ಬಿಎಸ್‌ವೈ ಸರ್ಕಾರ ಶೀಘ್ರ ಪತನ
Team Udayavani, May 30, 2020, 6:59 AM IST
ಮಾಗಡಿ: ಮೂರು ತಿಂಗಳಲ್ಲಿ ಬಿಎಸ್‌ವೈ ಸರ್ಕಾರ ಪತನಗೊಳ್ಳಲಿದೆ ಎಂದು ಸಂಸದ ಡಿ.ಕೆ.ಸುರೇಶ್ ಭವಿಷ್ಯ ನುಡಿದರು. ಪಟ್ಟಣದ ಜೆಪಿ ಬಡಾವಣೆಯಲ್ಲಿ ಏರ್ಪಡಿಸಿದ್ದ ಕೆಪಿಸಿಸಿ ಪದಗ್ರಹಣ ಪೂರ್ವ ಸಿದತೆ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಬಿಜೆಪಿಯಲ್ಲಿ ಈಗಾಗಲೇ ಭಿನ್ನಮತ ಶುರುವಾಗಿದೆ.
ಬಿಎಸ್‌ವೈ ಸರ್ಕಾರದ ಆಯಸ್ಸು ಕಡಿಮೆಯಾಗಿದೆ. ಮೂರು ತಿಂಗಳೊಳಗೆ ಸರ್ಕಾರ ಪತನಗೊಳ್ಳುವುದರಲ್ಲಿ ಸಂಶಯವಿಲ್ಲ ಎಂದು ಹೇಳಿದರು. ಮುಂದಿನ ದಿನಗಳಲ್ಲಿ ಚುನಾವಣೆ ಬರಲಿದೆ. ಹೊಸ ಸರ್ಕಾರ ರಚನೆಯಾಗಲಿದ್ದು, ಕಾಂಗ್ರೆಸ್ ಕಾರ್ಯಕರ್ತರು ಸಂಘಟಿತರಾಗಬೇಕು. ಎಲ್ಲೆಡೆ ಜನಜಾಗೃತಿ ಮೂಡಿಸಬೇಕು. ಗ್ರಾಪಂಗಳಿಗೆ ಬಿಜೆಪಿ ನಾಮನಿರ್ದೇಶನ ಮಾಡಿದ್ದೇ ಆದರೆ ಉಗ್ರ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ.
ಮುಖ್ಯಮಂತ್ರಿಗಳು ಎಚ್ಚೆತ್ತು ನಾಮನಿರ್ದೇಶನ ಕೈಬಿಡಬೇಕು ಎಂದು ಎಚ್ಚರಿಕೆ ನೀಡಿದರು. ಮಾಜಿ ಶಾಸಕ ಎಚ್.ಸಿ.ಬಾಲಕೃಷ್ಣ, ಪಕ್ಷದ ವೀಕ್ಷಕ ಅನಿಲ್‌ಕುಮಾರ್, ಪಿಳ್ಳಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಿಗಳೂರು ಗಂಗಾಧರ್, ಗಾಣಕಲ್ ನಟರಾಜ್, ತಾಪಂ ಅಧ್ಯಕ್ಷ ನಾರಾಯಣಪ್ಪ, ಜೆ.ಪಿ. ಚಂದ್ರೇಗೌಡ, ಸಿ.ಜಯರಾಮ, ವಿಜಯಕುಮಾರ್, ಕಮಲಮ್ಮ,
ಎಂ.ಕೆ.ಧನಂಜಯ, ಎಚ್.ಎನ್. ಅಶೋಕ್, ಪುರಸಭೆ ಸದಸ್ಯ ಎಚ್.ಜೆ.ಪುರುಶೋತ್ತಮ್, ಎಚ್.ಆರ್.ಮಂಜುನಾಥ್,ತೋ.ವಿ.ಗಿರೀಶ್, ಬಿ.ಎಸ್.ಕುಮಾರ್,ವೆಂಕಟೇಶ್, ಧನಂಜಯ ನಾಯ್ಕ, ದೊಡ್ಡಿ ವಿಶ್ವನಾಥ್,ಬಾಲರಾಜು, ಶೇಖರ್, ಸುರೇಂದ್ರ,ಎಂ.ಆರ್.ಮಂಜುನಾಥ್, ಕಿರಣ್, ಇನಾಯಿತ್ ಉಲ್ಲಾ,ರಿಯಾಜ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.