದೇ ಚಾಲನೆ ಮಾಡಿದರೆ 500 ರೂ., 2ನೇ ಬಾರಿಗೆ 1000 ರೂ., ಎದುರು ರಸ್ತೆಯಲ್ಲಿ ಚಾಲನೆ ಮಾಡಿದರೆ 500 ರೂ., 2ನೇ ಬಾರಿಗೆ 1000 ರೂ. ನೋ ಪಾರ್ಕಿಂಗ್ ಸ್ಥಳದಲ್ಲಿ ನಿಲುಗಡೆ ಮಾಡಿದರೆ 500 ರೂ., 2ನೇ ಬಾರಿಗೆ 1000 ರೂ. ಇವೆಲ್ಲವೂ ಮುಂದುವರಿದರೆ ಚಾಲನಾ ಪರವಾನಗಿ ರದ್ದುಪಡಿಸಲು ಶಿಫಾರಸ್ಸು ಮಾಡಲಾಗುವುದು ಎಂದು ಎಚ್ಚರಿಕೆ ನೀಡಲಾಗುತ್ತಿದೆ.
ಇನ್ನು ಸರಕು ಸಾಗಣೆ ವಾಹನಗಳಲ್ಲಿ ಪ್ರಯಾಣಿಕರ ಸಾಗಣೆ, ಆಟೋಗಳಲ್ಲಿ ಶಾಲಾ ಮಕ್ಕಳನ್ನು ಕರೆದೊ ಯ್ಯುವುದು. ಆಟೋಗಳಲ್ಲಿ ಹೆಚ್ಚು ಪ್ರಯಾಣಿಕರನ್ನು ಹಾಕುವುದು, ಆಟೋ ಚಾಲಕರು ಸಮವಸ್ತ್ರ ಧರಿಸದಿ ರುವುದು. ಶಾಲಾ ವಾಹನಗಳ ಚಾಲಕರು ನಿಯಮ ಪಾಲಿಸದಿರುವುದು ಹೀಗೆ ಎಲ್ಲಾ ರೀತಿಯ ನಿಯಮ ಗಳನ್ನು ಪಾಲಿಸದಿದ್ದರೆ ದಂಡ ವಿಧಿಸುವ ಜತೆಗೆ ಪರವಾನಗಿ ರದ್ದುಪಡಿಸಲು ಆರ್‌ಟಿಒಗೆ ಶಿಫಾರಸ್ಸು ಮಾಡಲು ಪೊಲೀಸರು ಸಜ್ಜುಗೊಂಡಿದ್ದಾರೆ.
● ಎಂ.ಶಿವಮಾದು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Ramnagar; ಹೊಸವರ್ಷದಂದೇ ಎರಡು ಪ್ರತ್ಯೇಕ ಅಪಘಾ*ತ: ಮೂವರ ಸಾ*ವು
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.