ಬೇಡಿಕೆ ಈಡೇರಿಕೆಗೆ ಅಂಗನವಾಡಿ ನೌಕರರ ಪ್ರತಿಭಟನೆ


Team Udayavani, Nov 10, 2020, 3:29 PM IST

ಬೇಡಿಕೆ ಈಡೇರಿಕೆಗೆ ಅಂಗನವಾಡಿ ನೌಕರರ ಪ್ರತಿಭಟನೆ

ರಾಮನಗರ: 2020ರ ನೂತನ ಶಿಕ್ಷಣ ನೀತಿಯಿಂದ ಅಂಗನವಾಡಿ ಕೇಂದ್ರಗಳನ್ನು ರಕ್ಷಿಸಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ರಾಮನಗರ ತಾಲೂಕು ಸಮಿತಿಯ ಆಶ್ರಯದಲ್ಲಿ ಅಂಗನವಾಡಿ ನೌಕರರು ಮತ್ತು ಅಕ್ಷರದಾಸೋಹ ಕಾರ್ಯಕ್ರಮದ ಕಾರ್ಯಕರ್ತರು ನಗರದಲ್ಲಿ ಪ್ರತಿ ಭಟನೆ ನಡೆಸಿದರು.

ಇಲ್ಲಿನ ಜಿಲ್ಲಾ ಪಂಚಾಯ್ತಿ ಭವನದ ಆವರಣದಲ್ಲಿ ಧರಣಿ ಕುಳಿತ ಪ್ರತಿಭಟನಾಕಾರರು ನೂತನಶಿಕ್ಷಣನೀತಿ 2020ರಲ್ಲಿ ಅಂಗನವಾಡಿ ಕೇಂದ್ರಗಳನ್ನು ನಿರ್ಲಕ್ಷಿಸಲಾಗಿದೆ. ಅಂಗನವಾಡಿ ಕೇಂದ್ರಗಳನ್ನು ಉಳಿಸಿಕೊಳ್ಳಬೇಕು. ನೂತನ ಶಿಕ್ಷಣ ನೀತಿ ಜಾರಿ ಮಾಡುವಾಗ ರಾಜ್ಯ ಸರ್ಕಾರ ತನ್ನ ಶಾಲೆಗಳಲ್ಲಿ ಬಿಸಿಯೂಟ ಕಾರ್ಯಕ್ರಮವನ್ನು ಬಲಪಡಿಸಬೇಕು. ಹಾಲಿ ಇರುವ ಮಾದರಿಯನ್ನೇ ಮುಂದುವರೆಸ ಬೇಕು.ಕೇಂದ್ರೀಕೃತ ಅಡುಗೆ ವ್ಯವಸ್ಥೆ ಬೇಡ,ಖಾಸಗಿ ಸಂಸ್ಥೆಗಳಿಗೆ ಅಡುಗೆ ತಯಾರಿಕೆ ಹೊಣೆಗಾರಿಕೆ ಬೇಡ ಎಂದು ಆಗ್ರಹಿಸಿದರು.

ಪರಿಗಣಿಸಿ: ಬಿಸಿಯೂಟ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕು. ಬಿಸಿಯೂಟ ಸಿಬ್ಬಂದಿಯನ್ನು ನೇರವಾಗಿ ಶಿಕ್ಷಣ ಇಲಾಖೆಯಡಿಯಲ್ಲಿ ಮೇಲ್ವಿಚಾರಣೆ ಮಾಡಬೇಕು. ಪ್ರತಿ ಶಾಲೆಯಲ್ಲಿಕನಿಷ್ಠ ಇಬ್ಬರು ಅಡುಗೆ ಸಿಬ್ಬಂದಿ ನೇಮಕ ಮಾಡಬೇಕು. ಹಾಗೂ ನಿವೃತ್ತಿ ವೇತನ ಮತ್ತು ಆರೋಗ್ಯ ಸೌಲಭ್ಯ ವನ್ನು ಒದಗಿಸಬೇಕು. ಶಾಲೆಗಳಲ್ಲಿ ಬಿಸಿಯೂಟನೌಕರರಿಂದಲೇ ಶಾಲಾ ಸ್ವತ್ಛತೆ ಕೈತೋಟ ನಿರ್ವಹಣೆ, ಶಾಲಾ ಸಮಯದ ಗಂಟೆ ಬಾರಿಸುವುದು ಇನ್ನಿತರ ‌ ಕೆಲಸಕೊಡಬೇಕು ಎಂದು ಒತ್ತಾಯಿಸಿದರು.

26ರಂದು ಮುಷ್ಕರ: ಅಂಗನವಾಡಿ ನೌಕರರಿಗೆ ಮಾಸಿಕ 21 ಸಾವಿರ ರೂ. ಕನಿಷ್ಠ ವೇತನ ನೀಡಬೇಕು. ನೌಕರಿ ಕಾಯಂ ಮಾಡಬೇಕು. 2020 ನೂತನ ಶಿಕ್ಷಣ ನೀತಿಯಿಂದ ಅಂಗನವಾಡಿ ಕೇಂದ್ರಗಳನ್ನು ರಕ್ಷಿಸಬೇಕು.ಅಂಗನವಾಡಿ ಕೇಂದ್ರದಲ್ಲಿಯೇ ಶಾಲಾ ಪೂರ್ವ ಪ್ರಾಥಮಿಕ ಶಿಕ್ಷಣ ಕಡ್ಡಾಯಗೊಳಿಸಬೇಕು. ಪ್ರಾರಂಭಿಕ ಬಾಲ್ಯವ್ಯವಸ್ಥೆಯ ಪಾಲನೆ ಮತ್ತು ಶಿಕ್ಷಣ ಯನ್ನು ಉಚಿತವಾಗಿ ನೀಡಬೇಕು ಎಂದು ಆಗ್ರಹಿಸಿದರು. 26ರಂದು ಅಖೀಲ ಭಾರತ ಮುಷ್ಕರವನ್ನು ಹಮ್ಮಿ ಕೊಳ್ಳುವುದಾಗಿ ಪ್ರತಿಭಟನಾಕಾರರು ತಿಳಿಸಿದರು.

ಐಸಿಡಿಎಸ್‌ಗೆ ಪ್ರತ್ಯೇಕ ನಿರ್ದೇಶನಾಲಯವನ್ನು ರಚಿಸಬೇಕು. ರಾಜ್ಯದಲ್ಲಿ ಈಗಾಗಲೇ ನಿವೃತ್ತರಾದ ಅಂಗನವಾಡಿ ನೌಕರರಿಗೆ ಪಿಂಚಣಿ ನೀಡಬೇಕು. ಎನ್‌ಪಿಎಸ್‌ ವಂತಿಗೆಯನ್ನು ಶೇ.10ಕ್ಕೆ ಹೆಚ್ಚಿಸಬೇಕು ಎಂದು ಮುಷ್ಕರದಲ್ಲಿ ಸರ್ಕಾರಗಳನ್ನು ಆಗ್ರಹಿಸುವುದಾಗಿ ಪ್ರತಿಭಟನಾಕಾರರು ತಿಳಿಸಿದರು.

ಕಾರ್ಯಕರ್ತರ ಮನವಿಯನ್ನು ಜಿಲ್ಲಾ ಪಂಚಾಯ್ತಿಯ ಉಪ ಕಾರ್ಯದರ್ಶಿ ಉಮೇಶ್‌ ಸ್ವೀಕರಿಸಿದರು. ತದನಂತರ ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ತಮ್ಮ ಮನವಿಯನ್ನು ಜಿಲ್ಲಾಧಿಕಾರಿಗಳ ಆಡಲಿತ ಸಹಾಯಕ ವೆಂಕಟಾಚಲಪತಿಯವರಿಗೆ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಅಂಗನವಾಡಿ ನೌಕರರ ಸಂಘದ ತಾಲೂಕು ಅಧ್ಯಕ್ಷೆ ಪುಷ್ಪಲತಾ. ಪ್ರಧಾನ ಕಾರ್ಯದರ್ಶಿ ಜಯಲಕ್ಷ್ಮಮ್ಮ, ಬಿಸಿಯೂಟ ನೌಕರರ ಸಂಘದ ಅಧ್ಯಕ್ಷ ರೂಪಾಬಾಯಿ, ಪ್ರಧಾನ ಕಾರ್ಯದರ್ಶಿ ಸುಧಾ, ಕರ್ನಾಟಕ ಗ್ರಾಮಪಂಚಾಯತಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಪರಮಶಿವಯ್ಯ, ಸಿಐಟಿಯುರಾಜ್ಯಕಾರ್ಯದರ್ಶಿ ಬಿ.ವಿ.ರಾಘವೇಂದ್ರ ಭಾಗವಹಿಸಿದ್ದರು.

ಟಾಪ್ ನ್ಯೂಸ್

Congress is taking revenge by forming SIT: Araga Jnanendra

Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ

Maharashtra Election: Election officials checked Amit Shah’s bag

Maharashtra Election: ಅಮಿತ್‌ ಶಾ ಅವರ ಬ್ಯಾಗ್‌ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು

Anmol Buffalo: The price of this Buffalo weighing 1500 kg is Rs 23 crore!

Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!

13-BBK-11

BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ

Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್‌ ಗೆ 10 ಕೋಟಿ ರೂಪಾಯಿ ಪಂಗನಾಮ!

Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್‌ ಗೆ 10 ಕೋಟಿ ರೂಪಾಯಿ ಪಂಗನಾಮ!

12-gundya

Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು

ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಲ್ಕರ್ ಹತ್ಯೆ ಆರೋಪಿ: ಮೂಲಗಳು

Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yogeshwar

C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!

CM-Ramanagara

By Election: ದೇವೇಗೌಡರನ್ನು 1994ರಲ್ಲಿ ಮುಖ್ಯಮಂತ್ರಿ ಮಾಡಿದ್ದೇ ನಾನು: ಸಿಎಂ ಸಿದ್ದರಾಮಯ್ಯ

Ramanagara: ಆರು ಟ್ರಾನ್ಸ್‌‌ ಫಾರ್ಮರ್ ಗಳ ಕಳವು

Ramanagara: ಆರು ಟ್ರಾನ್ಸ್‌‌ ಫಾರ್ಮರ್ ಗಳ ಕಳವು

HDD-Gowda

Congress Government: ಉಪಚುನಾವಣೆ ಬಳಿಕ ಗೃಹಲಕ್ಷ್ಮಿ ಸ್ಥಗಿತ: ಎಚ್‌.ಡಿ.ದೇವೇಗೌಡ ಭವಿಷ್ಯ

Nikhil-CPY

By Election: ಗದ್ದುಗೆ ಸೈನಿಕ ಯೋಗೇಶ್ವರ್‌ಗೋ? ನಿಖಿಲ್‌ ಕುಮಾರಸ್ವಾಮಿಗೋ?

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

9

Anandapura: ಸಾಲ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ

Congress is taking revenge by forming SIT: Araga Jnanendra

Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ

Organ Donation: ಸಾವಿನ ನಂತರವೂ ನೆರವಾದ ಜೀವ

Organ Donation: ಸಾವಿನ ನಂತರವೂ ನೆರವಾದ ಜೀವ

Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ

Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ

Maharashtra Election: Election officials checked Amit Shah’s bag

Maharashtra Election: ಅಮಿತ್‌ ಶಾ ಅವರ ಬ್ಯಾಗ್‌ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.