ಮಕ್ಕಳಿಗೆ ಪುಸ್ತಕ, ಊಟದ ಬಾಕ್ಸ್ ವಿತರಣೆ
Team Udayavani, Jan 27, 2021, 1:28 PM IST
ರಾಮನಗರ: ಸಮಾಜದ ಸಹೃದಯಿಗಳು ನೀಡುವ ಪಠ್ಯ ಪರಿಕರಗಳನ್ನು ಶಾಲಾ ಮಕ್ಕಳು ಸದ್ಬಳಕೆ ಮಾಡಿಕೊಂಡು ಶಿಕ್ಷಣದ ಜೊತೆಗೆ, ಉನ್ನತ ವ್ಯಕ್ತಿತ್ವವನ್ನು ಮೈಗೂಡಿಸಿಕೊಳ್ಳಬೇಕು ಎಂದು ವಕೀಲ ರಾಜಶೇಖರ ಹೇಳಿದರು.
72ನೇ ಗಣರಾಜ್ಯೋತ್ಸವದ ಅಂಗವಾಗಿ ಮಂಗಳವಾರ ಇಲ್ಲಿನ ಇರಳಿಗರ ಕಾಲೋನಿಯ ಬಳಿ ರಾಮಗಿರಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ 40ಕ್ಕೂ ಹೆಚ್ಚು ಮಕ್ಕಳಿಗೆ ಕನಕಪುರ ತಾಲೂಕು ಗಾಣಾಳು ಗ್ರಾಮದ ಮಾತೃಭೂಮಿ ಫೌಂಡೇಷನ್ ಮತ್ತು ಕಾನೂನುಜಾಗೃತಿ ಸಮಿತಿಯವರು ಪಠ್ಯ ಪರಿಕರ ಹಾಗೂ ಊಟದ ಬಾಕ್ಸ್ ಗಳನ್ನು ವಿತರಿಸಿ ಮಾತನಾಡಿದರು.
ಇದನ್ನೂ ಓದಿ:ರಿಂಗ್ ರಸ್ತೆ ಸ್ವತ್ಛತೆಗೆ ಆರು ತಂಡ ರಚನೆ
ಕೊರೊನಾ ಸಂಕಷ್ಟದ ನಡುವೆಯೂ ಹಲವು ಸಂಘ-ಸಂಸ್ಥೆಗಳು ಜನ ಕಲ್ಯಾಣ ಹಾಗೂ ಶೈಕ್ಷಣಿಕ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಸಾರ್ಥಕ ಕೆಲಸಗಳನ್ನು ಮಾಡುತ್ತಿವೆ. ಈ ನಿಟ್ಟಿನಲ್ಲಿ ಶಿಕ್ಷಕರು ಹಾಗೂ ಪೋಷಕರು ವಿದ್ಯಾರ್ಥಿಗಳಿಗೆ ನೀಡಿದ ಪರಿಕರಗಳನ್ನು ಸದುಪಯೋಗ ಮಾಡಿಕೊಳ್ಳುವಲ್ಲಿ ಮಕ್ಕಳಿಗೆ ನೆರವಾಗಬೇಕು ಎಂದು ಸಲಹೆ ನೀಡಿದರು.
ಮಾತೃಭೂಮಿ ಫೌಂಡೇಷನ್ ಮತ್ತು ಕಾನೂನು ಜಾಗೃತಿ ಸಮಿತಿ ಅಧ್ಯಕ್ಷ, ವಕೀಲ ಕೆ.ಲೋಕೇಶ್, ಶಾಲೆಯ ಮುಖ್ಯ ಶಿಕ್ಷಕಿ ಜಯಮ್ಮ ಹಾಗೂ ಮತ್ತಿತರರು ಮಾತನಾಡಿದರು. ಮುಖಂಡರಾದ ಸಿ.ಎಸ್.ಜಯಕುಮಾರ್, ಚಂದ್ರು, ನೀಲೇಶ್ ಜಾಧವ್, ಸಮಿತಿ ಪದಾಧಿಕಾರಿಗಳಾದ ಸತೀಶ್, ಮುತ್ತುರಾಜು, ಚಂದ್ರೇಶ್, ವಕೀಲರಾದ ನಾಗರಾಜು, ಮುರಳಿ, ಶಶಿ, ಮುರಳಿ ಮೋಹನ್, ಅನಿಲ ಕುಮಾರ್, ಪ್ರಶಾಂತ್, ಸಹ ಶಿಕ್ಷಕ ನಾಗರಾಜು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress Guarantee: ಗ್ಯಾರಂಟಿಗಳ ಹಂತ, ಹಂತವಾಗಿ ನಿಲ್ಲಿಸಲು ಡಿಸಿಎಂ ಪೀಠಿಕೆ: ಎಚ್‌ಡಿಕೆ
ByPoll: ಷಡ್ಯಂತ್ರದಿಂದ ಪೆಟ್ಟು ತಿಂದೆ…: ಪ್ರಚಾರದ ವೇಳೆ ಕಣ್ಣೀರಿಟ್ಟ ನಿಖಿಲ್ ಕುಮಾರಸ್ವಾಮಿ
Forest Land: ಎಚ್‌ಎಂಟಿ ಜಾಗಕ್ಕೆ ಸಚಿವ ಖಂಡ್ರೆ ಅತಿಕ್ರಮ ಪ್ರವೇಶ: ಎಚ್.ಡಿ.ಕುಮಾರಸ್ವಾಮಿ
Channapatna; ವೈನಾಡ್‌ನಿಂದ ಪ್ರಿಯಾಂಕಾ ಉಮೇದುವಾರಿಕೆ ಪ್ರಶ್ನಿಸಿದ ಕುಮಾರಸ್ವಾಮಿ
Chennapattana By Election: ಬೊಂಬೆನಗರಿಗೆ ಇದು ಮೂರನೇ ಬಾರಿ ಉಪ ಚುನಾವಣೆ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.