ಜೆಡಿಎಸ್ ಕಾರ್ಯಕರ್ತರೊಂದಿಗೆ ಅನಿತಾ ಕುಮಾರಸ್ವಾಮಿ ಚರ್ಚೆ
Team Udayavani, Oct 21, 2018, 11:34 AM IST
ರಾಮನಗರ: ನ.3ರಂದು ನಡೆಯುವ ರಾಮನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಅನಿತಾ ಕುಮಾರಸ್ವಾಮಿ ಶನಿವಾರ ನಗರದ ವಾರ್ಡುವಾರು ಪ್ರಮುಖ ಕಾರ್ಯಕರ್ತರುಗಳೊಡನೆ ಸಮಾಲೋಚನೆ ನಡೆಸಿದರು. ನಗರವ್ಯಾಪ್ತಿಯಲ್ಲಿ ತಮಗೆ ಗರೀಷ್ಠ ಮತಗಳು ಲಭ್ಯವಾಗುವಂತೆ ಮತದಾರರ ಮನವೊಲಿಸುವಂತೆ ಕಾರ್ಯಕರ್ತರಲ್ಲಿ ಮನವಿ ಮಾಡಿದರು.
ನಗರದ ಹೊರವಲಯದಲ್ಲಿರುವ ಹಿಲ್ ವ್ಯೂ ರೆಸಾರ್ಟ್‌ನಲ್ಲಿ ನಡೆದ ಸಮಾಲೋಚನಾ ಸಭೆಯಲ್ಲಿ ಅವರು ನಗರದ 31 ವಾರ್ಡುಗಳ ಪ್ರಮುಖ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದರು. ಸಾರ್ವತ್ರಿಕ ಚುನಾವಣೆಯಲ್ಲಿ ಪಕ್ಷಕ್ಕೆ ಲಭಿಸಿದ ಮತಗಳೆಷ್ಟು, ಎದುರಿಸದ ಸಮಸ್ಯೆಗಳು ಹಾಲಿ ಇರುವ ಸಮಸ್ಯೆಗಳು ಹೀಗೆ ವಿವಿಧ ವಿಚಾರಗಳಲಿ ಮಾಹಿತಿ ಸಂಗ್ರಹಿಸಿದರು.
ಸಾರ್ವತ್ರಿಕ ಚುನಾವಣೆಯಲ್ಲಿ ನಗರವ್ಯಾಪ್ತಿಯಲ್ಲಿ ಪಕ್ಷದ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಕಡಿಮೆ ಮತಗಳು ಲಭ್ಯವಾದ ಹಿನ್ನೆಲೆಯಲ್ಲಿ ಅವರು ವಿಶೇಷ ಕಾಳಜಿವಹಿಸಿದ್ದರು ಎಂದು ಗೊತ್ತಾಗಿದೆ. ನಗರ ವ್ಯಾಪ್ತಿಯಲ್ಲಿ ಈ ಬಾರಿ ತಮಗೆ ಹೆಚ್ಚು ಮತಗಳು ಲಭ್ಯವಾಗಬೇಕು ಎಂದು ಕಾರ್ಯಕರ್ತರಿಗೆ ಸೂಚನೆ ಕೊಟ್ಟಿರುವುದಾಗಿ ಪಕ್ಷದ ಮೂಲಗಳು ತಿಳಿಸಿವೆ.
ಕಾಂಗ್ರೆಸ್‌ನವರೊಂದಿಗೆ ಜೊತೆಗೂಡಿ ಪ್ರಚಾರ ಮಾಡಲು ಸಲಹೆ: ಸಮಾಲೋಚನೆ ವೇಳೆ ಕೆಲವು ವಾರ್ಡುಗಳ ಕಾರ್ಯಕರ್ತರು ತಮ್ಮ ನಾಯಕರ ವಿರುದ್ಧ ಹರಿಹಾಯ್ದಿದ್ದಾರೆ ಎಂದು ಗೊತ್ತಾಗಿದೆ. ಕೆಲವರನ್ನು ಬದಲಾಯಿಸುವಂತೆಯೂ ಮನವಿ ಮಾಡಿಕೊಂಡಿದ್ದಾರೆ. ವಿಶೇಷವಾಗಿ ಸಂಪನ್ಮೂಲ ವಿಚಾರದಲ್ಲಿ ಬಹಳಷ್ಟು ಕಾರ್ಯಕರ್ತರು ತಮ್ಮ ನೋವು ತೋಡಿಕೊಂಡಿದ್ದಾರೆ.
ಇವೆಲ್ಲ ಸಮಸ್ಯೆಗಳಿಗೂ ಪರಿಹಾರ ಸಿಗಲಿದೆ ಎಂದು ಭರವಸೆ ಕೊಟ್ಟ ಅನಿತಾ ಕುಮಾರಸ್ವಾಮಿ ಪ್ರಚಾರದ ವೇಳೆ ಕಾಂಗ್ರೆಸ್ ಕಾರ್ಯಕರ್ತರನ್ನು ಜೊತೆಗೆ ಕರೆದುಕೊಳ್ಳಿ ಎಂದು ಸಲಹೆ ಕೊಟ್ಟಿದ್ದಾರೆ. ತಾವು ಮೈತ್ರಿ ಅಭ್ಯರ್ಥಿಯಾಗಿದ್ದು, ಪ್ರಚಾರದಲ್ಲಿ ಕಾಂಗ್ರೆಸ್ ಮುಖಂಡರು ಸಹ ಭಾಗವಹಿಸಲಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಇದ್ದ ಗೊಂದಲಗಳು ನಿವಾರಣೆ ಆಗಿವೆ. ಸೋಮವಾರ ಅಧಿಕೃತವಾಗಿ ಪ್ರಚಾರ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ.
ಕಾರ್ಯಕರ್ತರೊಡನೆ ನಡೆದ ಸಭೆಯ ವೇಳೆ ರಾಜ್ಯ ಜೆಡಿಎಸ್‌ನ ಬೂತ್ ಸಮಿತಿ ಅಧ್ಯಕ್ಷ ಸುರೇಶ್ ಬಾಬು, ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಚ್.ಎಂ.ಕೃಷ್ಣಮೂರ್ತಿ, ರಾಜ್ಯ ವಕ್ತಾರ ಬಿ.ಉಮೇಶ್, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಅಶೋಕ್ ಕುಮಾರ್, ತಾಲೂಕು ಜೆಡಿಎಸ್ ಅಧ್ಯಕ್ಷ ರಾಜಶೇಖರ್, ಜಿಲ್ಲಾ ಯುವ ಜೆಡಿಎಸ್ ಅಧ್ಯಕ್ಷ ಎಚ್.ಸಿ.ರಾಜು, ನಗರಸಭಾ ಸದಸ್ಯ ಪರ್ವಿಜ್ ಪಾಷ, ಮಾಜಿ ಅಧ್ಯಕ್ಷ ಸಾಬಾನ್ ಸಾಬ್, ಪ್ರಮುಖರಾದ ಭಾಸ್ಕರ್ ಮುಂತಾದವರು ಹಾಜರಿದ್ದರು.
ಎಚ್.ಡಿ.ಕೆ. ಮತ್ತು ಡಿ.ಕೆ.ಶಿ ಜಂಟಿ ಪ್ರಚಾರ: ಕಾರ್ಯಕರ್ತರ ಸಮಾಲೋಚನಾ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮೈತ್ರಿ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ, ಅಕ್ಟೋಬರ್ 22ರಿಂದ ಕ್ಷೇತ್ರದಲ್ಲಿ ಪ್ರಚಾರ ಆರಂಭಿಸುವುದಾಗಿ, ಸಿಎಂ ಎಚ್.ಡಿ.ಕುಮಾರಸ್ವಾಮಿ. ಸಚಿವ ಡಿ.ಕೆ.ಶಿವಕುಮಾರ್, ಸಂಸದ ಡಿ.ಕೆ.ಸುರೇಶ್ ಸಹ ಪ್ರಚಾರ ಸಭೆಗಳಲ್ಲಿ ಭಾಗವಹಿಸಲಿದ್ದಾರೆ ಎಂದರು.
ಸಾರ್ವತ್ರಿಕ ಚುನಾವಣೆಯಲ್ಲಿ ನಗರವ್ಯಾಪ್ತಿಯಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಸ್ಪಲ್ಪ ಮಟ್ಟಿಗೆ ಮತಗಳಿಕೆಯಲ್ಲಿ ಹಿನ್ನಡೆಯಾಗಿತ್ತು. ಈ ಬಾರಿ ಚುನಾವಣೆ ವಿಭಿನ್ನ ಸನ್ನಿವೇಶದಲ್ಲಿ ನಡೆಯುತ್ತಿರುವುದರಿಂದ ಈ ಬಾರಿ ಅಧಿಕ ಮತಗಳಿಸುವ ವಿಶ್ವಾಸ ವ್ಯಕ್ತಪಡಿಸಿದರು. ಎರಡು ದಶಕಗಳಿಂದ ತಮ್ಮ ಕುಟುಂಬಕ್ಕೂ ರಾಮನಗರದ ಮತದಾರರಿಗೂ ಅವಿನಾಭಾವ ಸಂಬಂಧವಿದೆ.
ಎಚ್.ಡಿ.ಕುಮಾರಸ್ವಾಮಿ ಅವರನ್ನು ತಮ್ಮ ಮನೆ ಮಗನಂತೆ ಇಲ್ಲಿನ ಜನ ಕಾಣುತ್ತಿದ್ದಾರೆ. ಕ್ಷೇತ್ರದ ಮತದಾರರು ತಮ್ಮನ್ನು ಮನೆ ಮಗಳಂತೆ ಸ್ವೀಕರಿಸುವ ವಿಶ್ವಾಸ ವ್ಯಕ್ತಪಡಿಸಿದರು. ರಾಜಕೀಯ ಪಕ್ಷ ಎಂದ ಮೇಲೆ ಸಣ್ಣಪುಟ್ಟ ಸಮಸ್ಯೆಗಳು ಸಹಜ, ಅದನ್ನೇ ದೊಡ್ಡದು ಮಾಡಬೇಡಿ ಎಂದು ಮಾಧ್ಯಮಗಳಿಗೆ ಸಲಹೆ ನೀಡಿದರು. ಭಾನುವಾರ ನಡೆಯುವ ಕಾಂಗ್ರೆಸ್ ಕಾರ್ಯಕರ್ತರೊಂದಿಗಿನ ಸಭೆಗೂ ಮಾಧ್ಯಮದವರಿಗೆ ಪ್ರವೇಶವಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nikhil Kumarswamy: ಸೋತ ನಿಖಿಲ್‌ಗೆ ಜಿಲ್ಲೆಯ ಪಕ್ಷ ಸಂಘಟನೆ ಹೊಣೆ
Ramanagara: ಆಸ್ಪತ್ರೆಯ ಶೌಚಾಲಯದ ಗುಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ!
Channapatna: ಸ್ಮಶಾನಕ್ಕೆ ಜಾಗ ಬೇಕೆಂದು ತಾಲೂಕು ಕಚೇರಿಯೆದುರು ಶವವಿಟ್ಟು ಪ್ರತಿಭಟನೆ
Teacher: ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
Road Mishap: ಬಸ್-ಕಾರು ನಡುವೆ ಡಿಕ್ಕಿ; ಮೂವರ ಸಾವು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.