ಬಮೂಲ್ ಚುನಾವಣೆ: ಕಣದಲ್ಲಿ 9 ಅಭ್ಯರ್ಥಿಗಳು

ಕೆಎಂಎಫ್ ಅಧ್ಯಕ್ಷರಿಗೆ ಎಂ.ಶಿವಲಿಂಗಪ್ಪ ಪೈಪೋಟಿ ಕನಕಪುರ ಮತಕ್ಷೇತ್ರದಿಂದ ಅವಿರೋಧ ಆಯ್ಕೆ

Team Udayavani, May 8, 2019, 4:19 PM IST

ramanagar-tdy-3..

ರಾಮನಗರ: ಮೇ 12ರಂದು ಬೆಂಗಳೂರು ಸಹಕಾರಿ ಹಾಲು ಒಕ್ಕೂಟದ ಆಡಳಿತ ಮಂಡಳಿಯ (ಬಮೂಲ್) 13 ನಿರ್ದೇಶಕ ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಅಖಾಡ ಸಿದ್ದವಾಗಿದೆ. ರಾಮನಗರ ಜಿಲ್ಲೆಯಿಂದ 5 ನಿರ್ದೇಶಕರು ಆಯ್ಕೆಯಾಗಬೇಕಾಗಿದೆ. ಕನಕಪುರ ಮತಕ್ಷೇತ್ರದಿಂದ ಎಚ್.ಪಿ. ರಾಜಕುಮಾರ್‌ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಹೀಗಾಗಿ ಜಿಲ್ಲೆಯ 5 ಕ್ಷೇತ್ರಗಳ ಪೈಕಿ 4 ಮತಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ಮೇ 6ರ ಸೋಮವಾರ ಕೊನೆಯ ದಿನವಾಗಿತ್ತು.4 ಮತ ಕ್ಷೇತ್ರಗಳಲ್ಲಿ ಇದೀಗ 9 ಅಭ್ಯರ್ಥಿಗಳು ಅಂತಿಮ ಕಣದಲ್ಲಿದ್ದಾರೆ. ಮಾಗಡಿ ಕ್ಷೇತ್ರದಿಂದ ಸ್ಪರ್ಧೆ ಬಯಸಿದ್ದ ಎಚ್.ಎನ್‌.ಅಶೋಕ್‌ ನಾಮಪತ್ರ ತಿರಸ್ಕೃತವಾಗಿದೆ. ಜಿಲ್ಲೆಯಲ್ಲಿ ರಾಮನಗರ ಕ್ಷೇತ್ರದಿಂದ 2 ಅಭ್ಯರ್ಥಿಗಳು, ಚನ್ನಪಟ್ಟಣ ಕ್ಷೇತ್ರದಿಂದ 2 ಅಭ್ಯರ್ಥಿಗಳು, ಮಾಗಡಿ ಕ್ಷೇತ್ರದಿಂದ 3 ಅಭ್ಯರ್ಥಿಗಳು, ಕುದೂರು ಕ್ಷೇತ್ರದಿಂದ 2 ಅಭ್ಯರ್ಥಿಗಳು ಸ್ಪರ್ಧಾ ಕಣದಲ್ಲಿದ್ದಾರೆ.

ಕೆಎಂಎಫ್ ಅಧ್ಯಕ್ಷರಿಗೆ ಎಂ.ಶಿವಲಿಂಗಪ್ಪ ಪೈಪೋಟಿ: ರಾಮನಗರ ಕ್ಷೇತ್ರದಿಂದ ಹಾಲಿ ನಿರ್ದೇಶಕ ಹಾಗೂ ಕೆಎಂಎಫ್ ಅಧ್ಯಕ್ಷ ಪಿ.ನಾಗರಾಜು ಮತ್ತು ಎಂ.ಶಿವಲಿಂಗಪ್ಪ ಕಣದಲ್ಲಿದ್ದಾರೆ. ಚನ್ನ ಪಟ್ಟಣ ಕ್ಷೇತ್ರದಿಂದ ಹಾಲಿ ನಿರ್ದೇಶಕ ಲಿಂಗೇಶ್‌ಕುಮಾರ್‌ ಮತ್ತು ಜಯಮುತ್ತು ನಡುವೆ ನೇರಹಣಾಹಣಿ ನಡೆಯಲಿದೆ. ಮಾಗಡಿ ಕ್ಷೇತ್ರದಿಂದ ಹಾಲಿ ನಿರ್ದೇಶಕ ನರಸಿಂಹಮೂರ್ತಿ ವಿರುದ್ದ ಕೃಷ್ಣಮೂರ್ತಿ ಮತ್ತು ಎನ್‌.ಮಂಜುನಾಥ್‌ ಕಣದಲ್ಲಿದ್ದಾರೆ. ಕುದೂರು ಕ್ಷೇತ್ರದಿಂದ ಮಂಜುನಾಥ್‌ ಮತ್ತು ರಾಜಣ್ಣ ಅವರುಗಳು ಅಂತಿಮವಾಗಿ ಸ್ಫರ್ದಾ ಕಣದಲ್ಲಿದ್ದಾರೆ.

ಬಮೂಲ್ ವ್ಯಪ್ತಿಯ ಮೂರು ಜಿಲ್ಲೆಗಳಲ್ಲಿ 13 ಕ್ಷೇತ್ರಗಳು: ಬೆಂಗಳೂರು ಸಹಕಾರಿ ಹಾಲು ಒಕ್ಕೂಟದ (ಬಮೂಲ್) ವ್ಯಾಪ್ತಿಗೆ ರಾಮನಗರ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳು ಒಳಪಡುತ್ತವೆ. ಒಟ್ಟು 13 ಮತಕ್ಷೇತ್ರಗಳಿಂದ ತಲಾ ಒಬ್ಬರು ನಿರ್ದೇಶಕರು ಆಯ್ಕೆಯಾಗಬೇಕಾಗಿದೆ. ಕನಕಪುರದಿಂದ ಎಚ್.ಪಿ.ರಾಜಕುಮಾರ್‌ ಮತ್ತು ಆನೇಕಲ್ ಕ್ಷೇತ್ರದಿಂದ ಬಿ.ಜೆ.ಆಂಜಿನಪ್ಪ ಈಗಾಗಲೆ ಅವಿರೋಧ ಆಯ್ಕೆಯಾಗಿದ್ದಾರೆ. ಒಟ್ಟು 11 ಮತಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ನಾಮಪತ್ರ ಸಲ್ಲಿಸಿದ್ದ 23 ಅಭ್ಯರ್ಥಿಗಳ ಪೈಕಿ 12 ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆಯನ್ನು ವಾಪಸ್ಸು ಪಡೆದಿದ್ದಾರೆ.

ರಾಮನಗರ ಜಿಲ್ಲೆಯಿಂದ ಹೊರತು ಪಡಿಸಿ ಉಳಿದ ಮತ ಕ್ಷೇತ್ರಗಳಲ್ಲಿ ಕಣದಲ್ಲಿರುವ ಅಭ್ಯರ್ಥಿ ಗಳ ವಿವರ ಇಲ್ಲಿದೆ:

ಬೆಂಗಳೂರು ನಗರ ಜಿಲ್ಲೆ: ಬೆಂಗಳೂರು ಉತ್ತರ ಮತಕ್ಷೇತ್ರ: ಕೆ.ಎಸ್‌.ಕೇಶವ ಮೂರ್ತಿ, ಡಿ.ಎಂ.ಮುನಿರಾಜು, ಬಿ.ಕೆ.ಮಂಜು. ಬೆಂಗಳೂರು ಪೂರ್ವ ಮತ ಕ್ಷೇತ್ರಳ ಬಿ.ಡಿ.ನಾಗಪ್ಪ, ಎಂ.ಮಂಜುನಾಥ್‌, ಬೆಂಗಳೂರು ದಕ್ಷಿಣ ಮತಕ್ಷೇತ್ರ: ಕುಮಾರ್‌.ಟಿ, ಪಂಚಲಿಂಗಯ್ಯ, ಎಚ್.ಎಸ್‌.ಹರೀಶ್‌ ಕುಮಾರ್‌.

ಬೆಂಗಳೂರು ಗ್ರಾಮಾಂತರ ಜಿಲ್ಲೆ: ಹೊಸಕೋಟೆ ಮತ ಕ್ಷೇತ್ರ: ಸಿ.ಮಂಜುನಾಥ್‌, ಎಚ್.ಎಸ್‌.ಶಶಿಧರ್‌, ದೇವನಹಳ್ಳಿ ಮತಕ್ಷೇತ್ರ: ಎಸ್‌.ಪಿ.ಮುನಿತಾಜು, ಬಿ.ಶ್ರೀನಿವಾಸ್‌. ನೆಲಮಂಗಲ ಮತ ಕ್ಷೇತ್ರ: ಎಂ.ಜಿ.ತಿಮ್ಮರಾಜು, ಜಿ.ಆರ್‌.ಭಾಸ್ಕರ್‌. ದೊಡ್ಡಬಳ್ಳಾಪುರ ಮತಕ್ಷೇತ್ರ: ಎಚ್.ಅಪ್ಪಯ್ಯ, ಆನಂದಕುಮಾರ್‌.

ಟಾಪ್ ನ್ಯೂಸ್

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

10-ramanagara

Ramanagara: ಕಾಡಾನೆ ದಾಳಿಗೆ ರೈತ ಬಲಿ

DOG (2)

Ramanagara:ನಾಯಿ ಜತೆ ಮೂವರ ಅನೈಸರ್ಗಿಕ ಲೈಂಗಿ*ಕ ಚಟುವಟಿಕೆ: ಓರ್ವ ಸೆರೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.