ಪೌಷ್ಟಿಕ ಆಹಾರ ಪದಾರ್ಥ ಹುಳುಗಳ ಪಾಲು
Team Udayavani, Jul 23, 2022, 1:08 PM IST
ಕನಕಪುರ: ಗರ್ಭಿಣಿ, ಬಾಣಂತಿಯರು ಮತ್ತು ಮಕ್ಕಳಿಗೆ ಆಹಾರ ವಾಗಬೇಕಿದ್ದ ಅಂಗನವಾಡಿ ಪೌಷ್ಟಿಕ ಆಹಾರ ಪದಾರ್ಥಗಳು ಹುಳುಗಳ ಪಾಲಾಗಿರುವುದು ಶಿಶು ಅಭಿವೃದ್ಧಿ ಇಲಾಖೆ ಅಧಿಕಾರಿಗಳ ಪರಿಶೀಲನೆ ವೇಳೆ ಬೆಳಕಿಗೆ ಬಂದಿದೆ.
ನಗರದ ಅಂಬೇಡ್ಕರ್ ನಗರದಲ್ಲಿರುವ ಅಂಗನವಾಡಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಅಂಗನವಾಡಿಗೆ ಬಾರದೆ ಗರ್ಭಿಣಿ, ಬಾಣಂತಿಯರು, ಮಕ್ಕಳಿಗೆ ಆಹಾರ ಪದಾರ್ಥ ವಿತರಣೆ ಮಾಡುತ್ತಿಲ್ಲ ಎಂಬ ದೂರಿನ ಮೇರೆಗೆ ಶಿಶು ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಪರಿಶೀಲನೆ ಮಾಡುವ ವೇಳೆ ಬೆಲ್ಲ, ಪುಷ್ಠಿ ಆಹಾರ ಪದಾರ್ಥಗಳ ಅವಧಿ ಮುಗಿದು ಹುಳುಗಳ ಪಾಲಾಗಿರುವುದು ಬೆಳಕಿಗೆ ಬಂದಿದೆ.
ಕಾಳ ಸಂತೆಯಲ್ಲಿ ಮಾರಾಟ: ಅಂಬೇಡ್ಕರ್ ನಗರದ ಅಂಗನವಾಡಿ ಕಾರ್ಯಕರ್ತೆ ಶಶಿಕಲಾ, ಸಹಾಯಕಿ ಚಿಕ್ಕಮ್ಮಣ್ಣಿ ಅವರು ಗರ್ಭಿಣಿ,ಬಾಣಂತಿಯರು ಮತ್ತು ಮಕ್ಕಳಿಗಾಗಿ ಸರ್ಕಾರನೀಡುತ್ತಿರುವ ಆಹಾರ ಪದಾರ್ಥಗಳನ್ನು ವಿತರಣೆ ಮಾಡದೆ, ಕಾಳಸಂತೆಯಲ್ಲಿ ಮಾರಾಟ ಮಾಡಿಕೊಳ್ಳುತ್ತಿದ್ದಾರೆ. ಸ್ವಂತಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಶಿಶು ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿ, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಕಳೆದ 15 ದಿನಗಳ ಹಿಂದೆ ಅಂಗನವಾಡಿ ಕಾರ್ಯಕರ್ತೆಶಶಿಕಲಾ, ಸಹಾಯಕಿ ಚಿಕ್ಕಮ್ಮಣ್ಣಿ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ವರದಿ ಸಲ್ಲಿಸಿದ್ದರು.ಆದರೆ, ಅಧಿಕಾರಿಗಳು ಈವರೆಗೆ ಯಾವುದೇಕ್ರಮಗಳನ್ನು ಕೈಗೊಂಡಿಲ್ಲ ಎಂಬ ಆರೋಪ ಕೇಳಿ ಬರುತ್ತಿದೆ.
ಸರಿಯಾಗಿ ಕಚೇರಿಗೂ ಬರುತ್ತಿಲ್ಲ: ಇತ್ತೀಚಿಗೆ ಗರ್ಭಿಣಿ, ಬಾಣಂತಿಯರಿಗೆ ಪೌಷ್ಟಿಕ ಆಹಾರ, ಮಕ್ಕಳಿಗೆ ಆಹಾರ ಪದಾರ್ಥಗಳನ್ನು ವಿತರಣೆ ಮಾಡುತ್ತಿಲ್ಲ. ಅಂಗನವಾಡಿ ಕಾರ್ಯರ್ತೆಯರು ಸರಿಯಾಗಿ ಕಚೇರಿಗೂ ಬರುತ್ತಿಲ್ಲ ಎಂಬ ಆರೋಪ ಕೇಳಿ ಬಂದಿತ್ತು. ಹೀಗಾಗಿ ಶಿಶು ಅಭಿವೃದ್ಧಿ ಇಲಾಖೆ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಾವೇರಮ್ಮ, ಮೇಲ್ವಿಚಾರಕಿ ವೀಣಾ ಅಂಗನವಾಡಿಗೆಭೇಟಿ ನೀಟಿ ಪರಿಶೀಲನೆ ನಡೆಸಿದರು. ಈ ವೇಳೆಆಹಾರ ಪದಾರ್ಥ ವಿತರಣೆ ಮಾಡದೆ ನಿರ್ಲಕ್ಷ್ಯ ವಹಿಸಿರುವುದು ಮತ್ತು ಕೆಲವು ಆಹಾರಪದಾರ್ಥಗಳನ್ನು ಸರಿಯಾಗಿ ದಾಸ್ತಾನು ಮಾಡದೆ ಹಾಳಾಗಿರುವುದು ಕಂಡು ಬಂದಿದೆ.
ಸೂಕ್ತ ಕ್ರಮಕ್ಕೆ ಮೇಲಧಿಕಾರಿಗಳಿಗೆ ವರದಿ:
ಈ ಹಿಂದೆಯೂ ಸಹ ಅಂಬೇಡ್ಕರ್ ನಗರದ ಅಂಗನವಾಡಿ ಕಾರ್ಯಕರ್ತೆಯರ ವಿರುದ್ಧ ದೂರುಗಳು ಕೇಳಿ ಬಂದಿದ್ದವು. ಕಳೆದ 15 ದಿನಗಳ ಹಿಂದೆ ಅಂಗನವಾಡಿ ಕಾರ್ಯಕರ್ತೆ ಶಶಿಕಲಾ, ಸಹಾಯಕಿ ಚಿಕ್ಕಮ್ಮಣ್ಣಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮೇಲಧಿಕಾರಿಗಳಿಗೆ ವರದಿ ನೀಡಿದ್ದೇವೆ. ಆದರೆ, ಮೇಲಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸಾರ್ವಜನಿಕರಿಂದ ದೂರುಗಳ ಬಂದ ಹಿನ್ನೆಲೆಯಲ್ಲಿ ಇಲಾಖೆ ಸಿಬ್ಬಂದಿ ಪರಿಶೀಲನೆ ವೇಳೆ ಅಂಗನವಾಡಿ ಕಾರ್ಯಕರ್ತೆಯರ ನಿರ್ಲಕ್ಷ್ಯದಿಂದ ಕೆಲ ಆಹಾರ ಪದಾರ್ಥಗಳು ಹಾಳಾಗಿವೆ. ಇದರ ವೆಚ್ಚವನ್ನು ಅವರ ಸಂಬಂಳದಲ್ಲೇ ವಸೂಲಿ ಮಾಡಿ, ಅರ್ಹರಿಗೆ ತಲುಪಿಸಲು ಕ್ರಮ ಕೈಗೊಳ್ಳುತ್ತೇವೆ. ಇಬ್ಬರಿಗೂ ನೋಟಿಸ್ ನೀಡಿ ಅವರನ್ನು ತಾತ್ಕಾಲಿಕವಾಗಿ ಬೇರೆಡೆಗೆ ನಿಯೋಜನೆ ಮಾಡಿದ್ದೇವೆ. ಇವರ ಮೇಲೆ ಸೂಕ್ತ ಕ್ರಮಕ್ಕೆ ಮೇಲಧಿಕಾರಿಗಳಿಗೆ ವರದಿ ನೀಡುತ್ತೇವೆ ಎಂದು ಪ್ರಭಾರ ಸಿಡಿಪಿಒ ಜೆ.ಆರ್.ದಿನೇಶ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.