
ಶೀಘ್ರ ರಸ್ತೆ ಕಾಮಗಾರಿ ಆರಂಭ
Team Udayavani, Nov 8, 2019, 5:02 PM IST

ರಾಮನಗರ: ತಾಲೂಕಿನ ಬಿಡದಿ ಹೋಬಳಿಯ ಬನ್ನಿಕುಪ್ಪೆ ಗ್ರಾಪಂ ವ್ಯಾಪ್ತಿಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ಇದೇ ನ.11ರ ಸೋಮವಾರದಿಂದ ಆರಂಭವಾಗಲಿದೆ ಎಂದು ಲೋಕೋಪಯೋಗಿ ಇಲಾಖೆ ಅಧೀಕ್ಷಕ ದುರ್ಗಪ್ಪ ಭರವಸೆ ನೀಡಿದ್ದಾರೆ.
ಸೇತುವೆ ನಿರ್ಮಾಣ ಕಾಮಗಾರಿಗೆ 2019ರ ಮಾರ್ಚ್‌ನಲ್ಲಿ ಕಾರ್ಯಾದೇಶವಾಗಿದ್ದರೂ ಕಾಮಗಾರಿ ಆರಂಭವಾಗದ ಕಾರಣ ತಾಪಂ ಅಧ್ಯಕ್ಷ ಗಾಣಕಲ್ ನಟರಾಜ್ ನೇತೃತ್ವದಲ್ಲಿ ಗ್ರಾಮಸ್ಥರು ಪ್ರತಿಭಟನೆ ಹಾದಿ ಹಿಡಿಯಲಿದ್ದ ಹಿನ್ನೆಲೆಯಲ್ಲಿ ನಗರದ ಲೋಕೋಪಯೋಗಿ ಇಲಾಖೆಗೆ ಖುದ್ದು ಭೇಟಿ ಕೊಟ್ಟು ಅಧಿಕಾರಿಗಳ ಬಳಿ ಚರ್ಚೆ ನಡೆಸಿದರು. ನಂತರ ಎಂಎಲ್‌ಸಿ ಸಿ.ಎಂ. ಲಿಂಗಪ್ಪ , ತಾಪಂ ಅಧ್ಯಕ್ಷರು ಮತ್ತು ಭದ್ರಯ್ಯ ಕಾಲೋನಿಯ ಗ್ರಾಮಸ್ಥರಿಗೆ ಸೋಮವಾರದಿಂದ ಕಾಮಗಾರಿ ಆರಂಭವಾಗಲಿದೆ ಎಂದು ಭರವಸೆ ನೀಡಿದರು. ಈ ವೇಳೆ ಇಇ ಜಯಗೋಪಾಲ್ ಉಪಸ್ಥಿತರಿದ್ದರು.
ಕಾಮಗಾರಿ ಏನು?: ಬಿಡದಿ ಹೋಬಳಿ ಬನ್ನಿಕುಪ್ಪೆ (ಬಿ) ಗ್ರಾಪಂ ವ್ಯಾಪ್ತಿಗೆ ಸೇರಿದ ಗಾಣಕಲ್ ಗ್ರಾಮದಿಂದ ಮುತ್ತರಾಯನಗುಡಿ ಪಾಳ್ಯ ಸಂಪರ್ಕಿಸುವ ರಸ್ತೆ, ಬನ್ನಿಕುಪ್ಪೆ (ಬಿ) ಗ್ರಾಮದ ಶಾಲೆಯಿಂದ ಭದ್ರಯ್ಯ ಕಾಲೋನಿ ಮೂಲಕ ಮುತ್ತುರಾಯಗುಡಿಪಾಳ್ಯ ಸಂಪರ್ಕಿ ಸುವ ರಸ್ತೆ ಅಭಿವೃದ್ಧಿ ಕಾಮಗಾರಿ ಕಳೆದ ಆಗಸ್ಟ್ ನಲ್ಲೇ ಪೂರ್ಣಗೊಳ್ಳಬೇಕಾಗಿತ್ತು. ಆದರೆ ಗುತ್ತಿಗೆದಾರ ಕಾಮಗಾರಿ ಪೂರ್ಣ ಗೊಳಿಸು ವಲ್ಲಿ ವಿಫಲರಾಗಿದ್ದಾರೆ ಎಂಬುದು ಗ್ರಾಮಸ್ಥರ ದೂರಾಗಿತ್ತು.
ಕಾರ್ಯಾದೇಶವಾಗಿ 10 ತಿಂಗಳು ಕಳೆದರು ಕಾಮಗಾರಿ ಆರಂಭವಾಗದ ಹಿನ್ನೆಲೆಯಲ್ಲಿ ತಾಪಂ ಅಧ್ಯಕ್ಷ ಗಾಣಕಲ್ ನಟರಾಜು ಅವರು ಪದೇ ಪದೆ ಅಧಿಕಾರಿಗಳಿಗೆ ಮನವಿ ಮಾಡಿದ್ದರು. ಆದರೆ ಉಪಯೋಗವಾಗಿರಲಿಲ್ಲ. ಹೀಗಾಗಿ ಎಂಎಲ್‌ಸಿ ಸಿ.ಎಂ.ಲಿಂಗಪ್ಪ ಅವರ ಮೂಲಕ ಶಾಸಕ ಎ.ಮಂಜು ಅವರಿಗೆ ಮಾಹಿತಿ ತಲುಪಿಸಿ, ಇಲಾಖೆ ಹಿರಿಯ ಅಧಿಕಾರಿಗಳ ಗಮನ ಸೆಳೆದಿದ್ದರು. ಈ ಹಿನ್ನೆಲೆಯಲ್ಲಿ ಗುರುವಾರ ನಗರಕ್ಕೆ ಭೇಟಿ ನೀಡಿದ್ದ ಸೂಪರಿಂಟೆಂಡೆಂಟ್ ದುರ್ಗಪ್ಪ, ಅಧಿಕಾರಿಗಳೊಂದಿಗೆ ಚರ್ಚಿಸಿ ತಕ್ಷಣ ಕ್ರಮ ಕೈಗೊಳ್ಳೂವಂತೆ ಸೂಚನೆ ಕೊಟ್ಟಿದ್ದಾರೆ.
ಪ್ರತಿಭಟನೆ ಮುಂದೂಡಿಕೆ: ತಾಪಂ ಅಧ್ಯಕ್ಷ ಗಾಣಕಲ್ ನಟರಾಜು ಸುದ್ದಿಗಾರರೊಂದಿಗೆ ಮಾತನಾಡಿ, ಕಾಮಗಾರಿ ಆರಂಭಕ್ಕೆ ಕಾರ್ಯಾ ದೇಶವಾಗಿದ್ದರೂ, ಕಾಮಗಾರಿ ಆರಂಭವಾಗಿ ರಲಿಲ್ಲ. ಮಾಚ್ 8ರಂದು ಇಲಾಖೆ ಗುತ್ತಿಗೆದಾರ ರವಿಶಂಕರ್ ಎಂಬುವರೊಂದಿಗೆ ಒಪ್ಪಂದ ಮಾಡಿಕೊಂಡು ಗುತ್ತಿಗೆ ನೀಡಿದೆ. 5 ತಿಂಗಳ ಅವಧಿಯಲ್ಲಿ ಅಂದರೆ ಆಗಸ್ಟ್‌ನಲ್ಲೇ ಕಾಮಗಾರಿ ಪೂರ್ಣವಾಗಬೇಕಿತ್ತು. ಆದರೆ ಕಾಮಗಾರಿಯೇ ಆರಂಭವಾಗಿರಲಿಲ್ಲ. ಹೀಗಾಗಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸುತ್ತಲೇ ಇದ್ದರು.
ಅಧಿಕಾರಿಗಳು ಗ್ರಾಮಸ್ಥರ ಒತ್ತಾಯಗಳನ್ನು ನಿರ್ಲಕ್ಷಿಸಿದ್ದರು ಎಂದು ಕಿಡಿಕಾರಿದರು. ಕಳೆದ ಲೋಕಸಭೆ ಚುನಾವಣೆ ವೇಳೆಯೂ ಭದ್ರಯ್ಯ ಕಾಲೋನಿ ಮತದಾ ರರು ಮತದಾನ ಮಾಡುವು ದಿಲ್ಲ ಎಂದು ಪಟ್ಟು ಹಿಡಿದಿದ್ದರು. ಅವರ ಮನವೊಲಿಸಿ ಮತದಾನಕ್ಕೆ ಅವಕಾಶ ಮಾಡಿಕೊಡಲಾಗಿತ್ತು ಎಂದರು.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Mangaluru: ಆನ್‌ಲೈನ್ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.