ಎಂಇಎಸ್ ನಿಷೇಧಿಸಲು: ವಾಟಾಳ್ ಆಗ್ರಹ
ಜ.30ರಂದು ರೈಲ್ ರೋಕೋ ಚಳವಳಿ: ವಾಟಾಳ್ ನಾಗರಾಜ್ ಮಾಹಿತಿ
Team Udayavani, Jan 28, 2021, 1:23 PM IST
ರಾಮನಗರ: ದೆಹಲಿಯಲ್ಲಿ ರೈತರ ಪ್ರತಿಭಟನೆ ವಿಕೋಪಕ್ಕೆ ಹೋಗಿದೆ. ಕೇಂದ್ರ ಸರ್ಕಾರದ ಗುಪ್ತಚರ ಇಲಾಖೆಯ ವೈಫಲ್ಯವಿದೆ. ಇದಕ್ಕೆ ಹೊಣೆ ಹೊತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿ, ಗೃಹಸಚಿವ ಅಮಿತ್ ಷಾ ರಾಜೀನಾಮೆ ನೀಡ ಬೇಕು ಎಂದು ಕನ್ನಡ ಚಳವಳಿ ಪಕ್ಷದ ವಾಟಾಳ್ ನಾಗರಾಜ್ ಆಗ್ರಹಿಸಿದರು.
ನಗರದ ಐಜೂರು ವೃತ್ತದಲ್ಲಿ ಎಂ.ಇ.ಎಸ್. ನಿಷೇಧಿಸುವಂತೆ ಮತ್ತು ಮರಾಠ ಅಭಿವೃದ್ಧಿ ಪ್ರಾಧಿಕಾರ ರದ್ದು ಪಡಿಸುವಂತೆ ನಡೆಸಿದ ಕಂಬಳಿ ಸತ್ಯಾಗ್ರಹದ ವೇಳೆ ಸುದ್ದಿಗಾರರೊಂದಿಗೆ ಮಾತ ನಾಡಿದರು. ರಾಷ್ಟ್ರಧ್ವಜ ಕಟ್ಟುತ್ತಿದ್ದ ಪವಿತ್ರವಾದ ಸ್ಥಳದಲ್ಲಿ ಅನ್ಯ ಧ್ವಜಗಳು ಹಾರಾಡಿವೆ. ರಾಷ್ಟ್ರ ಧ್ವಜಕ್ಕೆ ಅಪಮಾನ ಆಗಕೂಡದು. ರೈತರು ಪ್ರಮಾಣಿಕವಾಗಿ ಚಳವಳಿ ಮಾಡುತ್ತಿದ್ದಾರೆ.ಅವರನ್ನು ದಾರಿ ತಪ್ಪಿಸುವ ಹುನ್ನಾರ ನಡೆದಿದೆ.
ಈ ಘಟನೆ ಕುರಿತು ಉನ್ನತ ಮಟ್ಟದ ತನಿಖೆ ಯಾಗಬೇಕು. ಧ್ವಜಕ್ಕೆ ಅಗೌರವ ತಂದ್ದಿರುವವರಿಗೆ ಶಿಕ್ಷೆಯಾಗಬೇಕು ಎಂದರು. ಈ ಬಗ್ಗೆ ಕೇಂದ್ರ ಗುಪ್ತಚರ ಇಲಾಖೆಗೆ ಮಾಹಿತಿ ಇರಬೇಕಿತ್ತು. ಇಲ್ಲಿ ಕೇಂದ್ರ ಸರ್ಕಾರದ ವೈಫಲ್ಯ ಎದ್ದು ಕಾಣುತ್ತಿದೆ ಎಂದು ಕಿಡಿಕಾರಿದರು.
ಎಂ.ಇ.ಎಸ್ ನಿಷೇಧಿಸಿ: ಬೆಳಗಾವಿಯಲ್ಲಿ ಎಂ.ಇ.ಎಸ್ ಇರುವ ತನಕ ಘೋರ ಅನ್ಯಾಯ ನಡೆಯುತ್ತಿರುತ್ತದೆ. ಮುಖ್ಯಮಂತ್ರಿಗಳು ತಕ್ಷಣ ಎಂ.ಇ.ಎಸ್ ಸಂಪೂರ್ಣವಾಗಿ ನಿಷೇಧ ಮಾಡಬೇಕು ಎಂದು ಆಗ್ರಹಿಸಿದರು.
ಜ.30 ರಂದು ಎಂ.ಇ.ಎಸ್ ನಿಷೇಧಕ್ಕೆ ಒತ್ತಾಯಿಸಿ ರಾಜ್ಯಾ ದ್ಯಂತ ರೈಲ್ ಬಂದ್ ಕಾರ್ಯ ಮಾಡಲಾಗುತ್ತದೆ. ಈ ವೇಳೆ ರಾಜ್ಯದ ಎಲ್ಲಾ ಕನ್ನಡ ಪರ ಹೋರಾಟಗಾರರು ಭಾಗವಹಿಸಬೇಕು ಎಂದು ಕರೆ ನೀಡಿದರು.
ಇದನ್ನೂ ಓದಿ: ಹಳ್ಳಿಹಕ್ಕಿ ‘ಸಚಿವ’ ಆಸೆಗೆ ತಣ್ಣೀರೆರಚಿದ ಕೋರ್ಟ್: ಹೈಕೋರ್ಟ್ ತೀರ್ಪು ಎತ್ತಿಹಿಡಿದ ಸುಪ್ರೀಂ
ಬೆಂಗಳೂರಿನಲ್ಲಿ ನಡೆಯಲಿರುವ ಏರ್ ಷೋಗೆ ವಿವಿಧ ರಾಜ್ಯಗಳಿಂದ ಹಲವು ಮಂದಿ ಭಾಗವಹಿಸಲಿದ್ದಾರೆ. ಕೋವಿಡ್ ಇರುವ ಕಾರಣಕ್ಕೆ ಏರ್ ಷೋ ಕಾರ್ಯಕ್ರಮವನ್ನು ಮುಂದೂಡಬೇಕು. ಮಂಗಳವಾರ ರಾಜ್ಯಪಾಲರ ಗಣರಾಜ್ಯೋತ್ಸವದ ಭಾಷಣ ಮಾಡುವ ವೇಳೆ ಕೋವಿಡ್ ಕೊನೆಯ ಹಂತದಲ್ಲಿ ಇದ್ದು, ಗಂಭೀರವಾಗಿರಲು ತಿಳಿಸಿದ್ದಾರೆ.
ಇಂತಹ ಸಮಯದಲ್ಲಿ ಏರ್ ಷೋ ಆಯೋಜನೆ ಮಾಡುವುದು ತಪ್ಪಾಗುತ್ತದೆ ಎಂದು ಹೇಳಿದರು. ತಾಳವಾಡಿಯನ್ನು ಕರ್ನಾಟಕಕ್ಕೆ ಸೇರಿಸಿಕೊಳ್ಳ ಬೇಕು ಎಂದು ವಾಟಾಳ್ ನಾಗರಾಜ್ ಸರ್ಕಾರವನ್ನು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Fraud: “ವಿಡಿಯೋಗೆ ಲೈಕ್ ನೀಡಿ’ 13.97 ಲಕ್ಷ ಕಳೆದುಕೊಂಡರು!
C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!
By Election: ದೇವೇಗೌಡರನ್ನು 1994ರಲ್ಲಿ ಮುಖ್ಯಮಂತ್ರಿ ಮಾಡಿದ್ದೇ ನಾನು: ಸಿಎಂ ಸಿದ್ದರಾಮಯ್ಯ
Ramanagara: ಆರು ಟ್ರಾನ್ಸ್ ಫಾರ್ಮರ್ ಗಳ ಕಳವು
MUST WATCH
ಹೊಸ ಸೇರ್ಪಡೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.