ಮಳೆಹಾನಿ ಸಮಸ್ಯೆ ಎದುರಿಸಲು ಸನ್ನದ್ಧರಾಗಿರಿ
Team Udayavani, Jul 29, 2023, 2:54 PM IST
ರಾಮನಗರ: ಮುಂಗಾರು ಹಂಗಾಮು ಆರಂಭಗೊಂಡಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಇಲಾಖೆ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ನಿರ್ವಹಿಸಬೇಕು. ತುರ್ತು ಪರಿಸ್ಥಿತಿಯನ್ನು ಎದುರಿಸಲು ಸನ್ನದ್ಧವಾಗಿರಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ.ರಶ್ಮಿ ಮಹೇಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಪಂ ಸಭಾಂಗಣದಲ್ಲಿ ಕಂದಾಯ ವಿಷಯಗಳು ಹಾಗೂ ಮುಂಗಾರು ಹಂಗಾಮಿನ ಹವಾಮಾನ ಅವಲೋಕನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿರುವ ತಗ್ಗು ಪ್ರದೇಶದ ಮನೆಗಳಿಗೆ ಎಚ್ಚರಿಕೆ ನೀಡಬೇಕು. ಚರಂಡಿ, ಚಾನಲ್‌ಗಳು ಸರಾಗವಾಗಿ ಮಳೆನೀರು ಹರಿದು ಹೋಗುವಂತೆ ಪರಿಶೀಲನೆ ಮಾಡಬೇಕು. ಯಾವುದೇ ದುರಸ್ತಿಯಿದ್ದಲ್ಲಿ ಪರಿಶೀಲಿಸಿ ದುರಸ್ತಿಗೆ ಅಗತ್ಯ ಕ್ರಮವಹಿಸಬೇಕು ಎಂದರು.
ಜಿಲ್ಲೆಯಲ್ಲಿ ಈ ಹಿಂದೆ ಭಾರೀ ಮಳೆ ಹಾಗೂ ನೆರೆ ಹಾವಳಿಯಿಂದ ಬಹಳಷ್ಟು ತೊಂದರೆ ಯಾಗಿದ್ದ ಪ್ರದೇಶಗಳನ್ನು ಖುದ್ದು ಭೇಟಿ ನೀಡಿ ಪರಿಶೀಲಿಸಿ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳುವಂತೆ ಹಾಗೂ ಮಳೆ ಹೆಚ್ಚು ಬೀಳುವ ಪ್ರದೇಶಗಳಲ್ಲಿ ಕಾಳಜಿ ಕೇಂದ್ರಗಳನ್ನು ತೆರೆಯಲು ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು, ಬೆಳೆ ನಷ್ಟ ಪರಿಹಾರಕ್ಕೆ ಇ-ಕೆವೈಸಿ ಯನ್ನು ಅಪ್‌ಲೋಡ್ ಮಾಡುವಾಗ ಡಾಟಾ ಎಂಟ್ರಿ ಆಪರೇಟರ್‌ಗಳು ತಪ್ಪಾಗಿ ನಮೂದಿಸಿದರೆ ಪರಿಹಾರ ಮೊತ್ತವು ಬೇರೆಯವರ ಖಾತೆಗೆ ಹೋಗುತ್ತದೆ. ಆದ್ದರಿಂದ, ಡಾಟಾ ಎಂಟ್ರಿ ಆಪರೇಟರ್‌ಗಳು ಸರಿ ಯಾಗಿ ಇ-ಕೆವೈಸಿಗಳನ್ನು ಅಪ್‌ಲೋಡ್ ಮಾಡಬೇಕು. ತಪ್ಪಾದರೆ ತಹಶೀಲ್ದಾರರು ಹಾಗೂ ಡಾಟಾ ಎಂಟ್ರಿ ಆಪರೇಟರ್‌ಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಜನರ ಸ್ಥಳಾಂತರಕ್ಕೆ ಮುನ್ನೆಚ್ಚರಿಕೆ ವಹಿಸಿ: ಮಂಚನಬೆಲೆ ಡ್ಯಾಂ ಸುತ್ತಮುತ್ತಲು ಹಾಗೂ ಅರ್ಕಾವತಿ ನದಿಯ ಪಾತ್ರಗಳಲ್ಲಿ ತೊಂದರೆಗೀ ಡಾಗುವ ಸನ್ನಿವೇಶ ಎದುರಾಗಬಹುದು. ಜನರ ಸ್ಥಳಾಂತರಕ್ಕೆ ಮುನ್ನೆಚ್ಚರಿಕೆ ವಹಿಸಬೇಕು.
ಪ್ರದೇಶಗಳಿಗೆ ಭೇಟಿ ನೀಡಿ: ಮುನ್ನೆಚ್ಚರಿಕೆ ವಹಿಸದೆ ಹೋದರೆ ಪರಿಸ್ಥಿತಿ ನಿಯಂತ್ರಣ ಅಸಾಧ್ಯ. ಯಾವುದೇ ಸಿದ್ಧತೆ ಮಾಡಿಕೊಳ್ಳದೆ ನಿರ್ಲಕ್ಷ್ಯ ವಹಿಸುವಂತಹ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವುದಾಗಿ ಖಡಕ್ ಸೂಚನೆ ನೀಡಿದರು.
ಸಭೆಗೂ ಮುನ್ನ ಕಳೆದ ಸಾಲಿನಲ್ಲಿ ಪ್ರವಾಹ ಪೀಡಿತವಾದ ಭಕ್ಷೀಕೆರೆ ಮತ್ತು ಗೌಸಿಯಾ ನಗರ ಬಳಿ ಇರುವ ಕಾಲುವೆ ಸೇರಿದಂತೆ ಹಲವು ಪ್ರದೇಶಗಳಿಗೆ ಭೇಟಿ ನೀಡಿ, ಪರಿಶೀಲಿಸಿದರು.
ಜಿಲ್ಲಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂ ದ್ರನ್, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದಿಗ್ವಿಜಯ್ ಬೋಡೆR, ಅಪರ ಜಿಲ್ಲಾಧಿಕಾರಿ ಶಿವಾನಂದ ಮೂರ್ತಿ ಹಾಗೂ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.